AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಂಪೋದಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್‌ರೇಪ್, ಬರ್ಬರ ಹತ್ಯೆ: ಕೊಳೆತ ಶವ ನಾಯಿಗಳ ಪಾಲು, ಮೂವರು ಅಪ್ರಾಪ್ತರು ಅರೆಸ್ಟ್

ದೆಹಲಿಯಲ್ಲಿ 16ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಬರ್ಬರ ಹತ್ಯೆ ನಡೆದಿದೆ. ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರು ಈ ಕೃತ್ಯ ಎಸಗಿದ್ದಾರೆ. ನಿರ್ಜನ ಪ್ರದೇಶದಲ್ಲಿ ಎಸೆದ ಕೊಳೆತ ಶವವನ್ನು ಬೀದಿ ನಾಯಿಗಳು ತಿಂದು ಹಾಕಿವೆ. ಸಿಸಿಟಿವಿ ಆಧಾರದ ಮೇಲೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಅತ್ಯಾಚಾರ, ಕೊಲೆ ಪ್ರಕರಣ ದಾಖಲಾಗಿದೆ.

ಟೆಂಪೋದಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್‌ರೇಪ್, ಬರ್ಬರ ಹತ್ಯೆ: ಕೊಳೆತ ಶವ ನಾಯಿಗಳ ಪಾಲು, ಮೂವರು ಅಪ್ರಾಪ್ತರು ಅರೆಸ್ಟ್
ಸಾಂದರ್ಭಿಕ ಚಿತ್ರImage Credit source: Prison Fellowship
ನಯನಾ ರಾಜೀವ್
|

Updated on: Sep 18, 2026 | 11:05 AM

Share

ನವದೆಹಲಿ, ಸೆಪ್ಟೆಂಬರ್ 18: ದೆಹಲಿಯಲ್ಲಿ 16 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ಒಟ್ಟು ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಅಷ್ಟೇ ಅಲ್ಲದೆ ಆಕೆಯನ್ನು ಚಾಕುವಿನಿಂದ ಇರಿದು ಕೊಂದು ನಿರ್ಜನ ಬಯಲಿನಲ್ಲಿ ಬಿಸಾಡಿ ಹೋಗಿದ್ದು, ಕೊಳೆತ ಸ್ಥಿತಿಯಲ್ಲಿದ್ದ ಆಕೆಯ ದೇಹವನ್ನು ಬೀದಿ ನಾಯಿಗಳು ಕಚ್ಚಿ ತಿಂದಿರುವ ಘಟನೆ ವರದಿಯಾಗಿದೆ. ವಾಯುವ್ಯ ದೆಹಲಿಯ ಸ್ವರೂಪ್ ನಗರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳು ಕೊಳೆತ ಶವದ ಅಂಗಾಗಗಳನ್ನು ಕಿತ್ತು ತಿನ್ನುತ್ತಿದ್ದಾಗ ಜನರ ಕಣ್ಣಿಗೆ ಬಿದ್ದಿದೆ. ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

ಸೆಪ್ಟೆಂಬರ್ 13 ರಂದು ಕುಶಾಕ್ ರಸ್ತೆಯ ಜೈಪಾಲ್ ರಾಣಾ ಅವರ ಹೊಲದ ಬಳಿ ನಾಯಿಗಳು ಶವವನ್ನು ತಿನ್ನುತ್ತಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಶವ ಸಂಪೂರ್ಣ ಕೊಳೆತು ವಿರೂಪಗೊಂಡಿದ್ದರಿಂದ ಆರಂಭದಲ್ಲಿ ಲಿಂಗ ಪತ್ತೆಹಚ್ಚುವುದೇ ಕಷ್ಟವಾಗಿತ್ತು; ಬಾಲಕಿಯ ಒಂದು ಕೈ ದೇಹದಿಂದ ಬೇರ್ಪಟ್ಟಿತ್ತು ಹಾಗೂ ದೇಹದ ಮೇಲೆ ಹಲವು ಇರಿತದ ಗಾಯಗಳಿದ್ದವು.

ಬಾಲಕಿಗೆ ಪರಿಚಯಸ್ಥರೇ ಆಗಿದ್ದ ಆರೋಪಿಗಳು, ಆಕೆಯೊಂದಿಗೆ ಟೆಂಪೋದಲ್ಲಿ ಮದ್ಯ ಸೇವಿಸಿದ್ದಾರೆ. ಬಳಿಕ ಸೆಪ್ಟೆಂಬರ್ 11 ರ ಶುಕ್ರವಾರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಗುರುತು ಸಿಗದಂತೆ ಮುಖ ಮತ್ತು ದೇಹಕ್ಕೆ ಚಾಕುವಿನಿಂದ ಮನಬಂದಂತೆ ಇರಿದು ಕೊಲೆ ಮಾಡಿ ಹೊಲದಲ್ಲಿ ಎಸೆದು ಪರಾರಿಯಾಗಿದ್ದರು. ಯಾವುದೇ ಪ್ರತ್ಯಕ್ಷದರ್ಶಿಗಳಿಲ್ಲದ ಈ ಪ್ರಕರಣವನ್ನು ಭೇದಿಸಲು ಪೊಲೀಸರು 50ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದರು. ಶಂಕಿತ ಟೆಂಪೋವೊಂದರ ಚಲನವಲನವನ್ನು ಪತ್ತೆಹಚ್ಚಿದ ತನಿಖಾ ತಂಡ, ಸೆಪ್ಟೆಂಬರ್ 15-16ರ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿ ವಾಹನ ಹಾಗೂ ಅದರ ಚಾಲಕನನ್ನು ವಶಕ್ಕೆ ಪಡೆಯಿತು.

ಮತ್ತಷ್ಟು ಓದಿ: ಜನರ ಗೋಳು ಕೇಳದ ಅಧಿಕಾರಿಗಳಿಗೆ ವಿಶಿಷ್ಟ ಪಾಠ: ನಾಸಿಕ್ ಪಾಲಿಕೆ ಅಧಿಕಾರಿ ಕಚೇರಿಯೊಳಗೆ ನಾಯಿಗಳ ಬಿಟ್ಟ ಯುವಸೇನಾ ಕಾರ್ಯಕರ್ತರು

ನಾಲ್ವರ ಬಂಧನ, ಮಾರಕಾಸ್ತ್ರ ಜಪ್ತಿ: ಮುಖ್ಯ ಆರೋಪಿ ಖಡ್ಡಾ ಕಾಲೋನಿಯ ಶಿವಂ ಅಲಿಯಾಸ್ ಸುದಾಮ ಎಂಬಾತನೊಂದಿಗೆ 16 ಮತ್ತು 17 ವರ್ಷ ವಯಸ್ಸಿನ ಮೂವರು ಬಾಲಾಪರಾಧಿಗಳನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಟೆಂಪೋ, ಎರಡು ಚಾಕುಗಳು ಮತ್ತು ರಕ್ತಸಿಕ್ತ ಬಟ್ಟೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 70 (ಸಾಮೂಹಿಕ ಅತ್ಯಾಚಾರ), ಸೆಕ್ಷನ್ 103(ಕೊಲೆ) ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಮೂವರು ಆರೋಪಿಗಳು ಅಪ್ರಾಪ್ತರಾಗಿರುವುದರಿಂದ (16 ರಿಂದ 17 ವರ್ಷ), ಜುವೆನೈಲ್ ಜಸ್ಟಿಸ್ ಕಾಯ್ದೆಯ ಅಡಿಯಲ್ಲಿ ಇವರನ್ನು ವಯಸ್ಕರೆಂದು ಪರಿಗಣಿಸಿ ವಿಚಾರಣೆ ನಡೆಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡುವ ಸಾಧ್ಯತೆಯಿದೆ.

ಸಂತ್ರಸ್ತ ಬಾಲಕಿ ಆಗಾಗ ಮನೆ ಬಿಟ್ಟು ಹೋಗಿ ಕೆಲ ದಿನಗಳ ನಂತರ ಮರಳುತ್ತಿದ್ದ ಕಾರಣ, ಕುಟುಂಬಸ್ಥರು ಆರಂಭದಲ್ಲಿ ಆಕೆ ಕಾಣೆಯಾಗಿರುವ ಬಗ್ಗೆ ಯಾವುದೇ ಪೊಲೀಸ್ ದೂರು ನೀಡಿರಲಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ನಡೆದಿರುವುದು ಅಧಿಕೃತವಾಗಿ ದೃಢಪಟ್ಟಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’