ಭಾರತ-ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

|

Updated on: Aug 29, 2023 | 12:20 PM

ಭಾರತ ಹಾಗೂ ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ್ದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಾಗಿದೆ. ದೆಹಲಿಯ ಶಾಲೆಯೊಂದರ 4 ವಿದ್ಯಾರ್ಥಿಗಳು, ತಮ್ಮ ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದಾರೆ. ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ಶಿಕ್ಷಕಿಯೊಬ್ಬರು ಅನ್ಯ ಕೋಮಿನ ವಿದ್ಯಾರ್ಥಿಯೊಬ್ಬರಿಗೆ ಕಪಾಳಮೋಕ್ಷ ಮಾಡಿಸಿದ್ದರು, ತೃಪ್ತಿ ತ್ಯಾಗಿ ಎಂಬ ಶಿಕ್ಷಕಿಯ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು. ಇದೀಗ 9ನೇ ತರಗತಿ ವಿದ್ಯಾರ್ಥಿಗಳ ಕುಟುಂಬದವರು ನೀಡಿರುವ ಹೇಳಿಕೆ ಮೇರೆಗೆ ದೆಹಲಿ ಪೊಲೀಸರು ಗಾಂಧಿನಗರದ ಸರ್ಕಾರಿ ಸರ್ವೋದಯ ಬಾಲ […]

ಭಾರತ-ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು
ಶಾಲೆ
Image Credit source: NDTV
Follow us on

ಭಾರತ ಹಾಗೂ ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ್ದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಾಗಿದೆ. ದೆಹಲಿಯ ಶಾಲೆಯೊಂದರ 4 ವಿದ್ಯಾರ್ಥಿಗಳು, ತಮ್ಮ ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದಾರೆ. ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ಶಿಕ್ಷಕಿಯೊಬ್ಬರು ಅನ್ಯ ಕೋಮಿನ ವಿದ್ಯಾರ್ಥಿಯೊಬ್ಬರಿಗೆ ಕಪಾಳಮೋಕ್ಷ ಮಾಡಿಸಿದ್ದರು, ತೃಪ್ತಿ ತ್ಯಾಗಿ ಎಂಬ ಶಿಕ್ಷಕಿಯ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು.

ಇದೀಗ 9ನೇ ತರಗತಿ ವಿದ್ಯಾರ್ಥಿಗಳ ಕುಟುಂಬದವರು ನೀಡಿರುವ ಹೇಳಿಕೆ ಮೇರೆಗೆ ದೆಹಲಿ ಪೊಲೀಸರು ಗಾಂಧಿನಗರದ ಸರ್ಕಾರಿ ಸರ್ವೋದಯ ಬಾಲ ವಿದ್ಯಾಲಯದ ಶಿಕ್ಷಕಿ ಹೇಮಾ ಗುಲಾಟೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಭಜನೆಯ ಸಮಯದಲ್ಲಿ, ನೀವು ಪಾಕಿಸ್ತಾನಕ್ಕೆ ಹೋಗಲಿಲ್ಲ, ನೀವು ಭಾರತದಲ್ಲಿಯೇ ಇದ್ದೀರಿ, ಭಾರತದ ಸ್ವಾತಂತ್ರ್ಯದಲ್ಲಿ ನಿಮ್ಮ ಕೊಡುಗೆ ಇಲ್ಲ ಎಂದು ಹೇಳಿದ್ದಾಗಿ ವಿದ್ಯಾರ್ಥಿಗಳು ದೂರಿದ್ದಾರೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಮಕ್ಕಳಿಗೆ ಸೂಚಿಸಿದ ಶಿಕ್ಷಕಿ, ಇದು ಕೋಮುವಾದ ಎಂದ ನೆಟ್ಟಿಗರು

ಇಂತಹ ಹೇಳಿಕೆಗಳು ಶಾಲೆಯಲ್ಲಿ ವೈಷಮ್ಯಕ್ಕೆ ಕಾರಣವಾಗುತ್ತವೆ ಮತ್ತು ಶಿಕ್ಷಕರನ್ನು ವಜಾಗೊಳಿಸಬೇಕೆಂದು ವಿದ್ಯಾರ್ಥಿಗಳ ಕುಟುಂಬಗಳು ಒತ್ತಾಯಿಸಿವೆ. ಇದು ಸಂಪೂರ್ಣವಾಗಿ ತಪ್ಪು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಶಿಕ್ಷಕರು ಯಾವುದೇ ಧಾರ್ಮಿಕ ಅಥವಾ ಪವಿತ್ರ ಸ್ಥಳದ ವಿರುದ್ಧ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಕೂಡದು ಎಂದು ಶಾಸಕ ಅನಿಲ್ ಕುಮಾರ್ ಹೇಳಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ