ಮಾರುಕಟ್ಟೆಯೊಂದರಲ್ಲಿ ವೇಗವಾಗಿ ಬಂದ ಕಾರೊಂದು 15 ಜನರ ಮೇಲೆ ಹರಿದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೂರ್ವ ದೆಹಲಿಯ ಗಾಜಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೂಡಲೇ ಸ್ಥಳದಲ್ಲಿದ್ದವರು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಪೈಕಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ ಕಾರು ಚಾಲಕನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆ
ಚಾಲಕ ಕುಡಿದ ಅಮಲಿನಲ್ಲಿದ್ದ ಎಂದು ಹೇಳಲಾಗುತ್ತಿದೆ. ಅಪಘಾತದ ವೇಳೆ ಮಾರುಕಟ್ಟೆಯಲ್ಲಿ ಜನಸಾಗರವೇ ನೆರೆದಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೇಗವಾಗಿ ಬಂದ ಕಾರು ಮಾರುಕಟ್ಟೆಗೆ ಬರುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ವೇಳೆ ಅಂಗಡಿಗಳಲ್ಲಿದ್ದ ಜನರು, ಬೀದಿಬದಿ ವ್ಯಾಪಾರಿಗಳು, ಖರೀದಿದಾರರು ತುಳಿತಕ್ಕೆ ಒಳಗಾಗುತ್ತಿರುವುದ ಕಾಣಬಹುದು. ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಮಾರುಕಟ್ಟೆಯಲ್ಲಿದ್ದ ಜನ ಗಲಾಟೆ ಶುರು ಮಾಡಿದರು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಅಪಘಾತ ದೃಶ್ಯ
STORY | 22-year-old woman killed after car mows down people in Delhi
READ: https://t.co/t6fkhLgn0L
VIDEO: pic.twitter.com/rkyg6LGWyP
— Press Trust of India (@PTI_News) March 13, 2024
ಚಿಕಿತ್ಸೆ ವೇಳೆ ಮಹಿಳೆ ಸಾವು
ಗಾಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಯೂರ್ ವಿಹಾರ್ 3 ನೇ ಹಂತದ ಬುಧ್ ಬಜಾರ್‌ನಲ್ಲಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳೀಯರು ವಾಹನವನ್ನು ಧ್ವಂಸಗೊಳಿಸಿ ಚಾಲಕನಿಗೆ ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮತ್ತಷ್ಟು ಓದಿ: ತುಕಾಲಿ ಸಂತೋಷ್ ಕಾರು ಅಪಘಾತ ಪ್ರಕರಣ; ಚಿಕಿತ್ಸೆ ಫಲಿಸದೆ ಆಟೋ ಚಾಲಕ ಸಾವು
ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಮಹಿಳೆಯರು ಸೇರಿದಂತೆ ಎಲ್ಲಾ ಗಾಯಾಳುಗಳನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಗಾಜಿಯಾಬಾದ್‌ನ ಹಯಾತ್ ನಗರದ ಪಟ ಖೋಡಾ ಕಾಲೋನಿ ನಿವಾಸಿ ಸೀತಾ ದೇವಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ