ರಾಹುಲ್​ ಗಾಂಧಿ ಮತ್ತೆ ಕಾಂಗ್ರೆಸ್​ ಅಧ್ಯಕ್ಷ ಸ್ಥಾನ ಅಲಂಕರಿಸಲಿ: ಠರಾವು ಅಂಗೀಕರಿಸಿದ ದೆಹಲಿ ಕಾಂಗ್ರೆಸ್​ ಘಟಕ

|

Updated on: Jan 31, 2021 | 8:56 PM

ಮೇ ಬಳಿಕ ಕಾಂಗ್ರೆಸ್​ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕಾಂಗ್ರೆಸ್​ ಇತ್ತೀಚೆಗೆ ಸ್ಪಷ್ಟನೆ ನೀಡಿತ್ತು. ಇದಾದ ಬೆನ್ನಲ್ಲೇ ಕಾಂಗ್ರೆಸ್​ ದೆಹಲಿ ಘಟಕ ಈ ಠರಾವು ಅಂಗೀಕರಿಸಿದೆ. 

ರಾಹುಲ್​ ಗಾಂಧಿ ಮತ್ತೆ ಕಾಂಗ್ರೆಸ್​ ಅಧ್ಯಕ್ಷ ಸ್ಥಾನ ಅಲಂಕರಿಸಲಿ: ಠರಾವು ಅಂಗೀಕರಿಸಿದ ದೆಹಲಿ ಕಾಂಗ್ರೆಸ್​ ಘಟಕ
ಹುತಾತ್ಮ ಸೈನಿಕರಿಗೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅಪಚಾರ ಎದಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.
Follow us on

ನವದೆಹಲಿ: ರಾಹುಲ್​ ಗಾಂಧಿ ಈಗಲೇ ಕಾಂಗ್ರೆಸ್​ ಅಧ್ಯಕ್ಷ ಸ್ಥಾನ ಅಲಂಕರಿಸಬೇಕು ಎನ್ನುವ ಠರಾವನ್ನು ದೆಹಲಿ ಕಾಂಗ್ರೆಸ್​ ಘಟಕ ಅವಿರೋಧವಾಗಿ ಅಂಗೀಕರಿಸಿದೆ. ಈ ಮೂಲಕ ರಾಹುಲ್​ ಗಾಂಧಿ ಮತ್ತೆ ಅಧ್ಯಕ್ಷರಾಗಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಮೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಇದಾದ ಬಳಿಕ ಕಾಂಗ್ರೆಸ್​ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕಾಂಗ್ರೆಸ್​ ಇತ್ತೀಚೆಗೆ ಸ್ಪಷ್ಟನೆ ನೀಡಿತ್ತು. ಇದಾದ ಬೆನ್ನಲ್ಲೇ ಕಾಂಗ್ರೆಸ್​ ದೆಹಲಿ ಘಟಕ ಈ ಠರಾವು ಅಂಗೀಕರಿಸಿದೆ.

ಕಳೆದ ಬಾರಿ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆ ಸೇರಲಾಗಿತ್ತು. ಹಿರಿಯ ನಾಯಕರಾದ ಗುಲಾಮ್ ನಬಿ ಆಜಾದ್, ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಪಿ ಚಿದಂಬರಂ ಅವರು ತಕ್ಷಣ ಸಾಂಸ್ಥಿಕ ಚುನಾವಣೆ ನಡೆಯಬೇಕೆಂದು ಒತ್ತಾಯಿಸಿದ್ದರು. ಹಲವು ಚುನಾವಣಾ ಸೋಲುಗಳ ನಂತರ ಪಕ್ಷದ ನಾಯಕತ್ವ ಮತ್ತು ನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ಕಾಂಗ್ರೆಸ್ ನಾಯಕರಲ್ಲಿ ಇವರು ಪ್ರಮುಖರಾಗಿದ್ದರು. ಗಾಂಧಿ ಕುಟುಂಬದ ನಿಷ್ಠಾವಂತರು ಎಂದು ಕರೆಯಲ್ಪಡುವ ಅಶೋಕ್ ಗೆಹ್ಲೋಟ್, ಅಮರಿಂದರ್ ಸಿಂಗ್, ಎಕೆ ಆಂಟನಿ, ತಾರಿಕ್ ಅನ್ವರ್ ಮತ್ತು ಉಮ್ಮನ್ ಚಾಂಡಿ, ಬಂಗಾಳ, ತಮಿಳುನಾಡು ಸೇರಿದಂತೆ ಐದು ರಾಜ್ಯಗಳಲ್ಲಿ ಚುನಾವಣೆಯ ನಂತರ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆಯಬೇಕು ಎಂದು ಹೇಳಿದ್ದರು.

 

CWC Meeting: ಪಂಚ ರಾಜ್ಯಗಳ ಚುನಾವಣೆ ನಂತರವಷ್ಟೇ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ