ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ಇಂದು (ಶುಕ್ರವಾರ) ಶ್ರೀನಗರಕ್ಕೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ (Vistara Flight) ಬಾಂಬ್ ಬೆದರಿಕೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಕ್ಷಿಪ್ರ ಕ್ರಮ ಕೈಗೊಂಡಿದ್ದಾರೆ. ವಿಮಾನ ಸಂಖ್ಯೆ UK-611 ದೆಹಲಿಯಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿತ್ತು. ಇದರಲ್ಲಿ 177 ಪ್ರಯಾಣಿಕರಿದ್ದರು. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ಏರ್ ಟ್ರಾಫಿಕ್ ಕಂಟ್ರೋಲ್ (ATC)ಗೆ ‘ಬೆದರಿಕೆಯ ಕರೆ’ ಬಂದಿತು.
ಬೆದರಿಕೆ ಕರೆ ಬಂದ ನಂತರ, ವಿಮಾನವನ್ನು ಲ್ಯಾಂಡಿಂಗ್ ಮಾಡಿದ ತಕ್ಷಣ ಐಸೋಲೇಷನ್ ಸ್ಥಳಕ್ಕೆ ತೆಗೆದುಕೊಂಡು ಹೋಗಲಾಯಿತು. ಈ ನಿಟ್ಟಿನಲ್ಲಿ ವಿಸ್ತಾರ ವಕ್ತಾರರು ಈ ಘಟನೆ ನಡೆದಿರುವುದನ್ನು ದೃಢಪಡಿಸಿದ್ದಾರೆ. ಪ್ರೋಟೋಕಾಲ್ ಪ್ರಕಾರ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣವೇ ಈ ವಿಷಯವನ್ನು ತಿಳಿಸಲಾಗಿದೆ ಎಂದು ಹೇಳಿದ್ದಾರೆ.
6ETravelAdvisory: Flights at #SrinagarAirport (SXR) are impacted until 1430 hrs due to runway unavailability for security reasons. To check your flight status, please visit https://t.co/rpnOvAP5FT and for immediate assistance, feel free to reach out to our on-ground team
— IndiGo (@IndiGo6E) May 31, 2024
ಇದನ್ನೂ ಓದಿ: Air India: 20 ಗಂಟೆ ತಡವಾಗಿ ಹೊರಟ ಏರ್ ಇಂಡಿಯಾ ವಿಮಾನ, ಎಸಿ ಇಲ್ಲದೆ ಮೂರ್ಛೆ ಹೋದ ಪ್ರಯಾಣಿಕರು
“ಪ್ರೋಟೋಕಾಲ್ ಅನ್ನು ಅನುಸರಿಸಿ ನಾವು ತಕ್ಷಣ ಸಂಬಂಧಿತ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದ ನಂತರ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಯಿತು, ಅಲ್ಲಿ ಎಲ್ಲಾ ಗ್ರಾಹಕರನ್ನು ಇಳಿಸಲಾಯಿತು. ಕಡ್ಡಾಯ ಭದ್ರತಾ ತಪಾಸಣೆಗಳನ್ನು ತೆರವುಗೊಳಿಸಲು ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಾವು ಸಂಪೂರ್ಣವಾಗಿ ಸಹಕರಿಸಿದ್ದೇವೆ. ಅಗತ್ಯವಿರುವ ಎಲ್ಲಾ ತಪಾಸಣೆಗಳನ್ನು ನಡೆಸಲಾಗಿದೆ ಮತ್ತು ಕಾರ್ಯಾಚರಣೆಯನ್ನು ಪುನರಾರಂಭಿಸಲು ವಿಮಾನದಲ್ಲಿದ್ದ ಜನರನ್ನು ಕೆಳಗಿಳಿಸಲಾಗಿದೆ. ವಿಸ್ತಾರದಲ್ಲಿ ನಮ್ಮ ಗ್ರಾಹಕರು, ಸಿಬ್ಬಂದಿ ಮತ್ತು ವಿಮಾನಗಳ ಸುರಕ್ಷತೆ ನಮಗೆ ಅತ್ಯಂತ ಮಹತ್ವದ್ದಾಗಿದೆ ಎಂದು ವಕ್ತಾರರು ಹೇಳಿದ್ದಾರೆ.
ಇದನ್ನೂ ಓದಿ: Shocking News: ವಿಮಾನದೊಳಗೆ ಬೆತ್ತಲೆಯಾಗಿ ಓಡಿದ ಪ್ರಯಾಣಿಕ; ಆಮೇಲೇನಾಯ್ತು?
ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಶ್ರೀನಗರಕ್ಕೆ ಬೆದರಿಕೆ ಕರೆ ಕುರಿತು ಮಾಹಿತಿ ಬಂದ ನಂತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ನೊಂದಿಗೆ ಸಂಘಟಿತ ಪ್ರತಿಕ್ರಿಯೆಯನ್ನು ತ್ವರಿತವಾಗಿ ಕಾರ್ಯಗತಗೊಳಿಸಲಾಗಿದೆ ಎಂದು ಶ್ರೀನಗರದ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ