AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಮನೆಯೊಂದರಲ್ಲಿ ತ್ರಿವಳಿ ಕೊಲೆ, ಕಿರಿ ಮಗನ ಮೇಲೆ ಶಂಕೆ

ದೆಹಲಿಯಲ್ಲಿ ಒಂದೇ ಮನೆಯ ಮೂವರು ಸದಸ್ಯರನ್ನು ಇರಿದು ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ದೆಹಲಿಯ ಮೈದಾನಗಢಿ ಪ್ರದೇಶದಲ್ಲಿ ತ್ರಿವಳಿ ಕೊಲೆ(Murder) ನಡೆದಿದೆ. ನಾಪತ್ತೆಯಾಗಿರುವ ಕಿರಿ ಮಗನ ಮೇಲೆ ಅನುಮಾನ ಮೂಡಿದೆ. ಮಧ್ಯವಯಸ್ಸಿನ ದಂಪತಿ ಹಾಗೂ 24 ವರ್ಷದ ಮಗ ಶವವಾಗಿ ಮನೆಯಲ್ಲಿ ಪತ್ತೆಯಾಗಿದ್ದಾರೆ. ಆದರೆ ಅವರ ಇನ್ನೊಬ್ಬ ಮಗನ ಸುಳಿವೇ ಇಲ್ಲ. ಮನೆಯಿಂದ ದುರ್ವಾಸನೆ ಬರುತ್ತಿದೆ ಎಂದು ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ತಿಳಿಸಿದ್ದರು.

ದೆಹಲಿಯ ಮನೆಯೊಂದರಲ್ಲಿ ತ್ರಿವಳಿ ಕೊಲೆ, ಕಿರಿ ಮಗನ ಮೇಲೆ ಶಂಕೆ
ಮೃತರುImage Credit source: NDTV
ನಯನಾ ರಾಜೀವ್
|

Updated on: Aug 21, 2025 | 8:09 AM

Share

ನವದೆಹಲಿ, ಆಗಸ್ಟ್ 21: ದೆಹಲಿಯ ಮೈದಾನಗಢಿ ಪ್ರದೇಶದಲ್ಲಿ ತ್ರಿವಳಿ ಕೊಲೆ(Murder) ನಡೆದಿದೆ. ನಾಪತ್ತೆಯಾಗಿರುವ ಕಿರಿ ಮಗನ ಮೇಲೆ ಅನುಮಾನ ಮೂಡಿದೆ. ಮಧ್ಯವಯಸ್ಸಿನ ದಂಪತಿ ಹಾಗೂ 24 ವರ್ಷದ ಮಗ ಶವವಾಗಿ ಮನೆಯಲ್ಲಿ ಪತ್ತೆಯಾಗಿದ್ದಾರೆ. ಆದರೆ ಅವರ ಇನ್ನೊಬ್ಬ ಮಗನ ಸುಳಿವೇ ಇಲ್ಲ. ಮನೆಯಿಂದ ದುರ್ವಾಸನೆ ಬರುತ್ತಿದೆ ಎಂದು ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ತಿಳಿಸಿದ್ದರು.

ಆಗ ಈ ಘಟನೆ ಬೆಳಕಿಗೆ ಬಂದಿದೆ.45 ರಿಂದ 50 ವರ್ಷ ವಯಸ್ಸಿನ ಪ್ರೇಮ್ ಸಿಂಗ್ ಮತ್ತು ಅವರ ಮಗ 24 ವರ್ಷ ವಯಸ್ಸಿನ ಹೃತಿಕ್ ಅವರ ಮೃತದೇಹಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದವು. ಸುಮಾರು 40 ರಿಂದ 45 ವರ್ಷ ವಯಸ್ಸಿನ ಮಹಿಳೆ ರಜನಿ ಅವರ ಶವ ಮೊದಲ ಮಹಡಿಯಲ್ಲಿ ಬಾಯಿ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ದಂಪತಿಯ ಕಿರಿಯ ಮಗ ಸಿದ್ಧಾರ್ಥ್ ನಾಪತ್ತೆಯಾಗಿದ್ದಾನೆ.

ಸಿದ್ಧಾರ್ಥ್ ಮಾನಸಿಕ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ನಂತರ, ಮನೆಯಿಂದ ದಾಖಲೆಗಳು ಮತ್ತು ಔಷಧಿಗಳು ಪತ್ತೆಯಾಗಿದ್ದು, ಕಳೆದ 12 ವರ್ಷಗಳಿಂದ ಆತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮತ್ತಷ್ಟು ಓದಿ: ದೆಹಲಿಯಲ್ಲಿ ತ್ರಿವಳಿ ಕೊಲೆ; ಅಪ್ಪ, ಅಮ್ಮ, ತಮ್ಮನನ್ನು ಕೊಂದು ಯುವಕ ಪರಾರಿ

ಇತ್ತೀಚಿನ ಮಾಹಿತಿಯ ಪ್ರಕಾರ, ಇನ್ಸ್ಟಿಟ್ಯೂಟ್ ಆಫ್ ಹ್ಯೂಮನ್ ಬಿಹೇವಿಯರ್ ಅಂಡ್ ಅಲೈಡ್ ಸೈನ್ಸಸ್ (IHBAS) ನಲ್ಲಿ ಅವರು ಆಕ್ರಮಣಕಾರಿ ನಡವಳಿಕೆ ಮತ್ತು ಗೀಳು-ಕಂಪಲ್ಸಿವ್ ಡಿಸಾರ್ಡರ್ ನಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಸಿದ್ಧಾರ್ಥ್ ಪೋಷಕರು ಮತ್ತು ಸಹೋದರನನ್ನು ಚಾಕುವಿನಿಂದ ಇರಿದು, ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಂದಿದ್ದಾನೆ ಎಂದು ಶಂಕಿಸಲಾಗಿದೆ.

ಇದಲ್ಲದೆ, ಪ್ರಾಥಮಿಕ ತನಿಖೆಯಲ್ಲಿ ಅವನು ತನ್ನ ಕುಟುಂಬದವರನ್ನು ಕೊಂದಿರುವುದಾಗಿ ಮತ್ತು ಇನ್ನುಮುಂದೆ ಮೈದಾನಗಢಿ ಮನೆಯಲ್ಲಿ ವಾಸಿಸುವುದಿಲ್ಲ ಎಂದು ಯಾರಿಗೋ ಹೇಳಿದ್ದಾನೆ ಎಂದು ತಿಳಿದುಬಂದಿದೆ. ಗ್ರಾಮದ ಪ್ರಧಾನ್ ಮೊಹಮ್ಮದ್ ಶಕೀಲ್ ಅಹ್ಮದ್ ಖಾನ್, ತಂದೆ ಮದ್ಯವ್ಯಸನಿಯಾಗಿದ್ದು, ಅವರ ಮನೆಯಲ್ಲಿ ಆಗಾಗ ಜಗಳಗಳು ನಡೆಯುತ್ತಿದ್ದವು ಎಂದು ಹೇಳಿದರು.

ಮನೆಯನ್ನು ಸೀಲ್ ಮಾಡಲಾಗಿದೆ ಮತ್ತು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಥಳದಲ್ಲಿರುವ ವಿಧಿವಿಜ್ಞಾನ ತಂಡಗಳು ಬೆರಳಚ್ಚುಗಳು ಮತ್ತು ಇತರ ಪುರಾವೆಗಳನ್ನು ಸಂಗ್ರಹಿಸುತ್ತಿವೆ. ಪೊಲೀಸರು ಸಿದ್ಧಾರ್ಥ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!