AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಹೊಸ ವರ್ಷಾಚರಣೆ: ಆಪರೇಷನ್ ಆಘಾಟ್ 3.0 ಅಡಿಯಲ್ಲಿ 500ಕ್ಕೂ ಹೆಚ್ಚು ಜನರ ಬಂಧನ

ದೆಹಲಿ ಪೊಲೀಸರು ಹೊಸ ವರ್ಷಾಚರಣೆಗೆ ಭದ್ರತೆ ನೀಡಲು 'ಆಪರೇಷನ್ ಆಘಾಟ್ 3.0' ನಡೆಸಿದ್ದಾರೆ. ಅಪರಾಧ ತಡೆಗಟ್ಟುವ ಉದ್ದೇಶದಿಂದ ರಾತ್ರಿಯಿಡೀ ನಡೆದ ಕಾರ್ಯಾಚರಣೆಯಲ್ಲಿ 500ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. 21 ಅಕ್ರಮ ಶಸ್ತ್ರಾಸ್ತ್ರಗಳು, 7 ಕೆ.ಜಿ. ಗಾಂಜಾ, 12,000 ಮದ್ಯದ ಬಾಟಲಿಗಳು ಮತ್ತು ಲಕ್ಷಾಂತರ ನಗದು ವಶಪಡಿಸಿಕೊಳ್ಳಲಾಗಿದೆ. ಹೊಸ ವರ್ಷದ ಆಚರಣೆಯನ್ನು ಸುರಕ್ಷಿತಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ದೆಹಲಿ ಹೊಸ ವರ್ಷಾಚರಣೆ: ಆಪರೇಷನ್ ಆಘಾಟ್ 3.0 ಅಡಿಯಲ್ಲಿ 500ಕ್ಕೂ ಹೆಚ್ಚು ಜನರ ಬಂಧನ
ದೆಹಲಿ
ಅಕ್ಷಯ್​ ಪಲ್ಲಮಜಲು​​
|

Updated on: Dec 27, 2025 | 12:38 PM

Share

ದೆಹಲಿ, ಡಿ.27: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi New Year Security) ಹೊಸ ವರ್ಷಾಚರಣೆಗೆ ಭದ್ರತೆ ಕುರಿತು ತಯಾರಿ ಮಾಡಿಕೊಳ್ಳುತ್ತಿರುವ ವೇಳೆ, ಮಹತ್ವದ ಕಾರ್ಯಚರಣೆಯೊಂದನ್ನು ದೆಹಲಿ ಪೊಲೀಸರು ನಡೆಸಿದ್ದಾರೆ. ರಾತ್ರಿಯಿಡೀ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ನೂರಾರು ಜನರನ್ನು ಬಂಧಿಸಿದ್ದಾರೆ. ಆಪರೇಷನ್ ಆಘಾಟ್ 3.0 ಅಡಿಯಲ್ಲಿ ದೆಹಲಿ ಆಗ್ನೇಯ ಜಿಲ್ಲೆಯ ಪೊಲೀಸರು ಸುಮಾರು ಎರಡು ಡಜನ್ ಅಕ್ರಮ ಶಸ್ತ್ರಾಸ್ತ್ರಗಳು, ಲಕ್ಷಾಂತರ ನಗದು, ಅಕ್ರಮ ಮದ್ಯ, ಮಾದಕ ವಸ್ತುಗಳು ಮತ್ತು ಕದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನ್ಯೂ ಇಯರ್​​​​ ಸೆಲೆಬ್ರೇಷನ್​​​​ ಸಂದರ್ಭದಲ್ಲಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ಸಮಯದಲ್ಲಿ ಅಪಾಯವನ್ನು ಅಥವಾ ಉದ್ದೇಶಪೂರ್ವಕವಾಗಿ ಗಲಭೆ ಸೃಷ್ಟಿಸುವ ಅನುಮಾಸ್ಪದ ವ್ಯಕ್ತಿಗಳನ್ನು ಬಂಧನ ಮಾಡಲಾಗಿದೆ. ಕಾರ್ಯಾಚರಣೆಯ ಸಮಯದಲ್ಲಿ 285 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಸ್ತ್ರಾಸ್ತ್ರ ಕಾಯ್ದೆ, ಅಬಕಾರಿ ಕಾಯ್ದೆ, ಎನ್‌ಡಿಪಿಎಸ್ ಕಾಯ್ದೆ ಮತ್ತು ಜೂಜಾಟ ಕಾಯ್ದೆಯ ನಿಬಂಧನೆಗಳು ಸೇರಿದಂತೆ ವಿವಿಧ ಕಾನೂನುಗಳ ಅಡಿಯಲ್ಲಿ ಈ ಬಂಧನಗಳನ್ನು ಮಾಡಲಾಗಿದೆ. ಇದಲ್ಲದೆ, ಇಲ್ಲಿಯವರೆಗೆ ಹೊಸ ವರ್ಷದ ಸಂದರ್ಭದಲ್ಲಿ ಅಪರಾಧ ಮುಕ್ತ ಆಚರಣೆ ನಡೆಸುವ ಉದ್ದೇಶದಿಂದ 504 ಜನರನ್ನು ಬಂಧಿಸಲಾಗಿದೆ.

ಎಕ್ಸ್​​ ಪೋಸ್ಟ್​​ ಇಲ್ಲಿದೆ ನೋಡಿ:

ಪೊಲೀಸರು ಆರೋಪಿಗಳಿಂದ 21 ಅಕ್ರಮ ಶಸ್ತ್ರಾಸ್ತ್ರಗಳು, 27 ವಾಹನಗಳು, 12,000 ಕ್ಕೂ ಹೆಚ್ಚು ಮದ್ಯದ ಬಾಟಲಿಗಳು, ಸುಮಾರು 2.5 ಲಕ್ಷ ರೂ. ನಗದು ಮತ್ತು 7 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆಪರೇಷನ್ ಆಘಾಟ್ 3.0 ಅಡಿಯಲ್ಲಿ, ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿರುವ ಸುಮಾರು 116 ವ್ಯಕ್ತಿಗಳನ್ನು ಬಂಧಿಸಲಾಗಿದೆ. ವಾಹನ ಕಳ್ಳತನ ಜಾಲವನ್ನು ತಡೆಯುವ ನಿಟ್ಟಿನಲ್ಲೂ ಆಪರೇಷನ್ ಆಘಾಟ್ 3.0 ಮೂಲಕ ಕ್ರಮ ಕೈಗೊಳ್ಳಲಾಗಿದೆ. ನ್ಯೂ ಇಯರ್​​​​ ಪಾರ್ಟಿ ಸಮಯದಲ್ಲಿ ವಾಹನ ಸವಾರರು ಯಾವುದೇ ತೊಂದರೆ ಎದುರಿಸದಂತೆ ನೋಡಿಕೊಳ್ಳಲು ಐದು ಆಟೋ ಲಿಫ್ಟರ್‌ಗಳನ್ನು ಬಂಧಿಸಲಾಗಿದೆ. ದಾಳಿಯ ಸಮಯದಲ್ಲಿ 231 ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರದ ವಾಹನವನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ‘ಬುಲ್ಡೋಜರ್ ರಾಜ್’ ನೀತಿಯಿಂದ ಬೀದಿಗೆ ಬಂದ ಮುಸ್ಲಿಂ ಕುಟುಂಬ: ಪಿಣರಾಯಿ ವಿಜಯನ್ ಆಕ್ರೋಶ

ಇನ್ನು ಪೊಲೀಸರು, 21 ದೇಶೀಯ ಪಿಸ್ತೂಲುಗಳು, 20 ಗನ್‌ಪೌಡರ್, 27 ಚಾಕುಗಳು ಸೇರಿದಂತೆ 12,000 ಕ್ಕೂ ಹೆಚ್ಚು ಅಕ್ರಮ ಮದ್ಯ ಮತ್ತು 6 ಕೆಜಿ ಗಾಂಜಾವನ್ನು ಸಹ ವಶಪಡಿಸಿಕೊಳ್ಳಲಾಗಿದೆ.ಪೊಲೀಸರು ದಾಳಿಯ ಸಮಯದಲ್ಲಿ 2.3 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಸುಮಾರು 210 ಕದ್ದ ಅಥವಾ ಕಳೆದುಹೋದ ಮೊಬೈಲ್ ಫೋನ್‌ಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.

ದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ