AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಬಿಗುವಿನ ವಾತಾವರಣ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ದೆಹಲಿಯಲ್ಲಿ ನಿಗದಿಯಾಗಿದ್ದ 'ಲೆಹ್ರಾ ದೋ ತಿರಂಗಾ' ರ್ಯಾಲಿಗೂ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ನಿಷೇದಾಜ್ಞೆ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾದವರನ್ನು ವಶಕ್ಕೆ ಪಡೆಯಲಾಗಿದ್ದು, ಎಐಎಸ್‌ಎ ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಕಸ್ಟಡಿಗೆ ಪಡೆದು ನಂತರ ಬಿಡುಗಡೆ ಮಾಡಲಾಗಿದೆ. ಅಹಿತಕರ ಘಟನೆ ತಡೆಯಲು ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ದೆಹಲಿಯಲ್ಲಿ ಬಿಗುವಿನ ವಾತಾವರಣ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!
ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!
ಭಾವನಾ ಹೆಗಡೆ
|

Updated on: Oct 17, 2026 | 8:24 AM

Share

ಮುಖ್ಯಾಂಶಗಳು

  • ದೆಹಲಿಯ ಪ್ರತಿಭಟನೆಗೂ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮುನ್ನೆಚ್ಚರಿಕೆ ಬಂಧನ.
  • ಕಸ್ಟಡಿಗೆ ಪಡೆದ ಬಳಿಕ ಎಐಎಸ್‌ಎ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ.
  • ನಿಷೇದಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಲು ಮುಂದಾದವರ ವಿರುದ್ಧ ಪೊಲೀಸರ ಕ್ರಮ.

ನವದೆಹಲಿ, ಅಕ್ಟೋಬರ್ 17: ದೆಹಲಿಯಲ್ಲಿ ನಿಗದಿಯಾಗಿದ್ದ ಪ್ರತಿಭಟನೆ ಮತ್ತು ‘ಲೆಹ್ರಾ ದೋ ತಿರಂಗಾ’ ರ್ಯಾಲಿಗೂ ಮುನ್ನ ರಾಜಧಾನಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕಾಕ್‌ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿದ್ದಾರೆ. ಇನ್ನುಳಿದಂತೆ ಎಐಎಸ್‌ಎ ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಕಸ್ಟಡಿಗೆ ಪಡೆದ ಬಳಿಕ ಬಿಡುಗಡೆಗೊಳಿಸಲಾಗಿದೆ.

ನಿಷೇದಾಜ್ಞೆ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾಗಿದ್ದವರು ಪೊಲೀಸೆರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಜೆಪಿ ವತಿಯಿಂದ ದೆಹಲಿಯ ಕನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ರಾಷ್ಟ್ರಧ್ವಜ ಪ್ರದರ್ಶನದೊಂದಿಗೆ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಲಾಗಿತ್ತು. ಆದರೆ, ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರು. ಇದೀಗ ನಿಷೇದಾಜ್ಞೆ ಉಲ್ಲಂಘಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗಿದ್ದ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಭಿಜಿತ್ ದೀಪ್ಕೆ ಬಂಧನ

ಅಭಿಜಿತ್ ದೀಪ್ಕೆ ಅವರನ್ನು ವಶಕ್ಕೆ ಪಡೆದ ಬಳಿಕ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್‌ಗಳ ಅಡಿಯಲ್ಲಿ ಕ್ರಮಕೈಗೊಂಡು ಬಂಧಿಸಲಾಗಿದೆ. ದೀಪ್ಕೆಯನ್ನು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಲಾಗಿದೆ. ಮತ್ತೊಂದೆಡೆ, ದೆಹಲಿ ಪೊಲೀಸ್ ಕಾಯಿದೆಯ ಸೆಕ್ಷನ್ 65ರ ಅಡಿಯಲ್ಲಿ ಅಗತ್ಯ ಬಂಧನ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ಐಸಾ ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನಾಕಾರರ ಬಂಧನಕ್ಕೆ ವಿರೋಧ

ಪ್ರತಿಭಟನಾಕಾರರ ಬಂಧನವನ್ನು ಖಂಡಿಸಿರುವ ವಿವಿಧ ವಿದ್ಯಾರ್ಥಿ ಸಂಘಟನೆಗಳು ಮತ್ತು ಪಕ್ಷದ ಮುಖಂಡರು, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವುದು ನಾಗರಿಕರ ಸಾವಿಧಾನಿಕ ಹಕ್ಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ದೆಹಲಿ ಪೊಲೀಸರು ಮತ್ತು ಕ್ಷಿಪ್ರ ಕಾರ್ಯಪಡೆ (RAF) ಸಿಬ್ಬಂದಿಯನ್ನು ಭಾರಿ ಪ್ರಮಾಣದಲ್ಲಿ ನಿಯೋಜಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More