AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಪ್ರತಿಭಟನೆ, ಸಿಜೆಪಿಯ ಅಭಿಜಿತ್ ದಿಪ್ಕೆ, ಸೌರವ್ ದಾಸ್ ಬಿಡುಗಡೆ

ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಕಾಕ್ರೋಚ್ ಜನತಾ ಪಾರ್ಟಿಯ ನಾಯಕರಾದ ಅಭಿಜಿತ್ ದಿಪ್ಕೆ, ಸೌರವ್ ದಾಸ್ ಅವರನ್ನು ನ್ಯಾಯಾಲಯ ಬಿಡುಗಡೆ ಮಾಡಿದೆ. ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಮೆಟ್ರೋ ಸೇವೆಗಳ ನಿರ್ಬಂಧ ಮತ್ತು ನ್ಯಾಯಾಂಗ ನಿಂದನೆ ಅರ್ಜಿಗಳ ಕುರಿತು ಚರ್ಚೆಗಳು ಮುಂದುವರೆದಿವೆ.

ದೆಹಲಿ ಪ್ರತಿಭಟನೆ, ಸಿಜೆಪಿಯ ಅಭಿಜಿತ್ ದಿಪ್ಕೆ, ಸೌರವ್ ದಾಸ್ ಬಿಡುಗಡೆ
ಅಭಿಜಿತ್ ದಿಪ್ಕೆImage Credit source: PTI
ನಯನಾ ರಾಜೀವ್
|

Updated on: Oct 11, 2026 | 10:18 AM

Share

ನವದೆಹಲಿ, ಅಕ್ಟೋಬರ್ 11: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಘಟಕ ಅಭಿಜಿತ್ ದಿಪ್ಕೆ, ಪತ್ರಕರ್ತ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ನ್ಯಾಯಾಲಯ ಬಿಡುಗಡೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ವಿಮಾನ ನಿಲ್ದಾಣದ ಬಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ದೆಹಲಿ ಕಂಟೋನ್ಮೆಂಟ್‌ನ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಿಂದ ಬಿಡುಗಡೆ ಆದೇಶ ಬಂದಿದೆ ಎಂದು ವರದಿ ತಿಳಿಸಿದೆ.

ಇದೇ ವೇಳೆ, ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೈಗೊಂಡ ಭದ್ರತಾ ಕ್ರಮಗಳು, ಮೆಟ್ರೋ ಸೇವೆಗಳ ನಿರ್ವಹಣೆ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿದೆ ಎನ್ನಲಾದ ನ್ಯಾಯಾಂಗ ನಿಂದನೆ ಅರ್ಜಿ ಕುರಿತು ಚರ್ಚೆ ಮುಂದುವರೆದಿದೆ.

ಮತ್ತಷ್ಟು ಓದಿ: ಸಿಜೆಪಿ ಪ್ರತಿಭಟನೆಗೆ ಬಾಂಗ್ಲಾದೇಶದ ಎನ್‌ಸಿಪಿ ಬೆಂಬಲ: ಈ ಹೋರಾಟ ನಿಮ್ಮೊಬ್ಬರದ್ದಲ್ಲ ಎಂದ ನಹಿದ್ ಇಸ್ಲಾಂ

ಅಕ್ಟೋಬರ್ 9ರಂದು ಸುಪ್ರೀಂ ಕೋರ್ಟ್, ಸಾರ್ವಜನಿಕ ಸಾರಿಗೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸದೆ ನಿಯಂತ್ರಿತವಾಗಿ ನಡೆಸಬೇಕು ಎಂದು ಸೂಚಿಸಿತ್ತು. ಆದರೆ ಅಕ್ಟೋಬರ್ 10ರಂದು ಹಲವು ಮೆಟ್ರೋ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಿದ್ದರಿಂದ ಜನರಿಗೆ ತೊಂದರೆಯಾಗಿದೆ ಎಂದು ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆಯೇ ಎಂಬುದನ್ನು ವಿಚಾರಣೆಯ ನಂತರವೇ ನಿರ್ಧರಿಸಬೇಕಿದೆ.

ಧ್ರುವ್ ರಾಠಿ ಸೇರಿದಂತೆ ಇತರರ ಬಿಡುಗಡೆ ಪ್ರತಿಭಟನೆಗೆ ಸಂಬಂಧಿಸಿದಂತೆ ವಶಕ್ಕೆ ಪಡೆದಿದ್ದ ಹಲವು ಕಾರ್ಯಕರ್ತರು ಮತ್ತು ಇತರರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ಯೂಟ್ಯೂಬರ್ ಧ್ರುವ್ ರಾಠಿ ಕೂಡ ಬಿಡುಗಡೆಗೊಂಡಿದ್ದಾರೆ. ಆದರೆ ಅಕ್ಟೋಬರ್ 11ರ ಬೆಳಗಿನ ವರದಿಗಳ ಪ್ರಕಾರ, ಸಿಜೆಪಿ ಮುಖಂಡರಾದ ಅಭಿಜಿತ್ ದಿಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಇನ್ನೂ ಪೊಲೀಸ್ ವಶದಲ್ಲಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ