Delhi Cold Wave ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಚಳಿ, ಜ.15ರವರೆಗೆ ಶಾಲೆಗಳಿಗೆ ರಜೆ ಘೋಷಣೆ

ಚಳಿಯಿಂದಾಗಿ ನವದೆಹಲಿಯಲ್ಲಿ ಜನರನ್ನು ಮನೆಯಿಂದ ಹೊರಗಡೆ ಹೋಗಲು ಆಗುತ್ತಿಲ್ಲ. ಅಷ್ಟರ ಮಟ್ಟಿಗೆ ಚಳಿಯ ತೀವ್ರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿಲಾಗಿದೆ.

Delhi Cold Wave ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಚಳಿ,  ಜ.15ರವರೆಗೆ ಶಾಲೆಗಳಿಗೆ ರಜೆ ಘೋಷಣೆ
ದೆಹಲಿಯಲ್ಲಿ ದಟ್ಟವಾದ ಮಂಜು
Edited By:

Updated on: Jan 08, 2023 | 7:55 PM

ನವದೆಹಲಿ:  ಚಳಿಗೆ ರಾಷ್ಟ್ರ ರಾಜಧಾನಿ ನವದೆಹಲಿ ತತ್ತರಿಸಿ ಹೋಗಿದೆ. ಇಂದು(ಜನವರಿ08) ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ  1.9 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಜನವರಿ 15ರವರೆಗೆ ದೆಹಲಿಯಲ್ಲಿ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ದೆಹಲಿ ಸರ್ಕಾರದ ಸೂಚನೆಯಂತೆ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.


9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರ್ಯಾಯ ತರಗತಿಗಳು ನಡೆಯಲಿವೆ. ರಜೆ ಇದ್ದರೂ ಶೈಕ್ಷಣಿಕ ಕಾರ್ಯಕ್ಷಮತೆ ಬಗ್ಗೆ ಗಮನಹರಿಸಲಾಗುವುದು ಎಂದು ದೆಹಲಿ ಶಿಕ್ಷಣ ನಿರ್ದೇಶನಾಲಯ ತಿಳಿಸಿದೆ.

ಇಂದು ಬೆಳಗ್ಗೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿರುವುದರಿಂದ ಜನ ತೀವ್ರ ಚಳಿಯಿಂದ ತತ್ತರಿಸಿ ಹೋಗಿದ್ದು ಯಾರು ಮನೆಯಿಂದ ಹೊರಬರುತ್ತಿಲ್ಲ. ಪ್ರತಿಕೂಲ ಹವಾಮಾನ ಮತ್ತು ಇತರ ಕಾರ್ಯಾಚರಣೆಯ ಸಮಸ್ಯೆಗಳಿಂದಾಗಿ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 20 ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿತ್ತು,

ಅಲ್ಲದೇ ಮಂಜು ಕವಿದ ವಾತಾವರಣದಿಂದಾಗಿ 42 ರೈಲುಗಳು ಸಂಚಾರದಲ್ಲೂ ವ್ಯತ್ಯಯವಾಗಿದೆ ಎಂದು ಉತ್ತರ ರೈಲ್ವೆ ವಕ್ತಾರರು ತಿಳಿಸಿದ್ದಾರೆ. ಚಳಿ ಹೆಚ್ಚಾಗುತ್ತಲೆ ಇದ್ದು ಇನ್ನು ಎರಡು ದಿನಗಳವರೆಗೆ ಪರಿಸ್ಥಿತಿ ವಿಕೋಪಕ್ಕೆ ತೆರಳುವ ಸಾಧ್ಯತೆ ಇರುವುದರಿಂದ ಜನ ಎಚ್ಚರವಹಿಸಬೇಕು ಎಂದು ಸರ್ಕಾರ ಮನವಿ ಮಾಡಿಕೊಂಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ