Delhi Cold Wave: ಚಳಿಗೆ ನಡುಗುತ್ತಿರುವ ದೆಹಲಿ: ದಟ್ಟ ಮಂಜಿನಿಂದಾಗಿ 20 ವಿಮಾನಗಳು, 42 ರೈಲುಗಳ ಸಂಚಾರದಲ್ಲಿ ವಿಳಂಬ

ಉತ್ತರ ಭಾರತವು ಚಳಿಯಿಂದ ನಡುಗುತ್ತಿದೆ, ದೆಹಲಿಯಲ್ಲಿ 1.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ದಟ್ಟ ಮಂಜಿನಿಂದಾಗಿ 42 ರೈಲುಗಳು ಹಾಗೂ 20 ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ.

Delhi Cold Wave:  ಚಳಿಗೆ ನಡುಗುತ್ತಿರುವ ದೆಹಲಿ: ದಟ್ಟ ಮಂಜಿನಿಂದಾಗಿ 20 ವಿಮಾನಗಳು, 42 ರೈಲುಗಳ ಸಂಚಾರದಲ್ಲಿ ವಿಳಂಬ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ನಯನಾ ರಾಜೀವ್

Updated on: Jan 08, 2023 | 11:02 AM

ಉತ್ತರ ಭಾರತವು ಚಳಿಯಿಂದ ನಡುಗುತ್ತಿದೆ, ದೆಹಲಿಯಲ್ಲಿ 1.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ದಟ್ಟ ಮಂಜಿನಿಂದಾಗಿ 42 ರೈಲುಗಳು ಹಾಗೂ 20 ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ಮಂಜು ಮತ್ತು ಹವಾಮಾನ ವೈಪರೀತ್ಯದಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿ ದಟ್ಟವಾದ ಮಂಜಿನಿಂದಾಗಿ ಇಂದು 42 ರೈಲುಗಳು ಮತ್ತು 20 ಕ್ಕೂ ಹೆಚ್ಚು ವಿಮಾನಗಳು ತಡವಾಗಿ ಓಡುತ್ತಿವೆ. ಇದರಿಂದ ಜನರು ಪ್ಲಾಟ್‌ಫಾರ್ಮ್‌ನಲ್ಲಿಯೇ ಮಲಗುವ ಅನಿವಾರ್ಯತೆ ಎದುರಾಗಿದೆ.

ಮಂಜಿನಿಂದಾಗಿ ರೈಲ್ವೆ ಕಡೆಯಿಂದ ಬರುವ ಹಲವು ರೈಲುಗಳು ವಿಳಂಬವಾಗುತ್ತಿವೆ. ಕಾಮಾಖ್ಯ-ದೆಹಲಿ ಬ್ರಹ್ಮಪುತ್ರ ಮೇಲ್, ರೇವಾ-ಆನಂದ್ ವಿಹಾರ್ ಟರ್ಮಿನಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಅಮೃತಸರ ಬಿಲಾಸ್‌ಪುರ್ ಛತ್ತೀಸ್‌ಗಢ ಎಕ್ಸ್‌ಪ್ರೆಸ್ ಮತ್ತು ಕಾಮಾಖ್ಯ-ದೆಹಲಿ ಬ್ರಹ್ಮಪುತ್ರ ಮೇಲ್ ಸೇರಿದಂತೆ ಹಲವು ರೈಲುಗಳು 5 ಗಂಟೆಗಳಿಗೂ ಹೆಚ್ಚು ತಡವಾಗಿ ಓಡುತ್ತಿವೆ.

ಅನೇಕ ರಾತ್ರಿ ರೈಲುಗಳು 5 ರಿಂದ 6 ಗಂಟೆಗಳ ಕಾಲ ತಡವಾಗಿ ಓಡುವುದರಿಂದ, ಜನರು ಪ್ಲಾಟ್‌ಫಾರ್ಮ್‌ನಲ್ಲಿ ಮಲಗುವಂತೆ ಕೇಳಿಕೊಳ್ಳಲಾಗಿತ್ತು. ದೆಹಲಿಯ ಆನಂದ್ ವಿಹಾರ್ ಟರ್ಮಿನಲ್ ರೈಲ್ವೆ ನಿಲ್ದಾಣದಲ್ಲೂ ಇದೇ ಪರಿಸ್ಥಿತಿ ಕಂಡುಬಂದಿದೆ.

20 ವಿಮಾನಗಳು ತಡ ಪ್ರತಿಕೂಲ ಹವಾಮಾನದಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಸುಮಾರು 20 ವಿಮಾನಗಳು ತಡವಾಗಿ ಹಾರಾಟ ನಡೆಸಿವೆ. ಹವಾಮಾನ ವೈಪರೀತ್ಯದಿಂದಾಗಿ ವಿಮಾನ ತಡವಾಯಿತು ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಆದರೂ ಬೆಳಿಗ್ಗೆ 6 ಗಂಟೆಯವರೆಗೆ ಯಾವುದೇ ಮಾರ್ಗವನ್ನು ಬದಲಾಯಿಸಲಾಗಿಲ್ಲ.

ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಚಳಿಗಾಳಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹಲವು ಪ್ರದೇಶಗಳಲ್ಲಿ ಶೀತಗಾಳಿ ಬೀಸುತ್ತಿದೆ. ಮುಂದಿನ 48 ಗಂಟೆಗಳಲ್ಲಿ ಪೂರ್ವ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಮತ್ತು ಉತ್ತರಾಖಂಡ, ಪಶ್ಚಿಮ ರಾಜಸ್ಥಾನದ ಪ್ರತ್ಯೇಕ ಪಾಕೆಟ್‌ಗಳಲ್ಲಿ ತೀವ್ರ ಚಳಿಯಾಗುವ ಸಾಧ್ಯತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​