AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಸೀಮಾಪುರಿಯಲ್ಲಿ 4 ಮಹಡಿ ಕಟ್ಟಡ ಕುಸಿತ, ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯಾಚರಣೆ ಶುರು

ದೆಹಲಿಯ ಸತ್ಯ ನಿಕೇತನದಲ್ಲಿ ಭೀಕರ ಕಟ್ಟಡ ದುರಂತ ಸಂಭವಿಸಿದ ಕೇವಲ ಒಂದೇ ತಿಂಗಳಲ್ಲಿ ಈಶಾನ್ಯ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಬುಧವಾರ ಮತ್ತೊಂದು 4 ಮಹಡಿಯ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಕಾಂಕ್ರೀಟ್ ಶಿಥಿಲಾವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಈ ದುರಂತವು ಸೀಮಾಪುರಿಯ ಈದ್ಗಾ ಮಸೀದಿಯ ಬಳಿ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ರಕ್ಷಿಸಿ, ಆ್ಯಂಬುಲೆನ್ಸ್ ಮೂಲಕ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ದೆಹಲಿಯ ಸೀಮಾಪುರಿಯಲ್ಲಿ 4 ಮಹಡಿ ಕಟ್ಟಡ ಕುಸಿತ, ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯಾಚರಣೆ ಶುರು
ದೆಹಲಿಯ ಸೀಮಾಪುರಿಯಲ್ಲಿ 4 ಮಹಡಿ ಕಟ್ಟಡ ಕುಸಿತImage Credit source: TV9
ಸುಷ್ಮಾ ಚಕ್ರೆ
|

Updated on: Oct 07, 2026 | 6:00 PM

Share

ನವದೆಹಲಿ, ಅಕ್ಟೋಬರ್ 7: ಈಶಾನ್ಯ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಇಂದು 4 ಮಹಡಿಯ ಕಟ್ಟಡವೊಂದರ ಮುಂಭಾಗದ ಭಾಗವು ದಿಢೀರ್ ಕುಸಿದು ಬಿದ್ದಿದ್ದು, ಕಾಂಕ್ರೀಟ್ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ದುರಂತ ಸಂಭವಿಸಿದ ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ನಿವಾಸಿಗಳು ಶಿಥಿಲಾವಶೇಷಗಳ ಅಡಿಯಲ್ಲಿದ್ದ ಇಬ್ಬರು ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. 25 ಚದರ ಗಜಗಳಷ್ಟು ಚಿಕ್ಕ ಜಾಗದಲ್ಲಿ ನಿರ್ಮಿಸಲಾಗಿದ್ದ ಈ 4 ಮಹಡಿಯ ಕಟ್ಟಡದ ನೆಲಮಹಡಿಯಲ್ಲಿ ಅಂಗಡಿಗಳಿದ್ದು, ಮೇಲಿನ ಮಹಡಿಗಳಲ್ಲಿ ವಸತಿ ಗೃಹಗಳಿದ್ದವು. ಮಧ್ಯಾಹ್ನ ಸುಮಾರು 3.30ರ ವೇಳೆಗೆ ಕಟ್ಟಡ ಕುಸಿತದ ಕುರಿತು ದೆಹಲಿ ಅಗ್ನಿಶಾಮಕ ಸೇವೆಗೆ ಕರೆ ಬಂದಿದ್ದು, ತಕ್ಷಣವೇ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆ ಚುರುಕು:

ಸ್ಥಳದಲ್ಲಿ ದೆಹಲಿ ಅಗ್ನಿಶಾಮಕ ದಳ, ದೆಹಲಿ ಪೊಲೀಸ್ ಮತ್ತು ರಕ್ಷಣಾ ಸಿಬ್ಬಂದಿ ಜಂಟಿಯಾಗಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಈಸ್ಟರ್ನ್ ರೇಂಜ್ ಜಂಟಿ ಪೊಲೀಸ್ ಕಮಿಷನರ್, “ಸೀಮಾಪುರಿ ಕಟ್ಟಡ ಕುಸಿತ ಪ್ರಕರಣದಲ್ಲಿ ಇದುವರೆಗೆ ಯಾವುದೇ ಸಾವು-ನೋವು ಸಂಭವಿಸಿದ ವರದಿಯಾಗಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಅವಶೇಷಗಳ ಅಡಿಯಲ್ಲಿ ಇನ್ನು ಕೆಲವರು ಸಿಲುಕಿರುವ ಸಾಧ್ಯತೆಯಿದ್ದು, ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಹೊರತೆಗೆಯಲು ರಕ್ಷಣಾ ಕಾರ್ಯ ತೀವ್ರಗೊಳಿಸಲಾಗಿದೆ.

ಇದನ್ನೂ ಓದಿ: ದೆಹಲಿ ಕಟ್ಟಡ ಕುಸಿತದಲ್ಲಿ 7 ಜನ ಸಾವು; ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಪಿಜಿ ಮಾಲೀಕನ ಬಂಧನ

ಸತ್ಯ ನಿಕೇತನ್ ಕಟ್ಟಡ ದುರಂತದ ಬೆನ್ನಲ್ಲೇ ಈ ಅವಘಡ:

ಕಳೆದ ತಿಂಗಳು (ಸೆಪ್ಟೆಂಬರ್ 6) ದೆಹಲಿಯ ಸತ್ಯ ನಿಕೇತನ್ ಪ್ರದೇಶದಲ್ಲಿ ಪೇಯಿಂಗ್ ಗೆಸ್ಟ್ 5 ಮಹಡಿಯ ಕಟ್ಟಡ ಕುಸಿದುಬಿದ್ದು, ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ 7 ಜನರು ಸಾವನ್ನಪ್ಪಿದ್ದರು. ಆ ಘಟನೆಯಲ್ಲಿ ಪಿಜಿ ಮಾಲೀಕ ಹರಿರಾಮ್, ಅವರ ಪತ್ನಿ ಊರ್ಮಿಳಾ ಮತ್ತು ಮಗ ಮಹೇಶ್ ಅವರನ್ನು ಬಂಧಿಸಲಾಗಿತ್ತು ಹಾಗೂ ದೆಹಲಿ ಮಹಾನಗರ ಪಾಲಿಕೆಯ 5 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಆ ದುರಂತ ನಡೆದ ಕೇವಲ ಒಂದು ತಿಂಗಳ ಅಂತರದಲ್ಲೇ ಸೀಮಾಪುರಿಯಲ್ಲಿ ಮತ್ತೊಂದು ಕಟ್ಟಡ ಕುಸಿತ ಸಂಭವಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ