ದೆಹಲಿ ಸೇವಾ ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆ; ಸಂಸತ್ತಿನ ಮೇಲ್ಮನೆಯಲ್ಲೂ ಮೋದಿ ಸರ್ಕಾರಕ್ಕೆ ಗೆಲುವು

Delhi Services Bill; ದೆಹಲಿ ಸೇವಾ ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯುವಲ್ಲಿ ನರೇಂದ್ರ ಮೋದಿ ಸರ್ಕಾರ ಯಶಸ್ವಿಯಾಗಿದೆ. ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದ ಆಡಳಿತ (ತಿದ್ದುಪಡಿ) ಮಸೂದೆ 2023 ಅನ್ನು ಈಗಾಗಲೇ ಲೋಕಸಭೆಯು ಅಂಗೀಕರಿಸಿದೆ. ರಾಷ್ಟ್ರಪತಿಗಳ ಒಪ್ಪಿಗೆ ಬಳಿಕ ಅದು ಈಗ ಕಾನೂನಿನ ರೂಪ ಪಡೆಯಲಿದೆ.

ದೆಹಲಿ ಸೇವಾ ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆ; ಸಂಸತ್ತಿನ ಮೇಲ್ಮನೆಯಲ್ಲೂ ಮೋದಿ ಸರ್ಕಾರಕ್ಕೆ ಗೆಲುವು
ರಾಜ್ಯಸಭೆImage Credit source: PTI
Follow us
Ganapathi Sharma
|

Updated on:Aug 07, 2023 | 10:41 PM

ನವದೆಹಲಿ, ಆಗಸ್ಟ್ 7: ದೆಹಲಿ ಸೇವಾ ಮಸೂದೆಗೆ (Delhi Services Bill) ರಾಜ್ಯಸಭೆಯಲ್ಲಿ ಸೋಮವಾರ ಅನುಮೋದನೆ ದೊರೆಯಿತು. ಇದರೊಂದಿಗೆ ಸಂಸತ್ತಿನ ಮೇಲ್ಮನೆ ಅಂದರೆ ರಾಜ್ಯಸಭೆಯಲ್ಲಿ ನರೇಂದ್ರ ಮೋದಿ ಸರಕಾರಕ್ಕೆ ಭರ್ಜರಿ ಜಯ ಸಿಕ್ಕಂತಾಗಿದೆ ಹಾಗೂ ದೆಹಲಿ ಸೇವಾ ಮಸೂದೆಯನ್ನು ಅಂಗೀಕರಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಮಸೂದೆಯ ಪರವಾಗಿ 131 ಮತಗಳು ಹಾಗೂ ವಿರುದ್ಧವಾಗಿ 102 ಮತಗಳು ಚಲಾವಣೆಯಾದವು. ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದ ಆಡಳಿತ (ತಿದ್ದುಪಡಿ) ಮಸೂದೆ 2023 ಅನ್ನು ಈಗಾಗಲೇ ಲೋಕಸಭೆಯು ಅಂಗೀಕರಿಸಿದೆ. ರಾಷ್ಟ್ರಪತಿಗಳ ಒಪ್ಪಿಗೆ ಬಳಿಕ ಅದು ಈಗ ಕಾನೂನಿನ ರೂಪ ಪಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಸೋಮವಾರ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು.

ಅವಿಶ್ವಾಸ ಗೊತ್ತುವಳಿಗೂ ಮುನ್ನವೇ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರಗೊಂಡಿರುವುದು ಮೋದಿ ಸರ್ಕಾರಕ್ಕೆ ಸಂದ ದೊಡ್ಡ ಗೆಲುವು ಎಂದು ಪರಿಗಣಿಸಲಾಗಿದೆ. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಮಂಗಳವಾರದಿಂದ ಲೋಕಸಭೆಯಲ್ಲಿ ಆ ಕುರಿತು ಚರ್ಚೆ ನಡೆಯಲಿದೆ.

ವಿರೋಧ ಪಕ್ಷಗಳ ಬಹಿಷ್ಕಾರದ ನಡುವೆ ಮಸೂದೆಯನ್ನು ಲೋಕಸಭೆಯು ಗುರುವಾರ ಅಂಗೀಕರಿಸಿತ್ತು. ಸರ್ಕಾರದ ಕ್ರಮವನ್ನು ವಿಫಲಗೊಳಿಸಲು ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವಿಫಲ ಯತ್ನ ನಡೆಸಿತ್ತು. ನಂತರ ಪ್ರತಿಪಕ್ಷಗಳು ಕಲಾಪವನ್ನು ಬಹಿಷ್ಕರಿಸಿದ್ದವು.

ಬಿಜೆಡಿ, ವೈಎಸ್‌ಆರ್‌ಸಿಪಿ ಬೆಂಬಲ

ನವೀನ್ ಪಟ್ನಾಯಕ್ ಅವರ ಬಿಜೆಡಿ ಮತ್ತು ವೈಎಸ್‌ಆರ್‌ಸಿಪಿ ಮಸೂದೆಗೆ ಬೆಂಬಲ ಸೂಚಿಸಿದವು. ಹೀಗಾಗಿ ಸಣ್ಣಮಟ್ಟಿನ ಅಡೆತಡೆಗಳ ಹೊರತಾಗಿಯೂ ಮಸೂದೆ ಸುಲಭವಾಗಿ ಅಂಗೀಕಾರಗೊಂಡಿತು. ಆದಾಗ್ಯೂ, ಇದು ವಿರೋಧ ಪಕ್ಷದ ಮೈತ್ರಿಕೂಟ ‘ಇಂಡಿಯಾ’ದಿಂದ ಬಲವಾದ ಹಿನ್ನಡೆಯನ್ನು ಪಡೆಯಿತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಅಸ್ವಸ್ಥ ಶಿಬು ಸೊರೆನ್ ಅವರನ್ನೂ ನಿರ್ಣಾಯಕ ಮತದಾನಕ್ಕಾಗಿ ಸದನಕ್ಕೆ ಕರೆತರಲಾಯಿತು.

ವಿರೋಧ ಪಕ್ಷಗಳು ಪ್ರಸ್ತಾವಿತ ಶಾಸನವನ್ನು ಬಲವಾಗಿ ಆಕ್ಷೇಪಿಸಿ ಇದು ಅಸಂವಿಧಾನಿಕ, ಪ್ರಜಾಸತ್ತಾತ್ಮಕವಲ್ಲದ ಮತ್ತು ಒಕ್ಕೂಟದ ಮನೋಭಾವಕ್ಕೆ ವಿರುದ್ಧವಾಗಿದೆ ಎಂದು ಪ್ರತಿಪಾದಿಸಿದರು.

ಎಎಪಿ ಸರ್ಕಾರದ ಅಧಿಕಾರವನ್ನು ಅತಿಕ್ರಮಿಸುವುದಿಲ್ಲ; ಅಮಿತ್ ಶಾ

ಮಸೂದೆ ಕುರಿತು ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಈ ಮಸೂದೆಯು ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಮತ್ತು ಎಎಪಿ ಸರ್ಕಾರದ ಅಧಿಕಾರವನ್ನು ಅತಿಕ್ರಮಿಸುವುದಿಲ್ಲ ಎಂದು ಹೇಳಿದರು. ಜನಪ್ರಿಯ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ಉತ್ತೇಜಿಸುವ ಪರಿಣಾಮಕಾರಿ ಮತ್ತು ಪಾರದರ್ಶಕ ಆಡಳಿತವನ್ನು ನೀಡುವುದು ಮಸೂದೆಯ ಉದ್ದೇಶವಾಗಿದೆ ಎಂದು ಶಾ ಹೇಳಿದರು. ಕಾಂಗ್ರೆಸ್ ಆಡಳಿತದಿಂದಲೂ ಜಾರಿಯಲ್ಲಿರುವ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸದಸ್ಯರನ್ನು ಸಮಾಧಾನಪಡಿಸಿದರು.

ಕಾಂಗ್ರೆಸ್​ಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಲು ಹಕ್ಕಿಲ್ಲ: ಅಮಿತ್ ಶಾ ವಾಗ್ದಾಳಿ

ಕಾಂಗ್ರೆಸ್​​ನವರಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಲು ಹಕ್ಕಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಸೇವಾ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕುವ ಮುನ್ನ ಪ್ರತಿಪಕ್ಷದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು, ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಪಕ್ಷವೇ ಕಾಂಗ್ರೆಸ್. ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲದ ಪಕ್ಷ ಅದು. ಆ ಪಕ್ಷವು ಚುನಾಯಿತ ಸರ್ಕಾರಗಳನ್ನು ಪದಚ್ಯುತಗೊಳಿಸಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ: ಮತದಾನದ ವೇಳೆ ವಿಪಕ್ಷ ಸಂಸದರಿಂದ ಸಭಾತ್ಯಾಗ

ದೆಹಲಿಯ ಎಎಪಿ ಸರ್ಕಾರದ ವಿರುದ್ಧವೂ ಕಿಡಿಕಾರಿದ ಅವರು, ‘ಅಬಕಾರಿ ಹಗರಣ’ಕ್ಕೆ ಸಂಬಂಧಿಸಿದ ಕಡತಗಳು ಅಲ್ಲಿ ಬಿದ್ದಿರುವುದರಿಂದ ಅವರು (ಎಎಪಿ ಸರ್ಕಾರ) ವಿಜಿಲೆನ್ಸ್ ಇಲಾಖೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮಣಿಪುರದ ಕುರಿತು ಚರ್ಚೆಗೆ ಸಿದ್ಧ

ಮಣಿಪುರದ ಕುರಿತು ಚರ್ಚೆಗೆ ನಾನು ಸಿದ್ಧ. ನಮಗೆ ಮುಚ್ಚಿಡಲು ಏನೂ ಇಲ್ಲ, ನೀವೇ (ವಿಪಕ್ಷಗಳು) ವಿಷಯವನ್ನು ಮರೆಮಾಚಲು ಉದ್ದೇಶಿಸಿರುವವರು. ಹಾಗಾಗಿ ನೀವು ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಆಗಸ್ಟ್ 11 ರಂದು ನಡೆಯಲಿರುವ ಚರ್ಚೆಗೆ ಖರ್ಗೆ ಜೀ ಸಮ್ಮತಿಸಿದರೆ ಆಗಲೂ ನಾನು ಚರ್ಚೆಗೆ ಸಿದ್ಧನಿದ್ದೇನೆ ಎಂದು ಅಮಿತ್ ಶಾ ಹೇಳಿದ್ದಾರೆ.

ಕಾಂಗ್ರೆಸ್ಸನ್ನು ವಿರೋಧಿಸಿ ಹುಟ್ಟಿದ ಪಕ್ಷವೇ ಎಎಪಿ; ಶಾ

ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ಎಎಪಿ ಹುಟ್ಟಿದೆ. ಆ ನಂತರ ಅವರು (ಎಎಪಿ) ಕಾಂಗ್ರೆಸ್ ವಿರುದ್ಧ ಸುಮಾರು ಮೂರು ಟನ್ ಆಕ್ಷೇಪಾರ್ಹ ಪದಗಳನ್ನು ಬಳಸಿದರು ಮತ್ತು ಅಸ್ತಿತ್ವಕ್ಕೆ ಬಂದರು. ಅಂಥವರು ಇಂದು ಈ ಮಸೂದೆಯನ್ನು ವಿರೋಧಿಸಲು ಕಾಂಗ್ರೆಸ್‌ನಿಂದ ಬೆಂಬಲವನ್ನು ಕೋರುತ್ತಿದ್ದಾರೆ ಎಂದು ಶಾ ವ್ಯಂಗ್ಯವಾಡಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Mon, 7 August 23

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ