AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷ: 8 ಗಂಟೆ ಹಾರಾಡಿ ದೆಹಲಿಗೆ ವಾಪಸಾದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ

ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI173 ತಾಂತ್ರಿಕ ದೋಷದಿಂದಾಗಿ 8 ಗಂಟೆ ಹಾರಾಟದ ನಂತರ ದೆಹಲಿಗೆ ವಾಪಸಾಗಿದೆ. ಚೀನಾ ವಾಯುಪ್ರದೇಶದಿಂದ ಹಿಂದಿರುಗಿದ ವಿಮಾನದ 230 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಏರ್ ಇಂಡಿಯಾ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಿದ್ದು, ಈ ತಿಂಗಳಲ್ಲಿ ನಡೆದ ಎರಡನೇ ತಾಂತ್ರಿಕ ಘಟನೆ ಇದಾಗಿದೆ.

ತಾಂತ್ರಿಕ ದೋಷ: 8 ಗಂಟೆ ಹಾರಾಡಿ ದೆಹಲಿಗೆ ವಾಪಸಾದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ
ಏರ್ ಇಂಡಿಯಾ Image Credit source: The News Minute
ನಯನಾ ರಾಜೀವ್
|

Updated on: May 27, 2026 | 2:47 PM

Share

ನವದೆಹಲಿ, ಮೇ 27: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ 230 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ದೆಹಲಿಗೆ ವಾಪಸಾಗಿದೆ. ತಾಂತ್ರಿಕ ದೋಷದ ಕಾರಣದಿಂದಾಗಿ ಎಂಟು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿ ಮತ್ತೆ ದೆಹಲಿಗೆ ಬಂದಿದೆ. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಚೀನಾ ವಾಯುಪ್ರದೇಶದಿಂದ ವಾಪಸ್ ಮಾಹಿತಿಯ ಪ್ರಕಾರ, ಮೇ 27 ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ‘AI173’ ವಿಮಾನವು ನಿಗದಿತ ಸಮಯಕ್ಕೆ ಟೇಕ್ ಆಫ್ ಆಗಿತ್ತು. ಆದರೆ, ಚೀನಾದ ವಾಯುಪ್ರದೇಶದಲ್ಲಿ ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ ನಂತರ ವಿಮಾನದಲ್ಲಿ ತಾಂತ್ರಿಕ ದೋಷ ಇರುವುದು ಪೈಲಟ್‌ಗಳ ಗಮನಕ್ಕೆ ಬಂದಿದೆ. ನಿಗದಿತ ತುರ್ತು ಕಾರ್ಯವಿಧಾನಗಳಿಗೆ ಅನುಗುಣವಾಗಿ, ತಕ್ಷಣವೇ ವಿಮಾನವನ್ನು ದೆಹಲಿಯ ಕಡೆಗೆ ತಿರುಗಿಸಲು ನಿರ್ಧರಿಸಲಾಯಿತು. ಸುಮಾರು 8 ಗಂಟೆಗಳ ದೀರ್ಘ ಹಾರಾಟದ ನಂತರ ವಿಮಾನವು ಸುರಕ್ಷಿತವಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯಿತು.

ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ವಿಮಾನಯಾನ ಸಂಸ್ಥೆಯು ತನ್ನ ಪ್ರಯಾಣಿಕರು ಮತ್ತು ಸಿಬ್ಬಂದಿಗಳ ಸುರಕ್ಷತೆಯೇ ತನಗೆ ಅತ್ಯುನ್ನತ ಆದ್ಯತೆ ಎಂದು ಒತ್ತಿಹೇಳಿದೆ. ಹಠಾತ್ ಆದ ಈ ಬದಲಾವಣೆಯಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿರುವ ಏರ್ ಇಂಡಿಯಾ, ತಕ್ಷಣವೇ ಕಾರ್ಯಪ್ರವೃತ್ತವಾಗಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಿದೆ. ದೆಹಲಿಯಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಹೋಟೆಲ್ ವಸತಿ, ಉಪಾಹಾರ ಹಾಗೂ ಅವರ ಇಷ್ಟದಂತೆ ಮುಂದಿನ ವಿಮಾನ ವೇಳಾಪಟ್ಟಿಯನ್ನು ಬದಲಾಯಿಸಲು ಅಗತ್ಯವಿರುವ ಎಲ್ಲಾ ನೆರವನ್ನು ಏರ್ ಇಂಡಿಯಾದ ನೆಲದ ಸಿಬ್ಬಂದಿ ಒದಗಿಸುತ್ತಿದ್ದಾರೆ. ಪ್ರಸ್ತುತ ವಿಮಾನವನ್ನು ತಾಂತ್ರಿಕ ತಪಾಸಣೆಗೆ ಒಳಪಡಿಸಲಾಗಿದೆ.

ಮತ್ತಷ್ಟು ಓದಿ: ದುಬಾರಿ ಇಂಧನದ ಎಫೆಕ್ಟ್; ಕೆಲ ಅಂತಾರಾಷ್ಟ್ರೀಯ ಫ್ಲೈಟ್​ಗಳನ್ನು ನಿಲ್ಲಿಸಿದ ಏರ್ ಇಂಡಿಯಾ

ಮೇ 21 ರಂದೂ ನಡೆದಿತ್ತು ಮತ್ತೊಂದು ಘಟನೆ ಇದೇ ತಿಂಗಳ ಮೇ 21 ರಂದು ಬೆಂಗಳೂರಿನಿಂದ ದೆಹಲಿಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾದ ‘AI2802’ ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿದ ತಕ್ಷಣ ಅದರ ಒಂದು ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕಾಕ್‌ಪಿಟ್ ಸಿಬ್ಬಂದಿಗೆ ಬೆಂಕಿಯ ಮುನ್ಸೂಚನೆ ಸಿಗುತ್ತಿದ್ದಂತೆ ಎಲ್ಲಾ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು ಅನುಸರಿಸಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ