ದೆಹಲಿ: ಪಾರ್ಕ್ನಲ್ಲಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಬಾಲಕ, ಬಾಲಕಿಯ ಶವ ಪತ್ತೆ
ರಾಜಧಾನಿ ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೈಋತ್ಯ ಜಿಲ್ಲೆಯ ಜಿಂಕೆ ಉದ್ಯಾನದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕ, ಬಾಲಕಿಯ ಶವ ಪತ್ತೆಯಾಗಿದೆ. ಬೆಳಗ್ಗೆ 6.31 ರ ಸುಮಾರಿಗೆ ಉದ್ಯಾನದ ಭದ್ರತಾ ಸಿಬ್ಬಂದಿ ಬಲ್ಜೀತ್ ಸಿಂಗ್ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ, ಮಾರ್ಚ್ 23: ರಾಜಧಾನಿ ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೈಋತ್ಯ ಜಿಲ್ಲೆಯ ಜಿಂಕೆ ಉದ್ಯಾನದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕ, ಬಾಲಕಿಯ ಶವ ಪತ್ತೆಯಾಗಿದೆ. ಬೆಳಗ್ಗೆ 6.31 ರ ಸುಮಾರಿಗೆ ಉದ್ಯಾನದ ಭದ್ರತಾ ಸಿಬ್ಬಂದಿ ಬಲ್ಜೀತ್ ಸಿಂಗ್ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹುಡುಗ ಮತ್ತು ಹುಡುಗಿಯ ಶವಗಳು ಮರದಲ್ಲಿ ನೇತಾಡುತ್ತಿವೆ ಎಂದು ಅವರು ಪೊಲೀಸರಿಗೆ ತಿಳಿಸಿದರು. ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದಾಗ ಸುಮಾರು 17 ವರ್ಷ ವಯಸ್ಸಿನ ಹುಡುಗ ಕಪ್ಪು ಟಿ-ಶರ್ಟ್ ಮತ್ತು ನೀಲಿ ಜೀನ್ಸ್ ಧರಿಸಿದ್ದ ಮತ್ತು ಅವನೊಂದಿಗೆ ಮರಕ್ಕೆ ನೇತಾಡುತ್ತಿರುವ ಹುಡುಗಿಯ ಶವ ಪತ್ತೆಯಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಕ್ಷ್ಯಗಳನ್ನು ಸಹ ಸಂಗ್ರಹಿಸಲಾಗುತ್ತಿದೆ.
ಈ ಇಬ್ಬರು ಸಾಯುವ ನಿರ್ಧಾರ ಏಕೆ ಮಾಡಿರಬಹುದು, ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತಯಾಗಿಲ್ಲ. ಯಾವುದೇ ಡೆತ್ನೋಟ್ ಕೂಡ ಸಿಕ್ಕಿಲ್ಲ.
#WATCH | Delhi | At 6.31 am today, Baljit Singh, Deer Park security guard, informed the police regarding the bodies of a boy and a girl hanging on the branch of a tree. Police staff reached the spot & found that a boy and a girl, aged about 17 years hanged themselves with the… https://t.co/HOdfCw8X4O pic.twitter.com/3PhnnqF3Jv
— ANI (@ANI) March 23, 2025
ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಗಾಗಿ ಅಪರಾಧ ತಂಡವನ್ನು ಕರೆಸಲಾಯಿತು ಮತ್ತು ಶವಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಶವಾಗಾರಕ್ಕೆ ಸಾಗಿಸಲಾಯಿತು. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ