ಮೆಟ್ರೋ ನಿಲ್ದಾಣದಿಂದ ಕಬ್ಬಿಣದ ರಾಡ್ ಕೆಳಗೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ದೆಹಲಿಯ ಸುಭಾಷ್ನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮಹಿಳೆ ತನ್ನ ಸ್ಕೂಟಿಯಲ್ಲಿ ನಿಲ್ದಾಣದ ಮೂಲಕ ಹಾದು ಹೋಗುತ್ತಿದ್ದಾಗ ಮೆಟ್ರೋ ನಿಲ್ದಾಣದಿಂದ ರಾಡ್ ಬಿದ್ದಿದೆ. ಮಹಿಳೆಗೆ ಗಾಯಗಳಾಗಿದ್ದರೂ ದೂರು ಕೊಡಲು ನಿರಾಕರಿಸಿದ್ದಾಳೆ.
ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಯಾವುದೇ ಗಂಭೀರ ಗಾಯ ಅಥವಾ ಹಾನಿ ಸಂಭವಿಸಿಲ್ಲ ಎಂದು ಡಿಎಂಆರ್‌ಸಿ ಮೂಲಗಳು ತಿಳಿಸಿವೆ. ಘಟನೆಯ ನಂತರ ಮೆಟ್ರೋ ನಿಲ್ದಾಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳೆಯನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಮೆಟ್ರೋ ನಿಲ್ದಾಣದ ವಿಡಿಯೋ
#WATCH | Delhi | An iron pipe reportedly dislocated from Subhash Nagar Metro Station and fell on a car and scooty earlier this evening. At least one injury reported. Details awaited. pic.twitter.com/y03qJAbevh
— ANI (@ANI) February 15, 2024
ಗೋಕುಲಪುರಿ ಮೆಟ್ರೋ ನಿಲ್ದಾಣದಲ್ಲಿ ಅವಘಡ
ಫೆಬ್ರವರಿ 8 ರಂದು, ಈಶಾನ್ಯ ದೆಹಲಿಯ ಎತ್ತರದ ಗೋಕುಲಪುರಿ ಮೆಟ್ರೋ ನಿಲ್ದಾಣದ ಗೋಡೆಯ ಒಂದು ಭಾಗವು ಕುಸಿದು, 56 ವರ್ಷದ ವ್ಯಕ್ತಿಯ ಜೀವವನ್ನು ಬಲಿ ತೆಗೆದುಕೊಂಡಿತು ಮತ್ತು ನಾಲ್ಕು ಜನರು ಗಾಯಗೊಂಡರು. ದುರಂತ ಘಟನೆಯ ನಂತರ, ನಾಗರಿಕ ಇಲಾಖೆಯ ಇಬ್ಬರು DMRC ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಮತ್ತಷ್ಟು ಓದಿ: ದೆಹಲಿ: ಗೋಕುಲಪುರಿ ಮೆಟ್ರೋ ನಿಲ್ದಾಣದ ಒಂದು ಭಾಗ ಕುಸಿತ, 4 ಮಂದಿಗೆ ಗಂಭೀರ
ಗಾಯಗೊಂಡವರಿಗೆ 50,000 ರೂಪಾಯಿ ಮತ್ತು ತೀವ್ರವಾಗಿ ಗಾಯಗೊಂಡವರಿಗೆ 2 ಲಕ್ಷ 50 ಸಾವಿರ ರೂಪಾಯಿಗಳ ಪರಿಹಾರವನ್ನು DMRC ಘೋಷಿಸಿತು. ಮೃತ ವ್ಯಕ್ತಿಗೆ ಡಿಎಂಆರ್‌ಸಿ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮೃತ ವ್ಯಕ್ತಿ ಮಗಳ ನಿಶ್ಚಿತಾರ್ಥ ಮುಗಿಸಿ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:48 am, Fri, 16 February 24