AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ವಿಮಾನ ಸಂಚಾರ ವ್ಯತ್ಯಯ

ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯು ಇನ್ನೂ ಒಂದೆರೆಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ದೆಹಲಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ವಿಮಾನ ಸಂಚಾರ ವ್ಯತ್ಯಯ
ದೆಹಲಿಯಲ್ಲಿ ಸೋಮವಾರ ನಸುಕಿನಿಂದ ಮಳೆ ಆರಂಭವಾಗಿದೆ.
TV9 Web
| Edited By: |

Updated on: May 23, 2022 | 8:16 AM

Share

ದೆಹಲಿ: ರಾಷ್ಟ್ರ ರಾಜಧಾನಿಯ ವಿವಿಧೆಡೆ ಸೋಮವಾರ (ಮೇ 23) ಮುಂಜಾನೆಯಿಂದ ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಕೆಟ್ಟ ಹವಾಮಾನದ ಹಿನ್ನೆಲೆಯಲ್ಲಿ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಮತ್ತು ಅಲ್ಲಿಂದ ತೆರಳಬೇಕಿದ್ದ ಹಲವು ವಿಮಾನಗಳನ್ನು ರದ್ದುಪಡಿಸಲಾಗಿದೆ. ವಿಮಾ ನಿಲ್ದಾಣಕ್ಕೆ ಬರುವ ಮೊದಲು ವಿಮಾನ ಯಾನ ಸಂಸ್ಥೆಗಳೊಂದಿಗೆ ಮಾಹಿತಿ ಖಚಿತಪಡಿಸಿಕೊಳ್ಳುವಂತೆ ಪ್ರಯಾಣಿಕರಿಗೆ ದೆಹಲಿ ಸರ್ಕಾರವು ಸೂಚನೆ ನೀಡಿದೆ. ಬಿರುಗಾಳಿಯಿಂದಾಗಿ ಮರಗಳು ಬೇರು ಸಹಿತ ಉರುಳಿದ್ದು, ವಿದ್ಯುತ್ ಕಂಬಗಳು ಧರೆಗುರುಳಿವೆ. ವಿದ್ಯುತ್ ಪೂರೈಕೆ ಕಡಿತಗೊಂಡಿದೆ.

ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯು ಇನ್ನೂ ಒಂದೆರೆಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ವಿಮಾನಯಾನ ಕಂಪನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ವಿಮಾನ ನಿಲ್ದಾಣ ಪ್ರಾಧಿಕಾರವು ಪ್ರಯಾಣಿಕರನ್ನು ಎಚ್ಚರಿಸಿವೆ.

‘ದೆಹಲಿಯಲ್ಲಿ ಕೆಟ್ಟ ಹವಾಮಾನ ಇರುವ ಕಾರಣ ವಿಮಾನಗಳ ಆಗಮನ ಮತ್ತು ನಿರ್ಗಮನ ಸಮಯದಲ್ಲಿ ವ್ಯತ್ಯಯವಾಗಬಹುದು. ಪ್ರಯಾಣಿಕರು ತಮ್ಮ ವಿಮಾನಗಳ ಮಾಹಿತಿಯನ್ನು ನಿರಂತರ ಪರಿಶೀಲಿಸುತ್ತಿರಬೇಕು’ ಎಂದು ಸ್ಪೈಸ್ ಜೆಟ್​ ಟ್ವೀಟ್ ಮಾಡಿದೆ. ಬಿರುಗಾಳಿಯ ಕಾರಣದಿಂದ ಗುಡಿಸಲುಗಳು ಮತ್ತು ಕಚ್ಚಾ ಮನೆಗಳಿಗೆ ಹಾನಿಯಾಗಬಹುದು. ಟ್ರಾಫಿಕ್ ವ್ಯತ್ಯಯ ಉಂಟಾಗಬಹುದು ಎಂದು ಹವಾಮಾನ ಇಲಾಖೆಯು ಟ್ವೀಟ್​ ಒಂದರಲ್ಲಿ ಎಚ್ಚರಿಸಿತ್ತು.

ಗುಡುಗು ಸಿಡಿಲುಗಳೊಂದಿಗೆ ಸುರಿಯುವ ಮಳೆಯ ಜೊತೆಗೆ ಗಂಟೆಗೆ 60ರಿಂದ 90 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ದೆಹಲಿ ಮತ್ತು ರಾಷ್ಟ್ರ ರಾಜಧಾನಿ ವಲಯ ಪ್ರದೇಶದ ಸುತ್ತಮುತ್ತಲೂ ಇಂಥದ್ದೇ ವಾತಾವರಣ ಇರಲಿದೆ ಎಂದು ಹೇಳಿದೆ. ಬಿರುಗಾಳಿಯಿಂದಾಗಿ ಮರಗಳು ಬೇರು ಸಹಿತ ರಸ್ತೆಗಳ ಮೇಲೆ ಉರುಳಿವೆ. ಹೀಗಾಗಿ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಉಟಾಗಿದೆ. ನಗರ ಪ್ರದೇಶದಲ್ಲಿರುವ ಜನರು ಮನೆಗಳಲ್ಲಿಯೇ ಇರುವುದು ಕ್ಷೇಮ. ಸಾಧ್ಯವಾದ ಮಟ್ಟಿಗೂ ಪ್ರಯಾಣ ಹೊರಡಬೇಡಿ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಟ್ವಿಟರ್​ನಲ್ಲಿ ಸಾಕಷ್ಟು ಜನರು ತಮ್ಮ ಅನುಭವಗಳು ಮತ್ತು ಮಳೆಯಿಂದ ಆಗಿರುವ ಹಾನಿಯ ವಿವರಗಳನ್ನು ಟ್ವೀಟ್ ಮಾಡಿದ್ದಾರೆ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ