Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಬಾಲಕಿ ಭೇಟಿಗೆ ಅವಕಾಶ ಕಲ್ಪಿಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ಪಟ್ಟು

ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರವೆಸಗಿದ್ದ ಆರೋಪದ ಮೇಲೆ ದೆಹಲಿ ಸರ್ಕಾರದ ಹಿರಿಯ ಅಧಿಕಾರಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಾಲಕಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು  ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ಭೇಟಿಯಾಗಬೇಕೆಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಪಟ್ಟುಹಿಡಿದಿದ್ದಾರೆ. ಸೋಮವಾರ ರಾತ್ರಿ ಆಸ್ಪತ್ರೆಯ ನೆಲದ ಮೇಲೆ ಮಲಗಿರುವ ಫೋಟೊಗಳು ವೈರಲ್ ಆಗಿವೆ.

ದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಬಾಲಕಿ ಭೇಟಿಗೆ ಅವಕಾಶ ಕಲ್ಪಿಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ಪಟ್ಟು
ಸ್ವಾತಿ ಮಲಿವಾಳ್Image Credit source: India Today
Follow us
ನಯನಾ ರಾಜೀವ್
|

Updated on: Aug 22, 2023 | 12:08 PM

ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರವೆಸಗಿದ್ದ ಆರೋಪದ ಮೇಲೆ ದೆಹಲಿ ಸರ್ಕಾರದ ಹಿರಿಯ ಅಧಿಕಾರಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಾಲಕಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು  ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ಭೇಟಿಯಾಗಬೇಕೆಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಪಟ್ಟುಹಿಡಿದಿದ್ದಾರೆ. ಸೋಮವಾರ ರಾತ್ರಿ ಆಸ್ಪತ್ರೆಯ ನೆಲದ ಮೇಲೆ ಮಲಗಿರುವ ಫೋಟೊಗಳು ವೈರಲ್ ಆಗಿವೆ.

ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ತಾಯಿಯನ್ನು ಭೇಟಿಯಾಗಲು ತನಗೆ ಅವಕಾಶ ನೀಡಲಿಲ್ಲ ಮತ್ತು ಪೊಲೀಸರು ಗೂಂಡಾಗಿರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ದೆಹಲಿ ಪೊಲೀಸರು ನನ್ನಿಂದ ಏನನ್ನು ಮರೆಮಾಡಲು ಬಯಸುತ್ತಾರೆಂದು ನನಗೆ ಅರ್ಥವಾಗುತ್ತಿಲ್ಲ. ಮಲಿವಾಲ್ ಸೋಮವಾರ ಮಧ್ಯಾಹ್ನದಿಂದ ಆಸ್ಪತ್ರೆಯಲ್ಲಿದ್ದರು ಮತ್ತು ಅತ್ಯಾಚಾರ ಸಂತ್ರಸ್ತೆಯನ್ನು ಭೇಟಿಯಾಗದ ಹೊರತು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಆಕೆಗೆ ಎಲ್ಲ ರೀತಿಯ ನೆರವು ಸಿಗುತ್ತಿದೆಯೋ ಇಲ್ಲವೋ ಮತ್ತು ಆಕೆಗೆ ಸರಿಯಾದ ಚಿಕಿತ್ಸೆ ಸಿಗುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ನಾನು ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಸ್ನೇಹಿತನ ಹದಿಹರೆಯದ ಮಗಳ ಮೇಲೆ ಅತ್ಯಾಚಾರವೆಸಗಿದ ದೆಹಲಿ ಅಧಿಕಾರಿ, ಗರ್ಭಪಾತಕ್ಕೆ ಪತ್ನಿ ಸಹಕಾರ: ಕೇಸು ದಾಖಲು

ಆರೋಪಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉಪನಿರ್ದೇಶಕರನ್ನಾಗಿ ನಿಯೋಜಿಸಲಾಗಿದ್ದು, ಅವರನ್ನು ಅಮಾನತುಗೊಳಿಸಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ. ಸಂತ್ರಸ್ತ ಬಾಲಕಿಯು ಅಕ್ಟೋಬರ್ 1, 2020 ರಂದು ತನ್ನ ತಂದೆಯ ಮರಣದ ನಂತರ ಆರೋಪಿ ಮತ್ತು ಅವನ ಕುಟುಂಬದೊಂದಿಗೆ ವಾಸಿಸುತ್ತಿದ್ದಳು.

ಮತ್ತಷ್ಟು ಓದಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾಗಿರುವ ಆರೋಪಿಯು ನವೆಂಬರ್ 2020 ಮತ್ತು ಜನವರಿ 2021 ರ ನಡುವೆ ಬಾಲಕಿಯ ಮೇಲೆ ಹಲವಾರು ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆತನ ಪತ್ನಿ ಬಾಲಕಿಗೆ ಗರ್ಭಪಾತದ ಮಾತ್ರೆಗಳನ್ನು ಒದಗಿಸಿದ್ದಳು ಎನ್ನುವ ಆರೋಪವೂ ಇದೆ. ದೆಹಲಿ ಸರ್ಕಾರ, ಆತ ತಪ್ಪಿತಸ್ಥನೆಂದು ಕಂಡುಬಂದರೆ, ಅವನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದೆ.

ಸಂತ್ರಸ್ತೆಯ ತಂದೆ 2020 ರಲ್ಲಿ ನಿಧನರಾಗಿದ್ದರು, ನಂತರ ಆಕೆ ಖಿನ್ನತೆಗೆ ಒಳಗಾಗಿದ್ದಳು ಆಗ ಆರೋಪಿ ಆಕೆಯೊಂದಿಗೆ ಸ್ನೇಹ ಬೆಳೆಸಿದ್ದ, ಹಾಗಾಗಿ ಆತ ಸಹಾಯ ಮಾಡುವ ನೆಪದಲ್ಲಿ ತನ್ನ ಮನೆಗೆ ಕರೆದೊಯ್ದಿದ್ದ.

ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ, ಮತ್ತೊಂದೆಡೆ ಅಮಾನತು ಆದೇಶ ಹೊರಡಿಸಿದ ಸಿಎಂ ಕೇಜ್ರಿವಾಲ್, ವಿಚಾರಣೆ ಬಾಕಿ ಇರುವವರೆಗೂ ಅಧಿಕಾರಿಯನ್ನು ಅಮಾನತು ಮಾಡುವಂತೆ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದೇನೆ. ಸಂಜೆಯೊಳಗೆ ಮುಖ್ಯ ಕಾರ್ಯದರ್ಶಿಯವರಿಂದಲೂ ವರದಿ ಕೇಳಿದ್ದೇನೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ