Rahul Gandhi: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಕೆ, ರಾಹುಲ್ ಗಾಂಧಿಗೆ ನೋಟಿಸ್

ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನಿಮ್ಮನ್ನು ಸಂಪರ್ಕಿಸಿದ ಮಹಿಳೆಯರ ವಿವರಗಳನ್ನು ನೀಡಿ, ನಾವು ಅವರಿಗೆ ಭದ್ರತೆ ನೀಡುತ್ತೇವೆ ಎಂದು ಹೇಳಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

Rahul Gandhi: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಕೆ, ರಾಹುಲ್ ಗಾಂಧಿಗೆ ನೋಟಿಸ್
ರಾಹುಲ್ ಗಾಂಧಿImage Credit source: Deccan Herald
Follow us
ನಯನಾ ರಾಜೀವ್
|

Updated on:Mar 17, 2023 | 8:39 AM

ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನಿಮ್ಮನ್ನು ಸಂಪರ್ಕಿಸಿದ ಮಹಿಳೆಯರ ವಿವರಗಳನ್ನು ನೀಡಿ, ನಾವು ಅವರಿಗೆ ಭದ್ರತೆ ನೀಡುತ್ತೇವೆ ಎಂದು ಹೇಳಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಶ್ರೀನಗರದಲ್ಲಿ ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಒಂದು ನಿರ್ದಿಷ್ಟ ಪ್ರಕರಣದಲ್ಲಿ ಒಬ್ಬ ಹುಡುಗಿ ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಳಲು ತೋಡಿಕೊಂಡಳು. ಆ ಸಂದರ್ಭದಲ್ಲಿ ನಾನು ಪೊಲೀಸರಿಗೆ ಕರೆ ಮಾಡಬೇಕೇ ಎಂದು ಪ್ರಶ್ನಿಸಿದೆ. ಆದರೆ ಪೊಲೀಸರಿಗೆ ಕರೆ ಮಾಡಬೇಡಿ. ಅದರಿಂದ ನನಗೆ ಅವಮಾನವಾಗುತ್ತದೆ ಎಂದು ಹೇಳಿರುವುದಾಗಿ ತಿಳಿಸಿದ್ದರು.

ಪೊಲೀಸರು ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಪ್ರಶ್ನಾವಳಿಗಳ ಪಟ್ಟಿಯನ್ನು ರಾಹುಲ್ ಗಾಂಧಿಗೆ ಕಳುಹಿಸಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರು ಕಳುಹಿಸಿದ್ದ ನೋಟಿಸ್‌ಗೆ ಕಾಂಗ್ರೆಸ್ ಪಕ್ಷವು ಪ್ರತಿಕ್ರಿಯೆ ನೀಡಿದೆ. ಈ ವಿಚಾರದಲ್ಲಿ ಬಿಜೆಪಿ ಕೊಳಕು ರಾಜಕಾರಣ ಮಾಡುತ್ತಿದೆ ಎಂದು ಪಕ್ಷ ಆರೋಪಿಸಿದೆ.

ಮತ್ತಷ್ಟು ಓದಿ: Rahul Gandhi: ನಾನು ಲಂಡನ್​​ನಲ್ಲಿ ಭಾರತದ ವಿರುದ್ಧ ಏನನ್ನೂ ಹೇಳಿಲ್ಲ: ರಾಹುಲ್ ಗಾಂಧಿ

ಇದೇ ವೇಳೆ ಲಂಡನ್‌ನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಗದ್ದಲ ಎದ್ದಿದೆ. ಅವರ ಕ್ಷಮೆಯಾಚನೆಗೆ ಬಿಜೆಪಿ ಹಠ ಹಿಡಿದಿದೆ. ಈ ಹೇಳಿಕೆಗೆ ಸಂಸತ್ತಿನ ಉಭಯ ಸದನಗಳಲ್ಲಿ ಕೋಲಾಹಲ ಎದ್ದಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ (ಮಾರ್ಚ್ 16) ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿದರು. ಬೆಳಗ್ಗೆ ನಾನು ಸಂಸತ್ತಿಗೆ ಹೋಗಿ ಲೋಕಸಭೆಯ ಸ್ಪೀಕರ್ ಜೊತೆ ಮಾತನಾಡಲು ಬಯಸಿದ್ದೆ, ಆದರೆ ನಾನು ತಲುಪಿದ 1 ನಿಮಿಷದಲ್ಲಿ ಸದನವನ್ನು ಮುಂದೂಡಲಾಯಿತು ಎಂದು ರಾಹುಲ್ ಗಾಂಧಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:38 am, Fri, 17 March 23

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ