ದೆಹಲಿ ಸೇವಾ ಮಸೂದೆ, ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಮಸೂದೆ​​ ಸೇರಿ ಒಟ್ಟು 4 ಮಸೂದೆಗೆ ರಾಷ್ಟ್ರಪತಿ ಅಂಕಿತ

ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರವಾಗಿದ್ದ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ (ಆ.11) ಸಹಿ ಹಾಕಿದ್ದಾರೆ. ದೆಹಲಿ ಸೇವಾ ಮಸೂದೆ, ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ (ಡಿಪಿಡಿಪಿ) ಮಸೂದೆ, ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆ, ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆಗೆ ಸಹಿ ಹಾಕಿದ್ದಾರೆ.

ದೆಹಲಿ ಸೇವಾ ಮಸೂದೆ, ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಮಸೂದೆ​​ ಸೇರಿ ಒಟ್ಟು 4 ಮಸೂದೆಗೆ ರಾಷ್ಟ್ರಪತಿ ಅಂಕಿತ
President Droupadi Murmu
Follow us
ಅಕ್ಷಯ್​ ಪಲ್ಲಮಜಲು​​
|

Updated on:Aug 12, 2023 | 2:47 PM

ದೆಹಲಿ, ಆ.12: ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರವಾಗಿದ್ದ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಶುಕ್ರವಾರ (ಆ.11) ಸಹಿ ಹಾಕಿದ್ದಾರೆ. ಇದರಲ್ಲಿ ಪ್ರಮುಖ ಮಸೂದೆಗಳಾಗಿದ್ದ ದೆಹಲಿ ಸೇವಾ ಮಸೂದೆ ಮತ್ತು ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ (ಡಿಪಿಡಿಪಿ) ಮಸೂದೆಗೆ ರಾಷ್ಟ್ರಪತಿಗಳು ಶುಕ್ರವಾರ ತಡರಾತ್ರಿ ಸಹಿ ಹಾಕಿದ್ದಾರೆ. ಇದರ ಜತೆಗೆ ಇಂದು (ಆ.12) ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆಗೂ ಕೂಡ ಸಹಿ ಹಾಕಿದ್ದು, ಇದು ಮುಂದೆ ಕಾನೂನನಾಗಿ ಜಾರಿಗೆ ಬರಲಿದೆ.

ದೆಹಲಿ ಸೇವಾ ಮಸೂದೆ

ದೆಹಲಿ ಸೇವಾ ಮಸೂದೆಯನ್ನು ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದೆ.  ಈ ಮಸೂದೆಗೆ ಆಮ್ ಆದ್ಮಿ ನೇತೃತ್ವದ ದೆಹಲಿ ಸರ್ಕಾರ ಬಲವಾಗಿ ವಿರೋಧಿಸಿದ್ದು. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಮಸೂದೆಯನ್ನು ತಂದಿದೆ. ನಮ್ಮ ಸರ್ಕಾರದ ಮೇಲೆ ಹಿಡಿತವನ್ನು ಸಾಧಿಸಲು ಪ್ರಯತ್ನ ಮಾಡುತ್ತಿದೆ ಎಂದು ಅಕ್ರೋಶ ವ್ಯಕ್ತಪಡಿಸಿದೆ. ದೆಹಲಿ ಸೇವಾ ಮಸೂದೆ ಲೋಕ ಸಭೆಯಲ್ಲಿ ಅಂಗೀಕರವಾಗಿ, ರಾಜ್ಯಸಭೆಯಲ್ಲಿ ಸೋಮವಾರ ಅನುಮೋದನೆ ಸಿಕ್ಕಿದೆ. ಇದೀಗ ಈ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ: ಮತದಾನದ ವೇಳೆ ವಿಪಕ್ಷ ಸಂಸದರಿಂದ ಸಭಾತ್ಯಾಗ

ಡಿಪಿಡಿಪಿ ಮಸೂದೆಗೆ ರಾಷ್ಟ್ರಪತಿ ಸಹಿ

ಇನ್ನು ಮಣಿಪುರ ಹಿಂಸಾಚಾರ ವಿಚಾರವಾಗಿ ಸದನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯ ನಡುವೆಯು ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ (ಡಿಪಿಡಿಪಿ) ಮಸೂದೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು. ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ ಬಿಲ್ (ಡಿಪಿಡಿಪಿಬಿ), 2023 ಅನ್ನು ಗುರುವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಪ್ರತಿಪಕ್ಷಗಳು ಅದನ್ನು ಹೆಚ್ಚಿನ ಪರಿಶೀಲನೆಗಾಗಿ ಸ್ಥಾಯಿ ಸಮಿತಿಗೆ ಉಲ್ಲೇಖಿಸಲು ಒತ್ತಾಯಿಸಿದಾಗ, ಧ್ವನಿ ಮತದ ಮೂಲಕ ಇದನ್ನು ಅಂಗೀಕರಿಸಲಾಗಿದೆ. ಈ ಮಸೂದೆಯನ್ನು ರಾಜ್ಯಸಭೆಯಲ್ಲೂ ಸೋಮವಾರ (ಆಗಸ್ಟ್ 7) ಅಂಗೀಕರಗೊಳಿಸಿದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಷ್ಟ್ರಪತಿಗಳು ಶುಕ್ರವಾರ ರಾತ್ರಿ ಈ ಮಸೂದೆಗೆ ಸಹಿ ಹಾಕಿದ್ದಾರೆ.

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಮಸೂದೆಗೆ ಸಂಬಂಧಿಸಿದಂತೆ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ಗ್ರಾಹಕರ ವೈಯಕ್ತಿಕ ದತ್ತಾಂಶದ ದುರುಪಯೋಗವನ್ನು ತಡೆಯುವ ಉದ್ದೇಶದಿಂದ ಡೇಟಾ ಉಲ್ಲಂಘನೆಗಾಗಿ ₹ 250 ಕೋಟಿ ದಂಡವನ್ನು ವಿಧಿಸುವುದು ಈ ಮಸೂದೆಯಲ್ಲಿ ಒಳಗೊಂಡಿದೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಗೆ ಅಂಗೀಕಾರ

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆ

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆಯು ಡಿಜಿಟಲ್ ಜನನ ಪ್ರಮಾಣಪತ್ರಗಳನ್ನು ಪಡೆಯಲು ದಾರಿ ಮಾಡಿಕೊಡುತ್ತದೆ. ಇದನ್ನು ಅನೇಕ ಉದ್ದೇಶಗಳಿಗಾಗಿ ಒಂದೇ ದಾಖಲೆಯಾಗಿ ಬಳಸಬಹುದು. ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ನೀಡುವುದು, ಮದುವೆ ನೋಂದಣಿ, ಸರ್ಕಾರಿ ಉದ್ಯೋಗಕ್ಕೆ ನೇಮಕಾತಿ ಮತ್ತು ಆಹಾರ ಕಲ್ಯಾಣ ಯೋಜನೆಗಳನ್ನು ಪಡೆಯಲು ಜನ್ಮ ಪ್ರಮಾಣಪತ್ರವನ್ನು ಬಳಸಲು ಅನುಮತಿಸುವ ನಿಬಂಧನೆಗಳನ್ನು ಈ ಕಾಯ್ದೆ ಹೊಂದಿದೆ. ಇದಕ್ಕೂ ರಾಷ್ಟ್ರಪರಿಗಳು ಸಹಿ ಹಾಕಿದ್ದಾರೆ.

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹಂಚಿಕೊಂಡ  ಕೂ ಫೋಸ್ಟ್​

ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆ

ಕೇಂದ್ರ ಸರ್ಕಾರವು ಬುಧವಾರ ರಾಜ್ಯಸಭೆಯಲ್ಲಿ ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆ 2023 ಅನ್ನು ಪರಿಚಯಿಸಿತು, ಇದು ಸಣ್ಣ ಅಪರಾಧಗಳನ್ನು ಸಾಬೀತುಪಡಿಸುವ ಮೂಲಕ ವ್ಯವಹಾರವನ್ನು ಸುಲಭಗೊಳಿಸಲು 42 ಕಾಯಿದೆಗಳಲ್ಲಿ 183 ನಿಬಂಧನೆಗಳನ್ನು ತಿದ್ದುಪಡಿ ಮಾಡಲು ಈ ಮಸೂದೆಯನ್ನು ಮಾಡಲಾಗಿದೆ. ಈ ಮಸೂದೆಗೂ ಕೂಡ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:00 pm, Sat, 12 August 23

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ