AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಇನ್ನು ಮೂರೇ ದಿನ ಲಾಕ್​ಡೌನ್ , ಅಲ್ಲೀಗ ಕೊರೊನಾ ಪರಿಸ್ಥಿತಿ ಹೇಗಿದೆ? ಸಿಎಂ ಅರವಿಂದ ಕೇಜ್ರಿವಾಲ್ ಹೇಳೋದೇನು?

Arvind Kejriwal: ದೆಹಲಿಯಲ್ಲಿ 1,100 ಕೊರೊನಾ ಕೇಸ್ ಮಾತ್ರ ಪತ್ತೆಯಲ್ಲಿದೆ. ಕೊರೊನಾ ಟೆಸ್ಟಿಂಗ್ ಪಾಸಿಟಿವಿಟಿ ದರ ಶೇ. 1.5 ರಷ್ಟು ಮಾತ್ರ ಇದೆ. ಹಾಗಾಗಿ ಇದು ಆನ್ ಲಾಕ್ ಮಾಡುವ ಸಮಯ- ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

ದೆಹಲಿಯಲ್ಲಿ ಇನ್ನು ಮೂರೇ ದಿನ ಲಾಕ್​ಡೌನ್ , ಅಲ್ಲೀಗ ಕೊರೊನಾ ಪರಿಸ್ಥಿತಿ ಹೇಗಿದೆ? ಸಿಎಂ ಅರವಿಂದ ಕೇಜ್ರಿವಾಲ್ ಹೇಳೋದೇನು?
ದೆಹಲಿಯಲ್ಲಿ ಇನ್ನು ಮೂರೇ ದಿನ ಲಾಕ್​ಡೌನ್ , ಅಲ್ಲೀಗ ಕೊರೊನಾ ಪರಿಸ್ಥಿತಿ ಹೇಗಿದೆ? ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳೋದೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 28, 2021 | 1:56 PM

Share

ದೆಹಲಿ: ಕೊರೊನಾ ಎರಡನೆಯ ಅಲೆ ದೇಶದಲ್ಲಿ ಜೋರಾಗಿಯೇ ಬೀಸಿತ್ತು. ಆದರೆ ವಾಣಿಜ್ಯ ರಾಜಧಾನಿ ಮುಂಬೈ ಮತ್ತು ರಾಷ್ಟ್ರ ರಾಜಧಾನಿ ದೆಹಲಿಗಳಲ್ಲಿ ಈಗ ಪರಿಸ್ಥಿತಿ ಸುಧಾರಿಸುತ್ತಿದೆ. ಅಲ್ಲೀಗ ಕೊರೊನಾ ಮಾರಿ ಈಗ ನಿಯಂತ್ರಣಕ್ಕೆ ಬರುತ್ತಿದೆ. ಇದಕ್ಕೆ ಮುಖ್ಯವಾಗಿ ಕಾರಣವಾಗಿದ್ದು ಲಾಕ್​ಡೌನ್ ಎಂಬ ಮಹಾದಂಡದ ಪ್ರಯೋಗ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿರುವುದರಿಂದ ಅಲ್ಲಿನ್ನು ಮೂರೇ ಮೂರು ದಿನದಲ್ಲಿ ಲಾಕ್​ಡೌನ್ ನಿಯಂತ್ರಣವನ್ನು ತೆಗೆದುಹಾಕಲಾಗುವುದು.

ಮೇ 31ರ ಬಳಿಕ ದೆಹಲಿಯಲ್ಲಿ ಲಾಕ್​ಡೌನ್ ಸಡಿಲಿಕೆ ಮಾಡುವುದಾಗಿ ಹೇಳಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ದೆಹಲಿಯಲ್ಲಿ 1,100 ಕೊರೊನಾ ಕೇಸ್ ಮಾತ್ರ ಪತ್ತೆಯಲ್ಲಿದೆ. ಕೊರೊನಾ ಟೆಸ್ಟಿಂಗ್ ಪಾಸಿಟಿವಿಟಿ ದರ ಶೇ. 1.5 ರಷ್ಟು ಮಾತ್ರ ಇದೆ. ಹಾಗಾಗಿ ಇದು ಆನ್ ಲಾಕ್ ಮಾಡುವ ಸಮಯ. ಅದಕ್ಕೆ ಜೂನ್​ 1ರಿಂದ ಹಂತಹಂತವಾಗಿ ಲಾಕ್​ಡೌನ್ ಸಡಿಲಿಕೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ದೇಶದ ಇತರೆ ಭಾಗಗಳಲ್ಲಿ ಅನ್​ಲಾಕ್​ ಯಾವಾಗ?:

ಈ ಹಿಂದೆ, ದೆಹಲಿಯಲ್ಲಿ ಲಾಕ್​ಡೌನ್ ಇನ್ನೊಂದು ವಾರ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದರಾದರೂ ಇಂದು ಲೆಫ್ಟಿನೆಟ್​ ಗವರ್ನರ್​ ಜೊತೆ ನಡೆದ ಸಭೆಯ ಬಳಿಕ ಲಾಕ್​ಡೌನ್​ ಅನ್ನು ಹಂತಹಂತವಾಗಿ ವಾಪಸ್ ಪಡೆಯುವ ನಿರ್ಧಾರ ಪ್ರಕಟಿಸಿದ್ದಾರೆ. ದೆಹಲಿಯಲ್ಲಿ ಇಂತಹ ಬದಲಾವಣೆ ಚೇತೋಹಾರಿಯಾಗಿದ್ದು, ದೇಶದ ಇತರೆ ಭಾಗಗಳಲ್ಲಿಯೂ ಕೊರೊನಾ ನಿಯಂತ್ರಣಕ್ಕೆ ಬಂದರೆ ಲಾಕ್​ಡೌ್​ನ್ ಎಂಬ ಅಸ್ತ್ರ ಶೀಘ್ರವೇ ಸಡಿಲಿಕೆಯಾಗುವ ನಿರೀಕ್ಷೆಯಿದೆ.

ತಾತ್ಕಾಲಿಕವಾಗಿ ದೆಹಲಿಯಲ್ಲಿ ಕೆಲ ಚಟುವಟಿಕೆ ಪುನರ್ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ದೆಹಲಿಯಲ್ಲಿ ಮೇ 31 ರ ಬಳಿಕ ಕಾರ್ಖಾನೆಗಳು ಪುನರ್ ಆರಂಭವಾಗಲಿವೆ. ನಿರ್ಮಾಣ ಚಟುವಟಿಕೆ ಕೂಡ ಪುನರ್ ಆರಂಭಕ್ಕೆ ಸರ್ಕಾರದ ಸೂಚನೆ ‌ನೀಡಲಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

(Delhi to be Unlocked from june 1st says delhi chief minister arvind Kejriwal)

Delhi Extends Lockdown ದೆಹಲಿಯಲ್ಲಿ ಮತ್ತೆ ಲಾಕ್‌ಡೌನ್ ವಿಸ್ತರಣೆ, ಕೊವಿಡ್ ಪ್ರಕರಣ ಕಡಿಮೆ ಆದರೆ ಮಾತ್ರ ಮೇ 31ಕ್ಕೆ ಅನ್​ಲಾಕ್: ಅರವಿಂದ ಕೇಜ್ರಿವಾಲ್

Published On - 1:42 pm, Fri, 28 May 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ