AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತಾ ಫೋಗಟ್​​ನ್ನು ಡಬ್ಲ್ಯುಎಫ್‌ಐ ಮುಖ್ಯಸ್ಥರ ಅಧಿಕೃತ ನಿವಾಸಕ್ಕೆ ಕರೆದೊಯ್ದ ಪೊಲೀಸರು; ಅರ್ಧ ಗಂಟೆ ವಿಚಾರಣೆ

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಿಂಗ್ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆಯಿದೆ.

ಸಂಗೀತಾ ಫೋಗಟ್​​ನ್ನು ಡಬ್ಲ್ಯುಎಫ್‌ಐ ಮುಖ್ಯಸ್ಥರ ಅಧಿಕೃತ ನಿವಾಸಕ್ಕೆ ಕರೆದೊಯ್ದ ಪೊಲೀಸರು; ಅರ್ಧ ಗಂಟೆ ವಿಚಾರಣೆ
ಸಂಗೀತಾ ಫೋಗಟ್ ಜತೆ ಪ್ರತಿಭಟನಾನಿರತ ಕುಸ್ತಿಪಟುಗಳು
ರಶ್ಮಿ ಕಲ್ಲಕಟ್ಟ
|

Updated on:Jun 09, 2023 | 5:48 PM

Share

ದೆಹಲಿ: ಲೈಂಗಿಕ ಕಿರುಕುಳಕ್ಕೆ ಕಾರಣವಾದ ಘಟನೆಗಳನ್ನು ಮರುಸೃಷ್ಟಿಸಲು ದೆಹಲಿ ಪೊಲೀಸರು (Delhi Police) ಶುಕ್ರವಾರ ಕುಸ್ತಿಪಟು ಸಂಗೀತಾ ಫೋಗಟ್ (Sangeeta Phogat) ಅವರನ್ನು ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರ ಅಧಿಕೃತ ನಿವಾಸಕ್ಕೆ ಕರೆದೊಯ್ದಿದ್ದಾರೆ. ಪಿಟಿಐ ಮೂಲಗಳ ಪ್ರಕಾರ, ಫೋಗಟ್ ಜೊತೆಗೆ ಮಹಿಳಾ ಕಾನ್‌ಸ್ಟೆಬಲ್‌ಗಳು ಕೂಡಾ ಇದ್ದರು. ಮಧ್ಯಾಹ್ನ 1.30 ಕ್ಕೆ ಮಹಿಳಾ ಅಧಿಕಾರಿಗಳು ಸಂಗೀತಾ ಫೋಗಟ್ ಅವರನ್ನು ದೆಹಲಿಯ ಬ್ರಿಜ್ ಭೂಷಣ್ ಅವರ ಅಧಿಕೃತ ನಿವಾಸಕ್ಕೆ ಕರೆದೊಯ್ದರು. ಅವರು ಅರ್ಧ ಗಂಟೆ ಅಲ್ಲಿಯೇ ಇದ್ದರು. ಅವರು ದೃಶ್ಯವನ್ನು ಮರುಸೃಷ್ಟಿಸಲು ಮತ್ತು ಕಿರುಕುಳಕ್ಕೊಳಗಾದ ಸ್ಥಳಗಳನ್ನು ನೆನಪಿಸಿಕೊಳ್ಳುವಂತೆ ಕೇಳಿದರು ಎಂದು ಮೂಲಗಳು ತಿಳಿಸಿವೆ.

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಿಂಗ್ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆಯಿದೆ.

ತನಿಖೆಯ ಭಾಗವಾಗಿ, ಎಸ್‌ಐಟಿ 180 ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಮತ್ತು ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ದೇಶದ ಅಗ್ರ ಕುಸ್ತಿಪಟುಗಳು ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಅಪ್ರಾಪ್ತೆ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳಿಗೆ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿರುವ ಇವರು ಕುಸ್ತಿ ಫೆಡರೇಷನ್ ಮುಖ್ಯಸ್ಥರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Wrestlers Protest: ಬ್ರಿಜ್​ ಭೂಷಣ್ ನನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿಲ್ಲ: ಅಪ್ರಾಪ್ತ ಕುಸ್ತಿಪಟುವಿನ ತಂದೆಯ ಹೇಳಿಕೆ

ಪ್ರತಿಭಟನಾನಿರತ ಕುಸ್ತಿಪಟುಗಳು ಬುಧವಾರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿ ಜೂನ್ 15 ರವರೆಗೆ ತಮ್ಮ ಪ್ರತಿಭಟನೆಗಳನ್ನು ಸದ್ಯಕ್ಕೆ ರದ್ದು ಮಾಡಲು ಒಪ್ಪಿಕೊಂಡಿದ್ದಾರೆ. ಈ ವೇಳೆಗೆ ಸಿಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಮತ್ತು ತಿಂಗಳಾಂತ್ಯದೊಳಗೆ ಡಬ್ಲ್ಯುಎಫ್‌ಐ ಚುನಾವಣೆಗಳನ್ನು ನಡೆಸಲಾಗುವುದು ಎಂದು ಅನುರಾಗ್ ಠಾಕೂರ್ ಕುಸ್ತಿಪಟುಗಳಿಗೆ ಭರವಸೆ ನೀಡಿದ್ದಾರೆ .ಸಿಂಗ್ ವಿರುದ್ಧ ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Fri, 9 June 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್