Sonia Gandhi : ಹದಗೆಟ್ಟ ಸೋನಿಯಾ ಗಾಂಧಿ ಆರೋಗ್ಯ, ಗಂಗಾರಾಮ್ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಆರೋಗ್ಯ ಹದಗೆಟ್ಟ ಕಾರಣ ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಪ್ರಕಾರ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಇಲ್ಲಿಗೆ ಕರೆತರಲಾಗಿತ್ತು. ಕೆಲವು ದಿನಗಳ ಹಿಂದೆ, ಹಿಮಾಚಲ ಪ್ರದೇಶದಲ್ಲಿ ಸೋನಿಯಾ ಗಾಂಧಿ ಆರೋಗ್ಯ ಕೈಕೊಟ್ಟಿತ್ತು. ಆ ಸಮಯದಲ್ಲಿ, ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿತ್ತು. ಇದಲ್ಲದೆ, ಫೆಬ್ರವರಿ ತಿಂಗಳಲ್ಲಿಯೂ ಸಹ, ಹೊಟ್ಟೆ ಸಮಸ್ಯೆಯಿಂದಾಗಿ ಅವರನ್ನು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Sonia Gandhi : ಹದಗೆಟ್ಟ ಸೋನಿಯಾ ಗಾಂಧಿ ಆರೋಗ್ಯ, ಗಂಗಾರಾಮ್ ಆಸ್ಪತ್ರೆಗೆ ದಾಖಲು
ಸೋನಿಯಾ ಗಾಂಧಿ
Image Credit source: PTI

Updated on: Jun 16, 2025 | 11:33 AM

ನವದೆಹಲಿ, ಜೂನ್ 16: ಕಾಂಗ್ರೆಸ್​​ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಅವರನ್ನು ಗ್ಯಾಸ್ಟ್ರೋ ವಿಭಾಗಕ್ಕೆ ದಾಖಲಿಸಲಾಗಿದ್ದು, ಅವರ ಮೇಲೆ ನಿಗಾ ಇರಿಸಲಾಗಿತ್ತು.  ಈ ಮಾಹಿತಿಯನ್ನು ಗಂಗಾ ರಾಮ್ ಆಸ್ಪತ್ರೆ ಆಡಳಿತ ನೀಡಿದೆ.  ಸೋನಿಯಾರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಜೂನ್ 7 ರಂದು ಕೂಡ ಸೋನಿಯಾ ಗಾಂಧಿ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು . ಕೆಲವು ಸಮಯದಿಂದ ಸೋನಿಯಾ ಗಾಂಧಿಯವರ ಅನಾರೋಗ್ಯ ಕುರಿತ ಹಲವು ವರದಿಗಳು ಹೊರಬರುತ್ತಿವೆ. ಆದಾಗ್ಯೂ, ಈ ನಿಟ್ಟಿನಲ್ಲಿ ಯಾವುದೇ ನಿರ್ದಿಷ್ಟ ಮಾಹಿತಿ ಹೊರಬಂದಿಲ್ಲ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಸಲಹೆಗಾರರು ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅಧಿಕ ರಕ್ತದೊತ್ತಡವಿತ್ತು ಎನ್ನುವ ಮಾಹಿತಿ ನೀಡಿದ್ದಾರೆ.

ಶಿಮ್ಲಾದ ಆಸ್ಪತ್ರೆಯಲ್ಲಿ ಅವರ ನಿಯಮಿತ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಅಧಿಕ ರಕ್ತದೊತ್ತಡದ ಇದ್ದ ಕಾರಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸಿಎಂ ಸುಖು ಅವರ ಮಾಧ್ಯಮ ಸಲಹೆಗಾರ ನರೇಶ್ ಚೌಹಾಣ್ ಸುದ್ದಿ ಸಂಸ್ಥೆಗೆ ತಿಳಿಸಿದ್ದರು. ಇದು ಸಾಮಾನ್ಯ ತಪಾಸಣೆಯಾಗಿತ್ತು. ಇದಾದ ನಂತರ ಅವರು ತಮ್ಮ ಮನೆಗೆ ಮರಳಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ; ಇಡಿ ಆರೋಪಪಟ್ಟಿ ಕುರಿತು ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್ ಜಾರಿ

ಒಂದು ವಾರದ ಹಿಂದೆ, ಅವರು ಇದ್ದಕ್ಕಿದ್ದಂತೆ ಅಲ್ಲಿನ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿಗೆ (ಐಜಿಎಂಸಿ)ಗೆ ಹೋಗಿದ್ದರು. ವೈದ್ಯರು ಅವರ ತಪಾಸಣೆ ನಡೆಸಿದ್ದರು. ಮುನ್ನೆಚ್ಚರಿಕೆಯಾಗಿ, ಅವರಿಗೆ ಕೆಲವು ಪರೀಕ್ಷೆಗಳನ್ನು ಮಾಡಲಾಗಿತ್ತು, ಆರೋಗ್ಯ ಉತ್ತಮವಾಗಿತ್ತು. ಸುಮಾರು ಒಂದು ಗಂಟೆಯ ನಂತರ, ಸೋನಿಯಾ ಛರಾಬ್ರಾದಲ್ಲಿರುವ ತಮ್ಮ ಮಗಳು ಪ್ರಿಯಾಂಕಾ ಗಾಂಧಿಯವರ ಮನೆಗೆ ಮರಳಿದ್ದರು.

ವೈದ್ಯರು ಹೇಳಿದ್ದೇನು?
ಆಸ್ಪತ್ರೆಯ ಹಿರಿಯ ವೈದ್ಯ ಡಾ. ರಾಹುಲ್ ರಾವ್ ಮಾತನಾಡಿ, ಸೋನಿಯಾ ಗಾಂಧಿ ತಪಾಸಣೆಗಾಗಿ ಆಸ್ಪತ್ರೆಗೆ ಬಂದು ತಪಾಸಣೆಯ ನಂತರ ಹಿಂತಿರುಗಿದರು ಎಂದು ಹೇಳಿದ್ದಾರೆ. ಈ ಸಮಯದಲ್ಲಿ, ಆರೋಗ್ಯ ಸಚಿವ ಧನಿರಾಮ್ ಶಾಂಡಿಲ್ ಮತ್ತು ಮುಖ್ಯ ಕಾರ್ಯದರ್ಶಿ ಪ್ರಬೋಧ್ ಸಕ್ಸೇನಾ ಸೇರಿದಂತೆ ಅನೇಕ ಅಧಿಕಾರಿಗಳು ಆಸ್ಪತ್ರೆಗೆ ಹೋಗಿದ್ದರು.

ಅವರಿಗೆ ಉಸಿರಾಟದ ತೊಂದರೆ ಕಾಡಿತ್ತು. 2022 ರಲ್ಲಿ, ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಈ ಸಮಯದಲ್ಲಿಯೂ ಅವರನ್ನು ಆಸ್ಪತ್ರೆಯಲ್ಲಿ ಇರಿಸಲಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:09 am, Mon, 16 June 25