Sign In

By signing in or creating an account, you agree with Associated Broadcasting Company's Terms & Conditions and Privacy Policy.

Wrestling protest: ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪೋಕ್ಸೊ ಪ್ರಕರಣ ರದ್ದತಿ ವರದಿ ಸಲ್ಲಿಸಿದ ದೆಹಲಿ ಪೊಲೀಸರು

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪೋಕ್ಸೊ ಪ್ರಕರಣವನ್ನು ರದ್ದುಪಡಿಸುವಂತೆ ಶಿಫಾರಸು ಮಾಡುವ 500 ಪುಟಗಳ ವರದಿಯನ್ನು ಗುರುವಾರ ದೆಹಲಿ ಪೊಲೀಸರು ಕೋರ್ಟ್​ಗೆ ಸಲ್ಲಿಸಿದ್ದಾರೆ.

Wrestling protest: ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪೋಕ್ಸೊ ಪ್ರಕರಣ ರದ್ದತಿ ವರದಿ ಸಲ್ಲಿಸಿದ ದೆಹಲಿ ಪೊಲೀಸರು
ಬ್ರಿಜ್ ಭೂಷಣ್ ಸಿಂಗ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 15, 2023 | 12:55 PM

ದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ)ನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಪೋಕ್ಸೊ ಪ್ರಕರಣವನ್ನು ರದ್ದುಪಡಿಸುವಂತೆ ಶಿಫಾರಸು ಮಾಡುವ 500 ಪುಟಗಳ ವರದಿಯನ್ನು ಇಂದು (ಜೂ.15) ದೆಹಲಿ ಪೊಲೀಸರು ಕೋರ್ಟ್​ಗೆ ಸಲ್ಲಿಸಿದ್ದಾರೆ. WFI ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಇದೀಗ ಅವರ ವಿರುದ್ಧ ಯಾವುದೇ ಸಹಕಾರಿ ಸಾಕ್ಷ್ಯಗಳಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದತಿ ವರದಿಯನ್ನು ಪಟಿಯಾಲ ಹೌಸ್ ಕೋರ್ಟ್‌ಗೆ ಸಲ್ಲಿಸಿದ್ದಾರೆ. ಜುಲೈ 4ಕ್ಕೆ ಇದರ ಮುಂದಿನ ವಿಚಾರಣೆ ನಡೆಸಲಿದೆ.

ಯಾವುದೇ ದೃಢೀಕರಿಸುವ ಪುರಾವೆಗಳು ಕಂಡುಬರದ ಸಂದರ್ಭಗಳಲ್ಲಿ ರದ್ದತಿ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಅಪ್ರಾಪ್ತರೊಬ್ಬರು ಸಲ್ಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ಪೊಲೀಸರು ಶಿಫಾರಸು ಮಾಡಿದ್ದಾರೆ ಮತ್ತು ತನಿಖೆಯಲ್ಲಿ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

POCSO ಕಾಯ್ದೆಯಡಿಯಲ್ಲಿ ದಾಖಲಿಸಿಕೊಳ್ಳಲಾಗಿದ್ದ ಪ್ರಕರಣದ ತನಿಖೆ ಪೂರ್ಣಗೊಂಡ ನಂತರ, ನಾವು ದೂರುದಾರರ ಹೇಳಿಕೆಗಳ ಆಧಾರದ ಮೇಲೆ ಪ್ರಕರಣವನ್ನು ರದ್ದುಗೊಳಿಸುವಂತೆ 173 Cr PC ಅಡಿಯಲ್ಲಿ ಪೊಲೀಸ್ ವರದಿಯನ್ನು ಸಲ್ಲಿಸಿದ್ದೇವೆ, ಅಂದರೆ, ದೂರುದಾರರ ತಂದೆ ಮತ್ತು ದೂರುದಾರರು ನೀಡಿರುವ ಹೇಳಿಕೆ ಪ್ರಕಾರ ಈ ವರದಿಯನ್ನು ಸಲ್ಲಿಸಿದ್ದೇವೆ ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕುಸ್ತಿಪಟುಗಳು ನೀಡಿರುವ ದೂರಿನ ಆಧಾರ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು, ತನಿಖೆ ಪೂರ್ಣಗೊಂಡ ನಂತರ, ನಾವು ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಸೆಕ್ಷನ್ 354, 354 ಎ, 354 ಡಿ ಐಪಿಸಿ ಅಡಿಯಲ್ಲಿ ಅಪರಾಧಗಳಿಗೆ ಮತ್ತು ಸೆಕ್ಷನ್ 109/ 354/354 ಎ/506 ಐಪಿಸಿ ವಿರುದ್ಧದ ಅಪರಾಧಗಳಿಗೆ ಚಾರ್ಜ್‌ಶೀಟ್ ಸಲ್ಲಿಸುತ್ತಿದ್ದೇವೆ ಎಂದು  ನ್ಯಾಯಾಲಯದ ಮುಂದೆ ವಿನೋದ್ ತೋಮರ್ ತಿಳಿಸಿದ್ದಾರೆ.

ಇದನ್ನೂ ಓದಿ: Brij Bhushan Singh: ಕೊಲೆ ಯತ್ನ, ಡಕಾಯಿತಿ..ಹಲವು ಕ್ರಿಮಿನಲ್ ಕೇಸ್…ಕುಸ್ತಿ ಒಕ್ಕೂಟದ ಮುಖ್ಯಸ್ಥನ ವಿರುದ್ಧವೇ ಬೀದಿಗಿಳಿದ ಕುಸ್ತಿಪಟುಗಳು

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಅವರನ್ನು ಕಳೆದ ವಾರ ಭೇಟಿಯಾಗಿ ಜೂನ್ 15 ರೊಳಗೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು. ಈ ಭರವಸೆಯ ನಂತರ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ನಿಲ್ಲಿಸಿದ್ದರು.

ಲೈಂಗಿಕ ಕಿರುಕುಳದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಐದು ದೇಶಗಳ ಕುಸ್ತಿ ಫೆಡರೇಶನ್‌ಗಳಿಂದ ಮಾಹಿತಿಯನ್ನು ಕೋರಿದ್ದಾರೆ. ತನಿಖಾ ತಂಡವು ಕುಸ್ತಿಪಟುಗಳು ಪಂದ್ಯದ ಸಮಯದಲ್ಲಿ ತಂಗಿದ್ದ ಸ್ಥಳಗಳಿಂದ ಫೋಟೋಗಳು, ವೀಡಿಯೊಗಳು ಮತ್ತು ಸಿಸಿಟಿವಿ ದೃಶ್ಯಗಳನ್ನು ಪಡೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನರನ್ನು ಪ್ರಶ್ನಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:38 pm, Thu, 15 June 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ