AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Rain: ದೆಹಲಿಯಲ್ಲಿ ಜೂನ್ 30ರ ವೇಳೆಗೆ ನೈಋತ್ಯ ಮುಂಗಾರು ಪ್ರವೇಶ ಸಾಧ್ಯತೆ

Monsoon 2022: ಈ ಬಾರಿ ತನ್ನ ಸಾಮಾನ್ಯ ಆಗಮನದ ದಿನಾಂಕಕ್ಕಿಂತ ಮೂರು ದಿನಗಳ ಬಳಿಕ ಅಂದರೆ ಜೂನ್ 30ರ ಸುಮಾರಿಗೆ ದೆಹಲಿಗೆ ನೈಋತ್ಯ ಮಾನ್ಸೂನ್ ಆಗಮಿಸುವ ಸಾಧ್ಯತೆಯಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ವರದಿ ತಿಳಿಸಿದೆ.

Delhi Rain: ದೆಹಲಿಯಲ್ಲಿ ಜೂನ್ 30ರ ವೇಳೆಗೆ ನೈಋತ್ಯ ಮುಂಗಾರು ಪ್ರವೇಶ ಸಾಧ್ಯತೆ
ಮಳೆ
TV9 Web
| Edited By: |

Updated on:Jun 20, 2022 | 8:13 AM

Share

ನವದೆಹಲಿ: ಈಗಾಗಲೇ ಮುಂಗಾರು (Monsoon) ಆಗಮನದಿಂದ ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಮತ್ತು ಮಹಾರಾಷ್ಟ್ರ, ಅಸ್ಸಾಂ, ಮೇಘಾಲಯ ಮುಂತಾದ ರಾಜ್ಯಗಳಲ್ಲಿ ವರುಣನ ಆರ್ಭಟ (Heavy Rainfall) ಜೋರಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದೊಂದು ವಾರದಿಂದ ತುಂತುರು ಮಳೆಯಾಗುತ್ತಿದ್ದರೂ ಅಧಿಕೃತವಾಗಿ ಇನ್ನೂ ಮುಂಗಾರು (Rain Updates) ಪ್ರವೇಶವಾಗಿಲ್ಲ. ಈ ಬಾರಿ ತನ್ನ ಸಾಮಾನ್ಯ ಆಗಮನದ ದಿನಾಂಕಕ್ಕಿಂತ ಮೂರು ದಿನಗಳ ಬಳಿಕ ಅಂದರೆ ಜೂನ್ 30ರ ಸುಮಾರಿಗೆ ದೆಹಲಿಗೆ ನೈಋತ್ಯ ಮಾನ್ಸೂನ್ ಆಗಮಿಸುವ ಸಾಧ್ಯತೆಯಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ವರದಿ ತಿಳಿಸಿದೆ.

ಆದರೆ, ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಅಧಿಕೃತ ಘೋಷಣೆಯನ್ನು ಮಾಡಿಲ್ಲ. ಗುಜರಾತ್, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಬಿಹಾರದಲ್ಲಿ ಭಾನುವಾರ ಮಾನ್ಸೂನ್ ಸೂಚನೆ ಸಿಕ್ಕಿದೆ ಎಂದು ಹವಾಮಾನ ಬ್ಯೂರೋ ತಿಳಿಸಿದೆ. ಮುಂದಿನ 2ರಿಂದ 3 ದಿನಗಳಲ್ಲಿ ದೇಶದ ಹೆಚ್ಚಿನ ಭಾಗಗಳನ್ನು ಮುಂಗಾರು ಆವರಿಸಲಿದೆ ಎಂದು ಹವಾಮಾನ ಕಚೇರಿ ಭವಿಷ್ಯ ನುಡಿದಿದೆ.

“ನಾವು ದೆಹಲಿಯಲ್ಲಿ ಮಾನ್ಸೂನ್ ಆಗಮನದಲ್ಲಿ 2-3 ದಿನಗಳ ವಿಳಂಬವನ್ನು ನಿರೀಕ್ಷಿಸುತ್ತಿದ್ದೇವೆ” ಎಂದು ಖಾಸಗಿ ಮುನ್ಸೂಚಕರಾದ ಸ್ಕೈಮೆಟ್ ವೆದರ್ ಸರ್ವಿಸಸ್‌ನ ಹವಾಮಾನ ಬದಲಾವಣೆ ಮತ್ತು ಹವಾಮಾನಶಾಸ್ತ್ರದ ಉಪಾಧ್ಯಕ್ಷ ಮಹೇಶ್ ಪಲಾವತ್ ಹೇಳಿದ್ದಾರೆ. ದೆಹಲಿಯಲ್ಲಿ ಪ್ರತಿವರ್ಷ ಸಾಮಾನ್ಯವಾಗಿ ಜೂನ್ 27ರಂದು ಮುಂಗಾರು ಆಗಮನವಾಗುತ್ತದೆ. ಕೆಲವು ರಾಜ್ಯಗಳಲ್ಲಿ ಸುಮಾರು 4ರಿಂದ 5 ದಿನಗಳ ಮುಂಗಾರು ವಿಳಂಬ ಆಗಮನವನ್ನು ನಿರೀಕ್ಷಿಲಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ.

ಇದನ್ನೂ ಓದಿ
Image
Karnataka Rain: ಬೆಂಗಳೂರು, ಕರಾವಳಿ, ಮಂಡ್ಯದಲ್ಲಿ 4 ದಿನ ಭಾರೀ ಮಳೆ; ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ
Image
Assam Flood: ಅಸ್ಸಾಂನಲ್ಲಿ ಭಾರೀ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತ; 19 ಲಕ್ಷ ಜನರಿಗೆ ಸಂಕಷ್ಟ
Image
Bengaluru Rain: ಸುರಿವ ಮಳೆಯನ್ನೂ ಲೆಕ್ಕಿಸದೆ ಬೆಂಗಳೂರಿನ ಟ್ರಾಫಿಕ್ ಪೊಲೀಸ್ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ; ವಿಡಿಯೋ ವೈರಲ್

ಇದನ್ನೂ ಓದಿ: Karnataka Rain: ಬೆಂಗಳೂರು, ಕರಾವಳಿ, ಮಂಡ್ಯದಲ್ಲಿ 4 ದಿನ ಭಾರೀ ಮಳೆ; ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ

“ದೆಹಲಿ ಆರಂಭದ ಬಗ್ಗೆ ನಮಗೆ ಇನ್ನೂ ಮಾಹಿತಿ ಇಲ್ಲ” ಎಂದು IMDಯ ರಾಷ್ಟ್ರೀಯ ಹವಾಮಾನ ಮುನ್ಸೂಚನೆ ಕೇಂದ್ರದ ಹಿರಿಯ ವಿಜ್ಞಾನಿ ಆರ್‌ಕೆ ಜೆನಮಣಿ ಹೇಳಿದ್ದಾರೆ. ಆದರೂ ಪೂರ್ವ ಮುಂಗಾರು ಮಳೆಯು ದೆಹಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಜೂನ್ 22ರವರೆಗೆ ಮುಂದುವರಿಯುತ್ತದೆ, ನಂತರ ಬಿಸಿ ಮತ್ತು ಶುಷ್ಕ ಗಾಳಿಯು ಬೀಸುತ್ತದೆ. ಇದು ದೆಹಲಿಯಲ್ಲಿ ತಾಪಮಾನದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಮುಂದಿನ 2ರಿಂದ 3 ದಿನಗಳಲ್ಲಿ ಉತ್ತರ, ಮಧ್ಯ ಮತ್ತು ಪೂರ್ವ ಭಾರತದಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಜೂನ್ 24 ಮತ್ತು 30ರ ನಡುವೆ ದೆಹಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಜೂನ್ 22ರಿಂದ ಪಶ್ಚಿಮ ರಾಜ್ಯಗಳಲ್ಲಿ ಬಿಸಿ ಗಾಳಿ ಬೀಸುತ್ತದೆ ಎನ್ನಲಾಗಿದೆ.

ಒಟ್ಟಾರೆ, ದೇಶದಾದ್ಯಂತ ಶೇ. 8ರಷ್ಟು ಮಾನ್ಸೂನ್ ಮಳೆ ಕಡಿಮೆಯಾಗಿದೆ. ವಾಯುವ್ಯ ಭಾರತದಲ್ಲಿ ಶೇ.33, ಮಧ್ಯ ಭಾರತದಲ್ಲಿ ಶೇ. 48, ದಕ್ಷಿಣ ಪರ್ಯಾಯ ದ್ವೀಪದಲ್ಲಿ ಶೇ. 22ರಷ್ಟು ಮಳೆಯ ಕೊರತೆ ಉಂಟಾಗಿದೆ. ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಶೇ. 48ರಷ್ಟು ಮಳೆ ಅಧಿಕವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 am, Mon, 20 June 22

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ