AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ತಡರಾತ್ರಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಹಿಂಬಾಲಿಸಿ, ಬೈಕ್ ಡಿಕ್ಕಿ ಹೊಡೆಸಿದ ದುಷ್ಕರ್ಮಿಗಳು

ದೆಹಲಿಯಲ್ಲಿ 21 ವರ್ಷದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ, ದೌರ್ಜನ್ಯ ಎಸಗಿ, ಬೈಕ್‌ನಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯದಿಂದ ವಿದ್ಯಾರ್ಥಿನಿಗೆ ಪ್ಲಾಸ್ಟಿಕ್ ಸರ್ಜರಿ ಅವಶ್ಯಕತೆ ಉಂಟಾಗಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತವೆಂದು ಪರಿಗಣಿಸಿದ್ದ ಪೊಲೀಸರು, ದೂರು ದಾಖಲಾದ ನಂತರ ತನಿಖೆ ಆರಂಭಿಸಿದ್ದಾರೆ. ದೆಹಲಿಯಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ಈ ಘಟನೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ದೆಹಲಿ: ತಡರಾತ್ರಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಹಿಂಬಾಲಿಸಿ, ಬೈಕ್ ಡಿಕ್ಕಿ ಹೊಡೆಸಿದ ದುಷ್ಕರ್ಮಿಗಳು
ಪೊಲೀಸ್Image Credit source: PTI
ನಯನಾ ರಾಜೀವ್
|

Updated on: Sep 23, 2026 | 11:49 AM

Share

ನವದೆಹಲಿ, ಸೆಪ್ಟೆಂಬರ್ 23: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳು ಎದ್ದಿವೆ. ತಡರಾತ್ರಿ ಇಂಟರ್ನ್‌ಶಿಪ್ ಕೆಲಸ ಮುಗಿಸಿ ಸ್ಕೂಟರ್‌ನಲ್ಲಿ ಮನೆಗೆ ಮರಳುತ್ತಿದ್ದ 21 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿ, ಆಕೆಯ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ನಾಲ್ಕನೇ ವರ್ಷದ ಡಿಸೈನಿಂಗ್ (ವಿನ್ಯಾಸ) ಕಲಿಯುತ್ತಿರುವ ವಿದ್ಯಾರ್ಥಿನಿಯು ಸಾಕೇತ್‌ನಲ್ಲಿರುವ ಕಚೇರಿಯಲ್ಲಿ ಇಂಟರ್ನ್‌ಶಿಪ್ ಮಾಡುತ್ತಿದ್ದಾಳೆ. ಸೆಪ್ಟೆಂಬರ್ 11 ಮತ್ತು 12 ರ ಮಧ್ಯರಾತ್ರಿ ಸುಮಾರು 1 ಗಂಟೆಯ ಸುಮಾರಿಗೆ ಆಕೆ ಸ್ಕೂಟರ್‌ನಲ್ಲಿ ಮನೆಗೆ ವಾಪಸಾಗುತ್ತಿದ್ದಳು. ಹೌಜ್ ಖಾಸ್ ವ್ಯಾಪ್ತಿಯ ಪಂಚಶೀಲ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಸುಮಾರು 20 ವರ್ಷ ಪ್ರಾಯದ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಆಕೆಯನ್ನು ಹಿಂಬಾಲಿಸಲು ಆರಂಭಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ಕೀಟಲೆ ಮಾಡುತ್ತಾ ಅಸಭ್ಯವಾಗಿ ಮಾತನಾಡಿದ್ದಾರೆ.

ಅವರಿಂದ ತಪ್ಪಿಸಿಕೊಳ್ಳಲು ಯುವತಿ ಸ್ಕೂಟರ್ ವೇಗವನ್ನು ಹೆಚ್ಚಿಸಿದಾಗ, ಕಿಡಿಗೇಡಿಗಳು ತಮ್ಮ ಬೈಕ್‌ನಿಂದ ಆಕೆಯ ಸ್ಕೂಟರ್‌ಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಯುವತಿ ನಿಯಂತ್ರಣ ಕಳೆದುಕೊಂಡು ಜಲ್ಲಿಕಲ್ಲು ಮತ್ತು ಧೂಳಿನಿಂದ ಕೂಡಿದ ರಸ್ತೆಯಲ್ಲಿ ಸುಮಾರು 100 ರಿಂದ 150 ಮೀಟರ್‌ಗಳಷ್ಟು ದೂರ ಸ್ಕಿಡ್ ಆಗಿ ಬಿದ್ದಿದ್ದಾಳೆ. ಘಟನೆಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಮತ್ತಷ್ಟು ಓದಿ: ಖಾಸಗಿ ಬ್ಯಾಂಕ್ ಕಿರುಕುಳ ಆರೋಪ! ಸಿಬ್ಬಂದಿ ಮಿಸ್ಸಿಂಗ್, ಆತ್ಮಹತ್ಯೆ ಶಂಕೆ!

ಪ್ಲಾಸ್ಟಿಕ್ ಸರ್ಜರಿಗೆ ವೈದ್ಯರ ಸಲಹೆ:

ರಸ್ತೆಯಲ್ಲಿ ಬಿದ್ದ ಯುವತಿಗೆ ತೀವ್ರ ರಕ್ತಸ್ರಾವವಾಗಿದ್ದು, ಮೈಮೇಲಿನ ಚರ್ಮ ಕಿತ್ತುಹೋಗಿದೆ. ಆಕೆ ಹಂಚಿಕೊಂಡ ಲೈವ್ ಲೊಕೇಶನ್ ನೋಡಿ ಧಾವಿಸಿದ ಸಹೋದ್ಯೋಗಿಗಳು ಆಕೆಯನ್ನು ಮೊದಲು ಸಾಕೇತ್‌ನ ಮ್ಯಾಕ್ಸ್ ಆಸ್ಪತ್ರೆಗೆ, ನಂತರ ನೋಯ್ಡಾದ ಮೇದಾಂತ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗಳು ಗಂಭೀರವಾಗಿದ್ದ ಕಾರಣ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಪ್ರಸ್ತುತ ಯುವತಿ ಹೆಚ್ಚಿನ ಚಿಕಿತ್ಸೆಗಾಗಿ ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ತನ್ನ ತವರು ಮನೆಗೆ ತೆರಳಿದ್ದಾಳೆ.

ಪೊಲೀಸರ ಪ್ರತಿಕ್ರಿಯೆ ಮತ್ತು ತನಿಖೆ

ಆರಂಭದಲ್ಲಿ ಇದನ್ನು ಕೇವಲ ಸಾಮಾನ್ಯ ರಸ್ತೆ ಅಪಘಾತ ಎಂದು ಭಾವಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 15 ರಂದು ಯುವತಿಯ ವಕೀಲರ ಮೂಲಕ ಅಧಿಕೃತ ದೂರು ಸ್ವೀಕರಿಸಿದ ಹೌಜ್ ಖಾಸ್ ಠಾಣಾ ಪೊಲೀಸರು, ಈಗ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದ್ದು, ಸದ್ಯ ಲಭ್ಯವಾದ ದೃಶ್ಯಗಳಲ್ಲಿ ಅಪಘಾತ ಅಥವಾ ಕಿರುಕುಳದ ದೃಶ್ಯಗಳು ಸ್ಪಷ್ಟವಾಗಿ ಸೆರೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಕಳೆದ ಎರಡು ವಾರಗಳ ಅವಧಿಯಲ್ಲೇ ದೆಹಲಿಯಲ್ಲಿ ನಾಲ್ಕು ಪ್ರತ್ಯೇಕ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿಯಾಗಿದ್ದು, ಮಹಿಳೆಯರಲ್ಲಿ ಭದ್ರತೆಯ ಆತಂಕವನ್ನು ಹೆಚ್ಚಿಸಿದೆ. ಮಹಿಳೆಯರ ಘನತೆಗೆ ಧಕ್ಕೆ ತರುವುದು, ಹಿಂಬಾಲಿಸುವುದು ಮತ್ತು ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಜೀವಕ್ಕೆ ಅಪಾಯ ತಂದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ವಿಶೇಷ ತನಿಖಾ ತಂಡ: ಆರೋಪಿಗಳನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು ಮೆಟ್ರೋ ಮಾರ್ಗದ ಇತರೆ ಪೂರಕ ರಸ್ತೆಗಳ ಸಿಸಿಟಿವಿ ದೃಶ್ಯಾವಳಿಗಳನ್ನು ವಿಧಿವಿಜ್ಞಾನ ತಜ್ಞರ ನೆರವಿನೊಂದಿಗೆ ಮರುಪರಿಶೀಲಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಿಧಾನ ಪರಿಷತ್​​ ಅಧಿವೇಶನ; ಮೂರನೇ ದಿನದ ಕಲಾಪ ನೇರಪ್ರಸಾರ
ವಿಧಾನ ಪರಿಷತ್​​ ಅಧಿವೇಶನ; ಮೂರನೇ ದಿನದ ಕಲಾಪ ನೇರಪ್ರಸಾರ
Live: ಕೊನೆಯ ದಿನದ ವಿಧಾನಸಭೆ ಅಧಿವೇಶನದ ನೇರಪ್ರಸಾರ
Live: ಕೊನೆಯ ದಿನದ ವಿಧಾನಸಭೆ ಅಧಿವೇಶನದ ನೇರಪ್ರಸಾರ
ಒಂದೇ ತಿಂಗಳಲ್ಲಿ ಮಾದಪ್ಪನ ಹುಂಡಿಯಲ್ಲಿ ಜಮೆಯಾಯ್ತು 2 ಕೋಟಿ ರೂ. ಕಾಣಿಕೆ!
ಒಂದೇ ತಿಂಗಳಲ್ಲಿ ಮಾದಪ್ಪನ ಹುಂಡಿಯಲ್ಲಿ ಜಮೆಯಾಯ್ತು 2 ಕೋಟಿ ರೂ. ಕಾಣಿಕೆ!
ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಕಾರು: 4 ಮಂದಿ ಯುವಕರ ಸಾಹಸಮಯ ರಕ್ಷಣೆ
ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಕಾರು: 4 ಮಂದಿ ಯುವಕರ ಸಾಹಸಮಯ ರಕ್ಷಣೆ
ನೀವಿರುವಲ್ಲೇ ಇ ಖಾತಾ ಪಡೆಯಲು ಏನು ಮಾಡಬೇಕು? ಇಲ್ಲಿದೆ ಮಾಹಿತಿ
ನೀವಿರುವಲ್ಲೇ ಇ ಖಾತಾ ಪಡೆಯಲು ಏನು ಮಾಡಬೇಕು? ಇಲ್ಲಿದೆ ಮಾಹಿತಿ
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ