ದೆಹಲಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಯಮುನಾ ನದಿ (Yamuna River) ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ, ಇದರ ಪರಿಣಾಮ ಸಿಎಂ ಅರವಿಂದ್ ಕೇಜ್ರಿವಾಲ್(Arvind Kejriwal) ಅವರ ಮನೆಯವರೆಗೂ ನೀರು ಬಂದಿದೆ. ಸಾಕಷ್ಟು ರಸ್ತೆಗಳು, ಮನೆಗಳು ಜಲಾವೃತವಾಗಿವೆ. ಹರಿಯಾಣದ ಹತ್ನಿಕುಂಡ್ ಬ್ಯಾರೇಜ್ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಯಮುನಾ ನದಿಯಲ್ಲಿ ನೀರಿನ ಮಟ್ಟ 208.46 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್‌ಗಳಷ್ಟು ಹೆಚ್ಚಿದೆ.
ಅರವಿಂದ್ ಕೇಜ್ರಿವಾಲ್ ಸರ್ಕಾರ ಮಧ್ಯ ಪ್ರವೇಶಿಸಿ ಬ್ಯಾರೇಜ್‌ನಿಂದ ನೀರು ಬಿಡುವುದನ್ನು ನಿಲ್ಲಿಸುವಂತೆ ಕೇಂದ್ರವನ್ನು ಒತ್ತಾಯಿಸಿತ್ತು, ಆದರೆ ಕೇಂದ್ರವು ಬ್ಯಾರೇಜ್‌ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿದೆ ಎಂದು ಉತ್ತರಿಸಿದೆ.
ಸಿವಿಲ್ ಲೈನ್ಸ್ ಪ್ರದೇಶದ ರಿಂಗ್ ರೋಡ್ ಜಲಾವೃತಗೊಂಡಿದೆ ಮತ್ತು ಮಜ್ನು ಕಾ ತಿಲಾವನ್ನು ಕಾಶ್ಮೀರಿ ಗೇಟ್ ಐಎಸ್‌ಬಿಟಿಗೆ ಸಂಪರ್ಕಿಸುವ ಮಾರ್ಗವನ್ನು ಮುಚ್ಚಲಾಗಿದೆ. ಈ ಸ್ಥಳವು ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸ 500 ಮೀಟರ್ನಷ್ಟು ದೂರದಲ್ಲಿದೆ.
ಹರಿಯಾಣ ಬ್ಯಾರೇಜ್‌ನಿಂದ ನೀರಿನ ಹರಿವು ಮಧ್ಯಾಹ್ನ 2 ಗಂಟೆಯ ನಂತರ ಇಳಿಯುವ ನಿರೀಕ್ಷೆಯಿದೆ ಎಂದು ಕೇಂದ್ರ ಜಲ ಆಯೋಗ ತಿಳಿಸಿದೆ. ಹಳೆ ದೆಹಲಿಯು ಪ್ರವಾಹ ಪರಿಸ್ಥಿತಿಯಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಉಳಿದಿರುವ ಕಾರಣ ನಿಗಮಬೋಧ್ ಘಾಟ್ ಸ್ಮಶಾನ ಭೂಮಿಯನ್ನು ಬಳಸದಂತೆ ಜನರಿಗೆ ಸೂಚಿಸಲಾಗಿದೆ.
ಮತ್ತಷ್ಟು ಓದಿ: ಉಕ್ಕಿ ಹರಿದ ಯಮುನಾ ನದಿ; ದೆಹಲಿಯ ತಗ್ಗುಪ್ರದೇಶದಲ್ಲಿನ ಜನರ ಸ್ಥಳಾಂತರಕ್ಕೆ ಆದೇಶಿಸಿದ ಕೇಜ್ರಿವಾಲ್
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 12 ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಯಮುನಾ ನದಿ ನೀರಿನ ಮಟ್ಟvಉ 206.24 ಮೀಟರ್‌ಗೆ ಏರಿಕೆಯಾಗಿದೆ, ಯಮುನಾ ನದಿ ನೀರಿನ ಗರಿಷ್ಠ ಮಟ್ಟ 207.49 ಮೀಟರ್ ಆಗಿದೆ. ಅಪಾಯಕಾರಿ ಮಟ್ಟ ತಲುಪಿದೆ. ಹೀಗಾಗಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಸದ್ಯ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ ಎಂದು ಹೇಳಿರುವ ಸಿಎಂ ಕೇಜ್ರಿವಾಲ್, ಒಂದು ವೇಳೆ ಅಂತಹ ಸ್ಥಿತಿ ಎದುರಾದರೆ ಸನ್ನದ್ಧರಾಗಿದ್ದೇವೆ. ನೀರಿನ ಮಟ್ಟ 206 ಮೀಟರ್‌ಗೆ ಏರಿಕೆಯಾದರೆ, ಜನರನ್ನು ಸ್ಥಳಾಂತರಿಸುವ ಕಾರ್ಯ ಶುರು ಮಾಡುತ್ತೇವೆ, ನದಿ ತೀರದಲ್ಲಿ ವಾಸಿಸುವ 41 ಸಾವಿರ ಜನರನ್ನು ಗುರುತಿಸಲಾಗಿದ್ದು, ಅವರಿಗಾಗಿ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಅಂತೆಯೇ ಸಿಡಬ್ಲ್ಯುಸಿ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ