Bomb Threat: ದೆಹಲಿಯ ಶಾಲೆಗೆ ಬಾಂಬ್ ಬೆದರಿಕೆ ಕರೆ, ಮಕ್ಕಳ ಸ್ಥಳಾಂತರ
ದೆಹಲಿಯ ಆರ್ಕೆಪುರಂನಲ್ಲಿರುವ ದೆಹಲಿ ಪಬ್ಲಿಕ್ ಶಾಲೆಗೆ ಬಾಂಬ್ ಬೆಸರಿಕೆ ಕರೆ ಬಂದಿದ್ದು, ಶಿಕ್ಷಕರು ಹಾಗೂ ಪೋಷಕರು ಕಂಗಾಲಾಗಿದ್ದಾರೆ. ತಕ್ಷಣವೇ ಮಕ್ಕಳನ್ನು ಸ್ಥಳಾಂತರಿಸಲಾಗಿದ್ದು, ಈಗ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ಪೊಲೀಸರು ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯ ಆರ್‌ಕೆ ಪುರಂ ಪ್ರದೇಶದ ದೆಹಲಿ ಪಬ್ಲಿಕ್ ಸ್ಕೂಲ್‌ಗೆ ಶುಕ್ರವಾರ ಬಾಂಬ್ ಬೆದರಿಕೆ(Bomb Threat) ಕರೆ ಬಂದಿದೆ. ಸುಮಾರು 10 ಗಂಟೆಗೆ ಕರೆ ಸ್ವೀಕರಿಸಿದ ನಂತರ ಮಕ್ಕಳನ್ನು ಸ್ಥಳಾಂತರಿಸಲಾಗಿದೆ. ಕರೆ ಬಂದ ಬಗ್ಗೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಕಳೆದ ಎರಡು ಗಂಟೆಗಳಿಂದ ಶೋಧ ಕಾರ್ಯ ನಡೆಯುತ್ತಿದೆ. ಆದರೆ, ಪೊಲೀಸರಿಗೆ ಇದುವರೆಗೆ ಯಾವುದೇ ಅನುಮಾನಾಸ್ಪದ ಸಂಗತಿಗಳು ಪತ್ತೆಯಾಗಿಲ್ಲ.
ಮತ್ತೊಂದು ಘಟನೆ ಮುಂಬೈನ 6 ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ
ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಅಪರಿಚಿತರು ಬೆದರಿಕೆ ಹಾಕಿದ್ದಾರೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಗರದ 6 ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂಬ ಸುದ್ದಿ ತಿಳಿದ ತಕ್ಷಣ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ತಲುಪಿತ್ತು.
ಈ ಮಾಹಿತಿಯನ್ನು ತಕ್ಷಣವೇ ಮುಂಬೈ ಪೊಲೀಸರಿಗೆ ನೀಡಲಾಯಿತು. ಮಾಹಿತಿ ಪಡೆದ ಮುಂಬೈ ಪೊಲೀಸರು ಸಂದೇಶ ಕಳುಹಿಸಿದವ ಬಗ್ಗೆ ಮಾಹಿತಿ ಪತ್ತೆ ಹಚ್ಚಲು ಆರಂಭಿಸಿದ್ದಾರೆ.
ಮತ್ತಷ್ಟು ಓದಿ: ಮುಂಬೈ: 6 ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ
ಮುಂಬೈ ನಗರದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಫೋನ್ ಅಥವಾ ಸಂದೇಶ ಬಂದಿರುವುದು ಇದೇ ಮೊದಲಲ್ಲ. ಈ ಮೊದಲು ಮುಂಬೈ ಪೊಲೀಸ್ ಮತ್ತು ಕಂಟ್ರೋಲ್ ರೂಂಗೆ ಬೆದರಿಕೆಗಳು ಬಂದಿವೆ. ಆದರೆ ಯಾವುದನ್ನೂ ನೆಗ್ಲೆಕ್ಟ್ ಮಾಡುವಂತಿಲ್ಲ.
ಕಳೆದ ವರ್ಷದ ಘಟನೆ ಮುಂಬೈ: ಆರ್‌ಬಿಐ, ವಿವಿಧ ಬ್ಯಾಂಕ್‌ಗಳ ಕೇಂದ್ರ ಕಚೇರಿಗಳಿಗೆ ಹುಸಿ ಬಾಂಬ್ ಬೆದರಿಕೆ ನಗರದ ಆರ್‌ಬಿಐ ಕೇಂದ್ರ ಕಚೇರಿ ಸೇರಿದಂತೆ ಹನ್ನೊಂದು ಕಡೆಗಳಲ್ಲಿ ಮಧ್ಯಾಹ್ನ 1.30 ಗಂಟೆಗೆ ಬಾಂಬ್ ಸ್ಫೋಟವಾಗುತ್ತದೆ. ಎಲ್ಲೆಡೆ ಶಕ್ತಿಶಾಲಿ ಬಾಂಬ್‌ಗಳನ್ನು ಅಳವಡಿಸಲಾಗಿದೆ ಎಂಬ ಬೆದರಿಕೆ ಸಂದೇಶದ ಇ-ಮೇಲ್ ಮಂಗಳವಾರ ಪೊಲೀಸರನ್ನು ತಲ್ಲಣಗೊಳಿಸಿತ್ತು.
ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಎಲ್ಲೆಡೆ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು. ಪೊಲೀಸರ ಜತೆ ಬಾಂಬ್ ಪತ್ತೆ ದಳ ಕೂಡ ಜತೆಗೂಡಿತ್ತು. ಆದರೆ ಯಾವುದೇ ಶಂಕಿತ ವಸ್ತುಗಳೂ ಪತ್ತೆಯಾಗಲಿಲ್ಲ. ಇದೊಂದು ಹುಸಿ ಬೆದರಿಕೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:41 pm, Fri, 2 February 24