ಸ್ವಾತಿ ಮಲಿವಾಲ್ ಪ್ರಕರಣ: ಅರವಿಂದ್ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್​​ಗೆ 14 ದಿನಗಳ ನ್ಯಾಯಾಂಗ ಬಂಧನ

ಮೂರು ದಿನಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡ ನಂತರ ಕುಮಾರ್ ಅವರನ್ನು ದೆಹಲಿಯ ತೀಸ್ ಹಜಾರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. 14 ದಿನಗಳ ಪೊಲೀಸ್ ಕಸ್ಟಡಿಗೆ ಕೋರಿ ದೆಹಲಿ ಪೊಲೀಸರ ಅರ್ಜಿಯನ್ನು ಅವರ ವಕೀಲ ರಜತ್ ಭಾರದ್ವಾಜ್ ವಿರೋಧಿಸಿದ್ದಾರೆ.

ಸ್ವಾತಿ ಮಲಿವಾಲ್ ಪ್ರಕರಣ: ಅರವಿಂದ್ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್​​ಗೆ 14 ದಿನಗಳ ನ್ಯಾಯಾಂಗ ಬಂಧನ
ಬಿಭವ್ ಕುಮಾರ್
Follow us
ರಶ್ಮಿ ಕಲ್ಲಕಟ್ಟ
|

Updated on: May 31, 2024 | 6:13 PM

ದೆಹಲಿ ಮೇ 31: ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ (Swati Maliwal) ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಸಹಾಯಕ ಬಿಭವ್ ಕುಮಾರ್​​ಗೆ (Bibhav Kumar) ದೆಹಲಿ ನ್ಯಾಯಾಲಯವು ಶುಕ್ರವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡ ನಂತರ ಕುಮಾರ್ ಅವರನ್ನು ದೆಹಲಿಯ ತೀಸ್ ಹಜಾರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. 14 ದಿನಗಳ ಪೊಲೀಸ್ ಕಸ್ಟಡಿಗೆ ಕೋರಿ ದೆಹಲಿ ಪೊಲೀಸರ ಅರ್ಜಿಯನ್ನು ಅವರ ವಕೀಲ ರಜತ್ ಭಾರದ್ವಾಜ್ ವಿರೋಧಿಸಿದರು.

“ನಾನು ತನಿಖೆಯಲ್ಲಿ ಮಧ್ಯಪ್ರವೇಶಿಸುವುದಿಲ್ಲ.ಸಿಸಿಟಿವಿ ದೃಶ್ಯಗಳನ್ನು ಸಂರಕ್ಷಿಸಲು ನಾನು ಮನವಿ ಮಾಡಿದ್ದೆ. ನಾನೇ ಅದನ್ನು ಸಂರಕ್ಷಿಸಲು ಪ್ರಯತ್ನಿಸುತ್ತಿದ್ದೇನೆ ಹಾಗಾಗಿ ನಾನು ಸಾಕ್ಷ್ಯವನ್ನು ಏಕೆ ಹಾಳು ಮಾಡುತ್ತೇನೆ ಎಂದು ಕುಮಾರ್ ಕೇಳಿದ್ದಾರೆ. “ಎಲ್ಲಾ ಸಾಕ್ಷಿಗಳು ಸರ್ಕಾರಿ ನೌಕರರು ಮತ್ತು ನಾನು ಅವರನ್ನು ಪ್ರೇರೇಪಿಸುವ ಅಥವಾ ಬೆದರಿಕೆ ಹಾಕುವ ಯಾವುದೇ ಸ್ಥಿತಿಯಲ್ಲಿಲ್ಲ. ನಾನು ತನಿಖೆಗೆ  ಸಹಕರಿಸಲು ಏಜೆನ್ಸಿಯ ಮುಂದೆ ಹಾಜರಾಗಲು ಬರುತ್ತೇನೆ. ನಾನು ಬೇರೆಲ್ಲಿಯೂ ಓಡಿಹೋಗುವುದಿಲ್ಲ” ಎಂದು ಅವರು ಹೇಳಿದರು.

ಇದಕ್ಕೂ ಮುನ್ನ ಶುಕ್ರವಾರ ದೆಹಲಿ ಹೈಕೋರ್ಟ್ ತನ್ನ ಬಂಧನವನ್ನು ಪ್ರಶ್ನಿಸಿ ಕುಮಾರ್ ಸಲ್ಲಿಸಿದ್ದ ಅರ್ಜಿಯ ನಿರ್ವಹಣೆಯ ವಿಷಯದ ಕುರಿತು ಆದೇಶವನ್ನು ಕಾಯ್ದಿರಿಸಿತ್ತು. ತನ್ನ ಮನವಿಯಲ್ಲಿ, ಬಿಭವ್ ಕುಮಾರ್ ತನ್ನ ಬಂಧನವನ್ನು ಕಾನೂನುಬಾಹಿರ ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41A (ಪೊಲೀಸ್ ಅಧಿಕಾರಿಯ ಮುಂದೆ ಹಾಜರಾಗುವ ಸೂಚನೆ) ಮತ್ತು ಕಾನೂನಿನ ಆದೇಶದ ವಿರುದ್ಧದ ನಿಬಂಧನೆಗಳ ಸಂಪೂರ್ಣ ಉಲ್ಲಂಘನೆ ಎಂದು ಘೋಷಿಸಲು ನಿರ್ದೇಶನವನ್ನು ಕೋರಿದ್ದಾರೆ.

ಮೇ 13 ರಂದು ಕೇಜ್ರಿವಾಲ್ ಅವರ ನಿವಾಸದಲ್ಲಿ ಬಿಭವ್ ಕುಮ್ಕ್  ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ಆರೋಪಿಸಿದ ನಂತರ ಮೇ 18ರಂದು ಕೇಜ್ರಿವಾಲ್  ಸಹಾಯಕನನ್ನು ಬಂಧಿಸಲಾಯಿತು. ಮಲಿವಾಲ್, ತನ್ನ ದೂರಿನಲ್ಲಿ, ಬಿಭವ್ ತನಗೆ ಕನಿಷ್ಠ ಏಳರಿಂದ ಎಂಟು ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ನಾನು ಕಿರುಚಾಡಿದೆ. ಆತ ನನ್ನ ಎದೆ ಸೊಂಟಕ್ಕೆ ಒದೆದಿದ್ದು, ಎಳೆದಾಡಿದ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾನುವಾರ ಶರಣಾಗುತ್ತೇನೆ, ನಾನಿಲ್ಲದಿದ್ದರೂ ದೆಹಲಿಯ ಕೆಲಸಕ್ಕೆ ತೊಂದರೆಯಾಗದು; ಸಿಎಂ ಅರವಿಂದ್ ಕೇಜ್ರಿವಾಲ್

ಕುಮಾರ್ ವಿರುದ್ಧ ಎಫ್‌ಐಆರ್ ಅನ್ನು ಮೇ 16 ರಂದು ವಿವಿಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ದಾಖಲಿಸಲಾಗಿದೆ, ಇದರಲ್ಲಿ ಕ್ರಿಮಿನಲ್ ಬೆದರಿಕೆ, ಹಲ್ಲೆ, ದೌರ್ಜನ್ಯ, ಚಾರಿತ್ರ್ಯವಧೆ ಮತ್ತು ಅಪರಾಧಿ ನರಹತ್ಯೆಗೆ ಪ್ರಯತ್ನಿಸಲಾಯಿತು ಎಂದು ಆರೋಪಿಸಲಾಗಿದೆ. ಬಂಧಿಸುವ ಮೊದಲು, ಬಿಭವ್ ಕುಮಾರ್ ಅವರು ಪೊಲೀಸರಿಗೆ ಪ್ರತಿದೂರು ದಾಖಲಿಸಿದ್ದರು, ಮಲಿವಾಲ್ ಅವರು ಸಿಎಂ ಸಿವಿಲ್ ಲೈನ್ಸ್ ನಿವಾಸಕ್ಕೆ ‘ಅನಧಿಕೃತ ಪ್ರವೇಶ’ ಮಾಡಿದ್ದು ‘ಮಾತಿನಲ್ಲಿ ನಿಂದಿಸಿದ್ದಾರೆ’ ಎಂದು ಆರೋಪಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್