AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Rains: ದೆಹಲಿಯಲ್ಲಿ ಹೆಚ್ಚಿದ ಮಳೆಯ ಆರ್ಭಟ; ನೀರು ತುಂಬಿದ ಬಸ್​ನಲ್ಲೇ ಜನರ ಸಂಚಾರ

ಇನ್ನೂ 4 ದಿನಗಳ ಕಾಲ ನವದೆಹಲಿಯ ಸುತ್ತಮುತ್ತ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Delhi Rains: ದೆಹಲಿಯಲ್ಲಿ ಹೆಚ್ಚಿದ ಮಳೆಯ ಆರ್ಭಟ; ನೀರು ತುಂಬಿದ ಬಸ್​ನಲ್ಲೇ ಜನರ ಸಂಚಾರ
ಮಳೆ
TV9 Web
| Edited By: |

Updated on: Jul 27, 2021 | 4:29 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 100 ಮಿ.ಮೀ. ಮಳೆಯಾಗಿದೆ. ಮಳೆಯಿಂದ ದೆಹಲಿಯ (Delhi Rains) ರಸ್ತೆಗಳಲ್ಲಿ ನೀರು ನಿಂತಿದ್ದು, ಆಟೋ, ಬಸ್​ಗಳ ಒಳಗೆ ಕೂಡ ನೀರು ತುಂಬಿದೆ. ಇದರಿಂದ ಪ್ರಯಾಣಿಕರು ನೀರು ನಿಂತ ಬಸ್​ಗಳಲ್ಲೇ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ದೆಹಲಿಯ ಮಳೆಯ ಆರ್ಭಟದ ವಿಡಿಯೋಗಳು ಟ್ವಿಟ್ಟರ್​ನಲ್ಲಿ ಹರಿದಾಡುತ್ತಿವೆ.

ದೆಹಲಿಯ ಸುತ್ತಮುತ್ತಲಿನ ರಾಜ್ಯಗಳಲ್ಲೂ ಮಳೆ ಹೆಚ್ಚಾಗಿದೆ. ದೆಹಲಿಯ ಪಲಾಂ ಎಂಬ ಪ್ರದೇಶದಲ್ಲಿ ಚಲಿಸುವ ಬಸ್​ನೊಳಗೆ ಕೆಸರು ತುಂಬಿದ ನೀರು ನುಗ್ಗಿ ಪ್ರಯಾಣಿಕರು ಪರದಾಡಬೇಕಾಯಿತು. ಆ ವಿಡಿಯೋ ಕೂಡ ವೈರಲ್ ಆಗಿದೆ.

ಇನ್ನೂ 4 ದಿನಗಳ ಕಾಲ ನವದೆಹಲಿಯ ಸುತ್ತಮುತ್ತ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ, ಮಹಾರಾಷ್ಟ್ರ, ಮಧ್ಯಪ್ರದೇಶ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶದಲ್ಲಿ ಕೂಡ ಜುಲೈ 29ರವರೆಗೆ ಭಾರೀ ಮಳೆಯಾಗಲಿದೆ. ಬಳಿಕ, ಈ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕೊಂಚ ಇಳಿಮುಖವಾಗಿದೆ.

ದೆಹಲಿಯಲ್ಲಿ ಸುರಿಯುತ್ತಿರುವ ಮಳೆಯಿಂದ ಸಾಕೇತ್ ಮೆಟ್ರೋ ಸ್ಟೇಷನ್​ನ ಗೇಟ್​ಗಳನ್ನು ಮುಚ್ಚಲಾಗಿದೆ. ಮಳೆ ಕಡಿಮೆಯಾಗುವವರೆಗೂ ಈ ಮಾರ್ಗದಲ್ಲಿ ಮೆಟ್ರೋ ರೈಲುಗಳು ಸಂಚರಿಸುವುದಿಲ್ಲ. ಮಳೆಯಿಂದ ದೆಹಲಿಯಲ್ಲಿ ಟ್ರಾಫಿಕ್ ಸಮಸ್ಯೆಯೂ ಹೆಚ್ಚಾಗಿದೆ. ಬಹುತೇಕ ರಸ್ತೆಗಳಲ್ಲಿ 2 ಅಡಿ ನೀರು ನಿಂತಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ಈ ನಡುವೆ ಪ್ರವಾಹ, ಭೂಕುಸಿತದಿಂದಾಗಿ ಮಹಾರಾಷ್ಟ್ರದ 192 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ 25 ಜನರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಇದುವರೆಗೂ ಮಹಾರಾಷ್ಟ್ರ ರಾಜ್ಯದ ನಾನಾ ಭಾಗಗಳಲ್ಲಿ ಸುಮಾರು 3.7 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಕೃಷ್ಣಾ ಮತ್ತು ಪಂಚಗಂಗಾ ನದಿಗಳ ನೀರಿನ ಮಟ್ಟ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಇದನ್ನೂ ಓದಿ: Maharashtra Rains: ಮಹಾರಾಷ್ಟ್ರದ ಪ್ರವಾಹಕ್ಕೆ 192 ಜನ ಬಲಿ; ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

Maharashtra Rains: 9 ಲಕ್ಷ ರೂ. ಹಣ ಕಾಪಾಡಲು ಮಳೆಯಲ್ಲೇ 7 ಗಂಟೆ ಬಸ್ ಮೇಲೆ ಹತ್ತಿ ಕುಳಿತ ಡಿಪೋ ಮ್ಯಾನೇಜರ್!

(Delhi Rains Leaves Roads Flooded Rain Water Enters Moving Bus IMD Predicts Heavy Rain for 4 More Days)

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್