Bomb Threat: ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ, ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ವಿಮಾನಕ್ಕೆ ಬಾಂಬ್​ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ

Bomb Threat: ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ
ಇಂಡಿಗೋ ವಿಮಾನImage Credit source: India TV
Follow us
ನಯನಾ ರಾಜೀವ್
|

Updated on: May 28, 2024 | 7:27 AM

ದೆಹಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ(Bomb Threat) ಬಂದಿರುವುದಾಗಿ ವರದಿಯಾಗಿದೆ. ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ವಿಮಾನಯಾನ ಭದ್ರತೆ ಮತ್ತು ಬಾಂಬ್ ನಿಷ್ಕ್ರಿಯ ತಂಡವು ಸ್ಥಳದಲ್ಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಯಿತು. ದೆಹಲಿ ಅಗ್ನಿಶಾಮಕ ಸೇವೆಯ ಪ್ರಕಾರ, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಮತ್ತು ವಿಮಾನವನ್ನು ಪರಿಶೀಲಿಸಲಾಗುತ್ತಿದೆ.

ಇಂದು ಮುಂಜಾನೆ 5.35 ಕ್ಕೆ ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಇತ್ತು. QRT ಸ್ಥಳಕ್ಕೆ ತಲುಪಿತು. ಎಲ್ಲಾ ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ, ವಿಮಾನವನ್ನು ಪರಿಶೀಲಿಸಲಾಗುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ, ಎಫ್​​ಐಆರ್​ ದಾಖಲು

ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ ವಿಮಾನ(Flight) ಹತ್ತುವ ಮುಂಚೆ ಭಾಂಗ್ ಕುಡಿದಿದ್ದ ಪ್ರಯಾಣಿಕರೊಬ್ಬರು ಆಗಸದಲ್ಲಿ ವಿಮಾನದ ಬಾಗಿಲು ತೆಗೆಯಲು ಯತ್ನಿಸಿರುವ ಘಟನೆ ನಡೆದಿದೆ. ಇಂದೋರ್​ನಿಂದ ಹೈದರಾಬಾದ್​ಗೆ ತೆರಳುತ್ತಿದ್ದ ಇಂಡಿಗೋ(IndiGo) ವಿಮಾನದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ವಿಮಾನವು ಹೈದರಾಬಾದ್‌ನಲ್ಲಿ ಲ್ಯಾಂಡ್ ಆಗುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ. 29 ವರ್ಷದ ವ್ಯಕ್ತಿ ವಿಮಾನ ಹತ್ತುವ ಮೊದಲು ‘ಭಾಂಗ್’ ಸೇವಿಸಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುವ ಮುನ್ನ ಏರ್‌ಲೈನ್ಸ್ ಉದ್ಯೋಗಿಗಳೊಂದಿಗೆ ವಾಗ್ವಾದ ನಡೆಸಿದ್ದರು ಎಂದು ಅವರು ಹೇಳಿದರು. ಘಟನೆ ಮೇ 21ರಂದು ನಡೆದಿದೆ ಎಂದು ಹೇಳಲಾಗಿದೆ, ಈ ವ್ಯಕ್ತಿಯ ವಿರುದ್ಧ ಏರ್‌ಲೈನ್ಸ್ ಸಿಬ್ಬಂದಿ ದೂರು ದಾಖಲಿಸಿದ್ದಾರೆ ಮತ್ತು ಅವರನ್ನು ಬಂಧಿಸಲಾಗಿದೆ.

ವರದಿಗಳ ಪ್ರಕಾರ, ವ್ಯಕ್ತಿ ಇಂದೋರ್‌ನಲ್ಲಿ ವಿಮಾನವನ್ನು ಹತ್ತಿದ ಕೂಡಲೇ, ಸಿಬ್ಬಂದಿ ಅವನ ನಡವಳಿಕೆಯಲ್ಲಿ ಅಸಹಜತೆಯನ್ನು ಗಮನಿಸಿದರು, ನಂತರ ಅವರು ವ್ಯಕ್ತಿಯನ್ನು ಬೇರೆ ಸೀಟಿಗೆ ಸ್ಥಳಾಂತರಿಸಿದರು. ಪ್ರಯಾಣಿಕ ತನ್ನ ಸ್ನೇಹಿತನೊಂದಿಗೆ ಕುಳಿತುಕೊಳ್ಳುವುದಾಗಿ ಹಠ ಹಿಡಿದಿದ್ದರು, ಸಿಬ್ಬಂದಿ ಕೊನೆಗೆ ಒಪ್ಪಿಗೆ ನೀಡಿದ್ದರು.

ವ್ಯಕ್ತಿ ಸ್ವಲ್ಪ ಸಮಯದವರೆಗೆ ಶಾಂತವಾಗಿ ಕುಳಿತಿದ್ದರು ಬಳಿಕ ಸಹ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ