Delhi Rain: ದೆಹಲಿಯಲ್ಲಿ ವಿಪರೀತ ಮಳೆಗೆ ಜನ ತತ್ತರ; ಚರಂಡಿಯಲ್ಲಿ ಕೊಚ್ಚಿ ಹೋಗಿ ವ್ಯಕ್ತಿ ಸಾವು
Delhi Flood | ನರೇಲಾ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ನಿನ್ನೆ ಸಂಜೆ ನಡೆದುಕೊಂಡು ಹೋಗುವಾಗ ಇದ್ದಕ್ಕಿದ್ದಂತೆ ಕಾಲು ಜಾರಿ 30 ವರ್ಷದ ವ್ಯಕ್ತಿ ಚರಂಡಿಯೊಳಗೆ ಬಿದ್ದಿದ್ದಾನೆ. ಕೊಳಚೆ ನೀರಿನಲ್ಲಿ ಕೊಚ್ಚಿ ಹೋದ ಆತನ ಶವವನ್ನು ಹೊರಗೆಳೆಯಲಾಗಿದೆ.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆಯ ತುಂಬ ನೀರು ತುಂಬಿ ನದಿಯಂತಾಗಿವೆ. ಮನೆ, ಕಾರ್ಖಾನೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣದೊಳಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ಉಕ್ಕಿ ಹರಿಯುತ್ತಿದ್ದ ಚರಂಡಿಯಲ್ಲಿ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾನೆ. ಇನ್ನೂ 2-3 ದಿನ ದೆಹಲಿಯಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದೆಹಲಿಯಲ್ಲಿ ಶನಿವಾರ ಸುರಿದ ದಾಖಲೆಯ ಮಳೆಯಿಂದ ರಸ್ತೆಗಳೆಲ್ಲ ಕೆರೆಯಂತಾಗಿವೆ. ವಿಮಾನ ನಿಲ್ದಾಣದ ಸುತ್ತಮುತ್ತ ಸಮುದ್ರದ ರೀತಿ ಕಾಣುತ್ತಿದೆ. ಚರಂಡಿಯಲ್ಲಿ ನಿನ್ನೆ ರಾತ್ರಿ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿ ಸಾವನ್ನಪ್ಪಿದ್ದು, ಆತ ಯಾರೆಂಬ ಬಗ್ಗೆ ಇನ್ನೂ ಪತ್ತೆಹಚ್ಚಲಾಗುತ್ತಿದೆ. ನರೇಲಾ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ನಿನ್ನೆ ಸಂಜೆ ನಡೆದುಕೊಂಡು ಹೋಗುವಾಗ ಇದ್ದಕ್ಕಿದ್ದಂತೆ ಕಾಲು ಜಾರಿ 30 ವರ್ಷದ ವ್ಯಕ್ತಿ ಚರಂಡಿಯೊಳಗೆ ಬಿದ್ದಿದ್ದಾನೆ. ಕೊಳಚೆ ನೀರಿನಲ್ಲಿ ಕೊಚ್ಚಿ ಹೋದ ಆತನ ಶವವನ್ನು ಹೊರಗೆಳೆಯಲಾಗಿದೆ.
Rafting in Subroto park new delhi ?#DelhiRains pic.twitter.com/YbNmKWESA4
— HEMANT SEN?? (@RSunnny) September 11, 2021
ಕಳೆದ 46 ವರ್ಷಗಳಲ್ಲೇ ದೆಹಲಿಯಲ್ಲಿ ಅತಿ ಹೆಚ್ಚು ಮಳೆಯಾದ ವರ್ಷವಿದು ಎಂದು ಹೇಳಲಾಗುತ್ತಿದೆ. ದೆಹಲಿಯಲ್ಲಿ ಇದುವರೆಗೂ 380ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ, ಸಂಪೂರ್ಣ ಮುಳುಗಡೆಯಾಗಿವೆ. ದೆಹಲಿಯಲ್ಲಿ ಭಾರೀ ಮಳೆಯಿಂದ ಇಂದು ಕೇವಲ 23.4 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದೆ. ನಿನ್ನೆ ಸುರಿದ ಮಳೆಯಿಂದ ವಿಮಾನ ನಿಲ್ದಾಣ ಜಲಾವೃತವಾಗಿ ಕೆಲವು ಸಮಯ ವಿಮಾನ ಹಾರಾಟ ಸ್ತಬ್ಧವಾಗಿತ್ತು.
Welcome to Terminal 3 of Delhi Airport #DelhiRains #HeavyRainFall pic.twitter.com/keHEqJLRue
— Deepjyoti Barman (@DJBarman_JR) September 11, 2021
ಇದೇ ವೇಳೆ ದೆಹಲಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸುರಿದ ಮಳೆಯ ಪ್ರಮಾಣ ಕಳೆದ 121 ವರ್ಷಗಳಲ್ಲಿ ಒಂದೇ ದಿನ ಸುರಿದ ಅತ್ಯಂತ ಗರಿಷ್ಠ ಮಟ್ಟದ ಮಳೆ ಎನಿಸಿಕೊಂಡಿದೆ. ಸೆಪ್ಟೆಂಬರ್‌ನಲ್ಲಿ 390 ಮಿ.ಮೀ. ಮಳೆ ಸುರಿದಿದೆ. ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ನೀರು ನುಗ್ಗಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
Big Breaking !! @TajinderBagga ji enjoyed Dal Lake in Delhi during #DelhiRains ? . pic.twitter.com/IoAwHmsmtb
— Anil Singh (@Anilsingh9761) September 11, 2021
ಇದನ್ನೂ ಓದಿ: Delhi Rain: 121 ವರ್ಷಗಳಲ್ಲೇ ಅತ್ಯಂತ ಭೀಕರ ಮಳೆ ಕಂಡ ದೆಹಲಿ, ಇಂದು ಕೂಡ ಮಳೆಯಾಗುವ ಸಾಧ್ಯತೆ
Delhi Rains: ದೆಹಲಿಯಲ್ಲಿ ಹೆಚ್ಚಿದ ಮಳೆಯ ಆರ್ಭಟ; ನೀರು ತುಂಬಿದ ಬಸ್ನಲ್ಲೇ ಜನರ ಸಂಚಾರ
(Man dies after being swept away in gushing water in Narela drain after Heavy Rainfall in Delhi)