Delhi Air Pollution: ಮಿತಿ ಮೀರಿದ ವಾಯು ಮಾಲಿನ್ಯ; ನಾಳೆಯಿಂದ ದೆಹಲಿಯ ಶಾಲೆಗಳಿಗೆ ರಜೆ ಘೋಷಣೆ

| Updated By: Digi Tech Desk

Updated on: Nov 04, 2022 | 12:31 PM

ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನಾಳೆಯಿಂದ ರಜೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಘೋಷಿಸಿದ್ದಾರೆ.

Delhi Air Pollution: ಮಿತಿ ಮೀರಿದ ವಾಯು ಮಾಲಿನ್ಯ; ನಾಳೆಯಿಂದ ದೆಹಲಿಯ ಶಾಲೆಗಳಿಗೆ ರಜೆ ಘೋಷಣೆ
ಸಾಂದರ್ಭಿಕ ಚಿತ್ರ
Image Credit source: NDTV
Follow us on

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ (Air Pollution) ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಾಳೆಯಿಂದ (ನ. 5) ದೆಹಲಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಭಾರತದಲ್ಲಿ ವಾಯು ಮಾಲಿನ್ಯ ಸಮಸ್ಯೆ ವಿಚಾರವಾಗಿ ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಪಂಜಾಬ್ ಸಿಎಂ ಭಗವಂತ್​ ಮಾನ್ (Bhagwant Mann) ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ವಾಯು ಮಾಲಿನ್ಯಕ್ಕೆ ದೆಹಲಿ, ಪಂಜಾಬ್ ಕಾರಣ ಅಲ್ಲ. ನಮ್ಮ ರಾಜ್ಯಗಳ ಬಗ್ಗೆ ಆರೋಪ ಮಾಡುವುದು ಸರಿಯಲ್ಲ ಎಂದಿದ್ದಾರೆ.

ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನಾಳೆಯಿಂದ ರಜೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಘೋಷಿಸಿದ್ದಾರೆ. SAFAR ಅಥವಾ ಸಿಸ್ಟಮ್ ಆಫ್ ಏರ್ ಕ್ವಾಲಿಟಿ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ಇಂದು ಸತತ ಎರಡನೇ ದಿನ ತೀವ್ರ ಮಟ್ಟದಲ್ಲಿದೆ.

ಇದನ್ನೂ ಓದಿ: ಗುಜರಾತ್​​ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಿಜೆಪಿ ಗುಟ್ಟಾಗಿ ಸಹಾಯ ಮಾಡುತ್ತಿದೆ; ಅರವಿಂದ್ ಕೇಜ್ರಿವಾಲ್ ಶಾಕಿಂಗ್ ಹೇಳಿಕೆ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ವಾಯು ಮಾಲಿನ್ಯದ ಪ್ರಮಾಣ ಹೆಚ್ಚಳವಾಗಿರುವುದರಿಂದ ದೆಹಲಿಯಲ್ಲಿ ನಾಳೆಯಿಂದ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗುವುದು. ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ 5ರಿಂದ 7ನೇ ತರಗತಿಗಳ ಹೊರಾಂಗಣ ಚಟುವಟಿಕೆಗಳನ್ನು ನಿರ್ಬಂಧಿಸಲಾಗುವುದು ಎಂದು ಹೇಳಿದ್ದಾರೆ.

ದೆಹಲಿ ಸರ್ಕಾರ ಅಥವಾ ಪಂಜಾಬ್ ಸರ್ಕಾರವನ್ನು ದೂಷಿಸುವುದರಿಂದ ಈ ವಾಯು ಮಾಲಿನ್ಯದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವತ್ತ ಎಲ್ಲರೂ ಯೋಚಿಸಬೇಕಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Fri, 4 November 22