ದೆಹಲಿಯಲ್ಲಿ ಜಲಪ್ರಳಯ; 15 ವಿಮಾನಗಳ ಮಾರ್ಗ ಬದಲಾವಣೆ, 50ಕ್ಕೂ ಹೆಚ್ಚು ವಿಮಾನಗಳು ವಿಳಂಬ
ದೆಹಲಿ ಹಾಗೂ ಸುತ್ತಮುತ್ತಲ ಎನ್‌ಸಿಆರ್ (NCR) ಪ್ರದೇಶಗಳಾದ ನೋಯ್ಡಾ, ಘಾಜಿಯಾಬಾದ್, ಗುರುಗ್ರಾಮ ಮತ್ತು ಫರೀದಾಬಾದ್‌ಗಳಲ್ಲಿ ಇಂದು ಭಾರಿ ಮಳೆ ಮತ್ತು ಬಿರುಗಾಳಿ ತೀವ್ರಗೊಂಡಿದೆ. ಭೀಕರ ಮಳೆಯಿಂದಾಗಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರ ವ್ಯತ್ಯಯಗೊಂಡಿದ್ದು, ಒಟ್ಟು 15 ವಿಮಾನಗಳನ್ನು ಇತರೆ ನಗರಗಳಿಗೆ ಮಾರ್ಗ ಬದಲಾಯಿಸಿ ಕಳುಹಿಸಲಾಗಿದೆ. ಇದರಿಂದ ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಾಗಿದ್ದ ಪ್ರಯಾಣಿಕರು ಮತ್ತು ಅಲ್ಲಿಂದ ವಿಮಾನವೇರಲು ಕಾಯುತ್ತಿದ್ದ ಪ್ರಯಾಣಿಕರು ಪರದಾಡುವಂತಾಯಿತು.

ನವದೆಹಲಿ, ಆಗಸ್ಟ್ 24: ದೆಹಲಿಯಲ್ಲಿ (Delhi Rains) ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದೆ. ಇದರಿಂದ ನಗರದೆಲ್ಲೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನರು ರಸ್ತೆಗಿಳಿಯಲೂ ಆಗದಂತಹ ಪರಿಸ್ಥಿತಿ ಇದೆ. ಇದರ ನಡುವೆ ಬಿರುಗಾಳಿಸಹಿತ ಮಳೆಯಿಂದ (Rainfall) ಇಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Indira Gandhi International Airport) ಕೂಡ ವಿಮಾನ ಕಾರ್ಯಾಚರಣೆಗೆ ತೀವ್ರ ಅಡಚಣೆಯಾಗಿದೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ 50ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿದೆ. ಹಾಗೇ, 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಹವಾಮಾನ ವೈಪರೀತ್ಯದ ಕಾರಣದಿಂದಾಗಿ ದೆಹಲಿಗೆ ಆಗಮಿಸಬೇಕಿದ್ದ ಹಾಗೂ ನಿರ್ಗಮಿಸಬೇಕಿದ್ದ 3 ಅಂತಾರಾಷ್ಟ್ರೀಯ ವಿಮಾನಗಳು ಸೇರಿದಂತೆ ಸುಮಾರು 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ.
ಧಾರಾಕಾರ ಮಳೆಯಿಂದಾಗಿ ದೆಹಲಿಯಾದ್ಯಂತ ಭಾರಿ ಪ್ರಮಾಣದಲ್ಲಿ ನೀರು ನಿಂತು ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆಯು (IMD) ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ರೆಡ್ ಅಲರ್ಟ್ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ದೆಹಲಿ-ಎನ್‌ಸಿಆರ್ ಮತ್ತು ನೆರೆಯ ಪ್ರದೇಶಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಉತ್ತರಾಖಂಡ, ಒಡಿಶಾ ಮತ್ತು ತೆಲಂಗಾಣದ ಹಲವು ಭಾಗಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗುರುಗ್ರಾಮ ಮತ್ತು ಫರೀದಾಬಾದ್ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.
ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ:
ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಕಾರ್ಯಾಚರಣೆಗೆ ತೀವ್ರ ಅಡಚಣೆಯಾಗಿದೆ. 3 ಅಂತಾರಾಷ್ಟ್ರೀಯ ವಿಮಾನಗಳು ಸೇರಿದಂತೆ ಒಟ್ಟು 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಇವುಗಳಲ್ಲಿ 12 ವಿಮಾನಗಳನ್ನು ಜೈಪುರಕ್ಕೆ, 2 ವಿಮಾನಗಳನ್ನು ಚಂಡೀಗಢಕ್ಕೆ ಹಾಗೂ 1 ವಿಮಾನವನ್ನು ಲಕ್ನೋಗೆ ಕಳುಹಿಸಲಾಗಿದೆ.
VIDEO | Delhi: Heavy rains cause waterlogging in the city; visuals from Vatika Chowk.
(Full video available on PTI Videos – https://t.co/n147TvrpG7) pic.twitter.com/QI4Z4Hqxe8
— Press Trust of India (@PTI_News) August 24, 2026
ವಿಮಾನಯಾನ ಸಂಸ್ಥೆಗಳಿಂದ ಪ್ರಯಾಣಿಕರಿಗೆ ಸಲಹೆ:
ಸ್ಪೈಸ್‌ಜೆಟ್ ಸೇರಿದಂತೆ ಹಲವು ಪ್ರಮುಖ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಮುನ್ನೆಚ್ಚರಿಕಾ ಪ್ರಕಟಣೆ ಹೊರಡಿಸಿದ್ದು, ಕೆಟ್ಟ ಹವಾಮಾನವು ಸಂಪರ್ಕಿಸುವ (Connecting) ವಿಮಾನಗಳ ಮೇಲೆಯೂ ಪರಿಣಾಮ ಬೀರಬಹುದು ಎಂದು ಎಚ್ಚರಿಸಿವೆ. ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಯನ್ನು ಆನ್ಲೈನ್ನಲ್ಲಿ ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ.
Adverse weather conditions may impact flight operations to and from Delhi today.
To ensure a smooth travel experience, we encourage our passengers to check the latest flight status at the following link before heading to the airport: https://t.co/5vemTROi62…
— Air India (@airindia) August 24, 2026
ಇದನ್ನೂ ಓದಿ: ಸೆಪ್ಟೆಂಬರ್ 1ರಿಂದ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಬೋರ್ಡಿಂಗ್ ಪಾಸ್ ಸ್ಟಾಂಪಿಂಗ್ ಕಡ್ಡಾಯವಿಲ್ಲ
ಇಂಡಿಗೋ:
ವಿಮಾನಗಳ ವ್ಯತ್ಯಯದ ಕುರಿತು ಪ್ರಯಾಣಿಕರನ್ನು ಎಚ್ಚರಿಸಿರುವ ಇಂಡಿಗೋ, “ದೆಹಲಿಯಲ್ಲಿನ ಪ್ರತಿಕೂಲ ಹವಾಮಾನವು ವಿಮಾನಗಳ ಸಮಯಪಾಲನೆಯ ಮೇಲೆ ಪರಿಣಾಮ ಬೀರಿದೆ. ನಾವು ಹವಾಮಾನದ ಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದೇವೆ. ನಿಮ್ಮನ್ನು ಸುರಕ್ಷಿತವಾಗಿ ಹಾಗೂ ಸುಲಭವಾಗಿ ತಲುಪಿಸಲು ನಮ್ಮಿಂದಾಗುವ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇವೆ” ಎಂದು ತಿಳಿಸಿದೆ.
#WeatherUpdate: Due to bad weather in Delhi (DEL), all departures/arrivals and their consequential flights might be affected. Passengers are requested to check their flight status via https://t.co/ZsAAnbsXYR.
— SpiceJet (@flyspicejet) August 24, 2026
ಸ್ಪೈಸ್‌ಜೆಟ್:
“ದೆಹಲಿಯಲ್ಲಿನ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಎಲ್ಲಾ ನಿರ್ಗಮನ ಹಾಗೂ ಆಗಮನ ಮತ್ತು ಅದರ ಪರಿಣಾಮವಾಗಿ ಹೊರಡುವ ಮುಂದಿನ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು. ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಹೊರಡುವ ಮುನ್ನ ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಿಕೊಳ್ಳಲು ವಿನಂತಿಸಲಾಗಿದೆ” ಎಂದು ತಿಳಿಸಿದೆ.
#TravelUpdate: Due to severe weather conditions in Delhi certain flights across our network have been impacted. We realize that this may inconvenience your travel plans and seek your patience and understanding. While this situation is completely beyond our control, please rest…
— Akasa Air (@AkasaAir) August 24, 2026
ಆಕಾಸಾ ಏರ್:
“ದೆಹಲಿಯಲ್ಲಿನ ತೀವ್ರ ಹವಾಮಾನ ಪರಿಸ್ಥಿತಿಯಿಂದಾಗಿ ನಮ್ಮ ಜಾಲದ ಪ್ರಮುಖ ವಿಮಾನಗಳ ಮೇಲೆ ಪರಿಣಾಮ ಬೀರಿದೆ. ಇದು ನಿಮ್ಮ ಪ್ರಯಾಣದ ಯೋಜನೆಗಳಿಗೆ ಅನಾನುಕೂಲತೆಯನ್ನುಂಟು ಮಾಡಬಹುದು. ದಯವಿಟ್ಟು ಸಹಕರಿಸಿ” ಎಂದು ಆಕಾಸಾ ಕೋರಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




