AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Car Blast: ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣದ ತನಿಖೆ ಎನ್​ಐಎ ಹೆಗಲಿಗೆ

ಕೇಂದ್ರ ಗೃಹ ಸಚಿವಾಲಯ ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು NIAಗೆ ವರ್ಗಾಯಿಸಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಹೊರಗೆ ಸಂಭವಿಸಿದ ಕಾರು ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿದ್ದರು. ಅದಾದ ಮರುದಿನವೇ ಕೇಂದ್ರ ಸರ್ಕಾರ ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಲು ನಿರ್ಧರಿಸಿದೆ.

Delhi Car Blast: ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣದ ತನಿಖೆ ಎನ್​ಐಎ ಹೆಗಲಿಗೆ
Delhi Blast Area
ಸುಷ್ಮಾ ಚಕ್ರೆ
|

Updated on: Nov 11, 2025 | 3:54 PM

Share

ನವದೆಹಲಿ, ನವೆಂಬರ್ 11: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನಿನ್ನೆ (ಸೋಮವಾರ) ಸಂಜೆ ನಡೆದ ಕಾರು ಸ್ಫೋಟ (Delhi Car Blast) ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇದಾದ ನಂತರ ದೇಶಾದ್ಯಂತ ಹೈ ಅಲರ್ಟ್​ ಘೋಷಿಸಲಾಗಿತ್ತು. ಈ ಘಟನೆಯ ತನಿಖೆಯ ಹೊಣೆಯನ್ನು ಎನ್​ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ)ಗೆ ವಹಿಸಲಾಗಿದೆ. ಇಂದು (ಮಂಗಳವಾರ) ಬೆಳಿಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸೋಮವಾರ ಸಂಜೆ 12 ಜನರು ಸಾವನ್ನಪ್ಪಿ 25 ಕ್ಕೂ ಹೆಚ್ಚು ಜನರು ಗಾಯಗೊಂಡ ದೆಹಲಿ ಕೆಂಪು ಕೋಟೆ ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕೃತವಾಗಿ ವಹಿಸಿಕೊಂಡಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್‌ನಲ್ಲಿ ಹುಂಡೈ i20 ಕಾರಿನಲ್ಲಿ ಸ್ಫೋಟ ಸಂಭವಿಸಿತ್ತು. ಪ್ರಾಥಮಿಕ ವಿಧಿವಿಜ್ಞಾನ ವರದಿಗಳು ಅಮೋನಿಯಂ ನೈಟ್ರೇಟ್, ಇಂಧನ ತೈಲ ಮತ್ತು ಡಿಟೋನೇಟರ್‌ಗಳ ಬಳಕೆಯನ್ನು ಸೂಚಿಸುತ್ತವೆ.

ಇದನ್ನೂ ಓದಿ: Delhi Car Blast: ದೆಹಲಿಯ ಕೆಂಪು ಕೋಟೆ ಬಳಿ ಇಂದು ಸಂಜೆ ನಡೆದಿದ್ದೇನು? ಸ್ಫೋಟಕ್ಕೆ ಕಾರಣವೇನು?

ಈ ಪ್ರಕರಣವನ್ನು NIAಗೆ ಹಸ್ತಾಂತರಿಸಿದ ನಂತರ ಅದರ ತಂಡವು ತಕ್ಷಣವೇ ಕೆಂಪು ಕೋಟೆಯ ಬಳಿಯ ಸ್ಥಳಕ್ಕೆ ತಲುಪಿ ಸಮಗ್ರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಸುತ್ತಮುತ್ತಲಿನ ಪ್ರದೇಶಗಳನ್ನು ಪರಿಶೀಲಿಸಿತು, ಪುರಾವೆಗಳನ್ನು ಸಂಗ್ರಹಿಸಿತು ಮತ್ತು ಶಂಕಿತರ ಚಲನವಲನಗಳನ್ನು ಪತ್ತೆಹಚ್ಚಲಾರಂಭಿಸಿತು.

ಅಮಿತ್ ಶಾ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಗೃಹ ಕಾರ್ಯದರ್ಶಿ, ನಿರ್ದೇಶಕ ಐಬಿ, ದೆಹಲಿ ಪೊಲೀಸ್ ಆಯುಕ್ತರು ಮತ್ತು ಡಿಜಿ NIA ಸಭೆಯಲ್ಲಿ ಭಾಗವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು.

“ನಮ್ಮ ಏಜೆನ್ಸಿಗಳು ಸ್ಫೋಟದ ಕಾರಣದ ಬಗ್ಗೆ ಶೀಘ್ರದಲ್ಲೇ ತೀರ್ಮಾನಕ್ಕೆ ಬರುತ್ತವೆ ಎಂದು ನಾನು ಭಾವಿಸುತ್ತೇನೆ. ಹಿರಿಯ ಎಫ್‌ಎಸ್‌ಎಲ್ ತಂಡವೂ ಬಂದಿದೆ” ಎಂದು ಸಚಿವ ಅಮಿತ್ ಶಾ ಹೇಳಿದ್ದಾರೆ.

ಸ್ಫೋಟದ ಉಂಟಾಗಿದ್ದ ಹುಂಡೈ ಐ20 ಕಾರು ಸೋಮವಾರ ಬೆಳಿಗ್ಗೆ 7.30ರ ಸುಮಾರಿಗೆ ಮೊದಲು ಫರಿದಾಬಾದ್‌ನ ಏಷ್ಯನ್ ಆಸ್ಪತ್ರೆಯ ಹೊರಗೆ ಕಾಣಿಸಿತ್ತು. ನಂತರ ಸೋಮವಾರ ಬೆಳಿಗ್ಗೆ 8.13ರ ಸುಮಾರಿಗೆ ಬದರ್ಪುರ್ ಟೋಲ್ ಬೂತ್‌ನಿಂದ ಫರಿದಾಬಾದ್ ರಸ್ತೆಯ ಮೂಲಕ ದೆಹಲಿಯನ್ನು ಪ್ರವೇಶಿಸಿತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಸ್ಫೋಟ: ಐ20 ಕಾರಿನ ಬಗ್ಗೆ ಶಾಕಿಂಗ್ ಮಾಹಿತಿ ಬಯಲು, ಕೆಂಪುಕೋಟೆ ಬಳಿ ಬಂದಿದ್ಹೇಗೆ?

ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಹೊರಗೆ ನಡೆದ ಸ್ಫೋಟದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಅಕ್ಟೋಬರ್ 29ರಂದು ಹುಂಡೈ i20 ಕಾರು ಖರೀದಿಸಿದ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ನಿವಾಸಿ 34 ವರ್ಷದ ವ್ಯಕ್ತಿಯ ಮೇಲೆ ಕಣ್ಣಿಟ್ಟಿದ್ದಾರೆ.

ದೆಹಲಿ ಪೊಲೀಸರು ಪಹರ್‌ಗಂಜ್, ದರಿಯಾಗಂಜ್ ಮತ್ತು ಹತ್ತಿರದ ಪ್ರದೇಶಗಳಲ್ಲಿನ ಹೋಟೆಲ್‌ಗಳಲ್ಲಿ ರಾತ್ರಿಯಿಡೀ ದಾಳಿ ನಡೆಸಿ, ಹೋಟೆಲ್ ನೋಂದಣಿಗಳನ್ನು ಸಂಪೂರ್ಣವಾಗಿ ಪರಿಶೀಲಿಸುತ್ತಿದ್ದಾರೆ. ನಾಲ್ವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಈಗಾಗಲೇ ದೆಹಲಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದ್ದು, ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಕಟ್ಟುನಿಟ್ಟಿನ ಎಚ್ಚರ ವಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ