AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಲೈಂಗಿಕವಾಗಿ ತೃಪ್ತಿ ಪಡಿಸಲಿಲ್ಲವೆಂದು ಗಂಡನನ್ನು ಕೊಂದ ಹೆಂಡತಿ!

ದೆಹಲಿಯ ಮಹಿಳೆಯೊಬ್ಬಳು ತನ್ನ ಗಂಡ ಆಕೆಯನ್ನು ಲೈಂಗಿಕವಾಗಿ ತೃಪ್ತಿಪಡಿಸಲಿಲ್ಲ ಎಂಬ ಕಾರಣಕ್ಕೆ ಆತನನ್ನು ಕೊಂದು ಆತ್ಮಹತ್ಯೆಯ ಕತೆ ಕಟ್ಟಿದ್ದಾಳೆ. ಆಕೆಯ ಪತಿ ಆಕೆಗೆ ದೈಹಿಕ ಸುಖವನ್ನು ನೀಡಲು ಸಾಧ್ಯವಾಗಲಿಲ್ಲ ಎಂಬ ಕಾರಣದಿಂದ ಆಕೆ ತನ್ನ ಕಸಿನ್ ಜೊತೆ ಸ್ನೇಹ ಬೆಳೆಸಿದಳು. ಪೊಲೀಸರು ಈ ಕೊಲೆಯಲ್ಲಿ ಆತನ ಪಾತ್ರದ ಬಗ್ಗೆಯೂ ತನಿಖೆ ಮಾಡುತ್ತಿದ್ದಾರೆ. ಮಹಿಳೆ ತನ್ನ ಗಂಡನ ಎದೆಗೆ ಮೂರು ಬಾರಿ ಇರಿದು, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಅಳುತ್ತಾ ಆಸ್ಪತ್ರೆಗೆ ಕರೆದೊಯ್ದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Shocking News: ಲೈಂಗಿಕವಾಗಿ ತೃಪ್ತಿ ಪಡಿಸಲಿಲ್ಲವೆಂದು ಗಂಡನನ್ನು ಕೊಂದ ಹೆಂಡತಿ!
Stab
ಸುಷ್ಮಾ ಚಕ್ರೆ
|

Updated on: Jul 24, 2025 | 9:16 PM

Share

ನವದೆಹಲಿ, ಜುಲೈ 24: ಇಡೀ ದೇಶದಲ್ಲಿ ಹೆಚ್ಚಾಗುತ್ತಿರುವ ಅಕ್ರಮ ಸಂಬಂಧಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಮತ್ತೊಂದು ಸೇರ್ಪಡೆಯಾಗಿದೆ. ದೆಹಲಿಯಲ್ಲಿ 32 ವರ್ಷದ ತನ್ನ ಪತಿಯನ್ನು ಕೊಂದು ಅದನ್ನು ಆತ್ಮಹತ್ಯೆ (Crime News) ಎಂದು ಬಿಂಬಿಸಲು ಪ್ರಯತ್ನಿಸಿದ ಆರೋಪದ ಮೇಲೆ 29 ವರ್ಷದ ಮಹಿಳೆಯನ್ನು ಮಂಗಳವಾರ ಬಂಧಿಸಲಾಗಿದೆ. ಈ ಘಟನೆ ಭಾನುವಾರ ಸಂಜೆ ದೆಹಲಿಯ ನಿಹಾಲ್ ವಿಹಾರ್ ಪ್ರದೇಶದಲ್ಲಿ ನಡೆದಿದೆ. ಆಕೆಯ ಗಂಡ ಆಕೆಗೆ ಲೈಂಗಿಕ ಸುಖ ನೀಡುತ್ತಿರಲಿಲ್ಲ ಎಂಬ ಕಾರಣದಿಂದ ಅವರಿಬ್ಬರ ನಡುವೆ ಜಗಳವಾಗುತ್ತಿತ್ತು. ಗಂಡನ ನಿರ್ಲಕ್ಷ್ಯ, ಲೈಂಗಿಕ ಕ್ರಿಯೆಯಲ್ಲಿನ ನಿರಾಸಕ್ತಿಯಿಂದ ಬೇಸತ್ತ ಆ ಮಹಿಳೆ ತನ್ನ ಕಸಿನ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಕೊನೆಗೆ ತನ್ನ ಸಂಬಂಧಕ್ಕೆ ಅಡ್ಡ ಬರುತ್ತಾನೆಂದು ಆಕೆ ಗಂಡನನ್ನು ಕೊಲೆ ಮಾಡಿ, ಆತ್ಮಹತ್ಯೆಯ ಕತೆ ಕಟ್ಟಿದ್ದಾಳೆ.

ಪೊಲೀಸರ ಪ್ರಕಾರ, ಜುಲೈ 20ರ ಸಂಜೆ 4.15ರ ಸುಮಾರಿಗೆ ನಿಹಾಲ್ ವಿಹಾರ್ ಪೊಲೀಸ್ ಠಾಣೆಗೆ ಸ್ಥಳೀಯ ಆಸ್ಪತ್ರೆಯಿಂದ ಕರೆ ಬಂದಿದ್ದು, ಮಹಿಳೆಯೊಬ್ಬರು ಮೊಹಮ್ಮದ್ ಶಾಹಿದ್ ಎಂಬ ಗುರುತಿಸಲಾದ ತನ್ನ ಪತಿಯನ್ನು ಹಲವಾರು ಇರಿತದ ಗಾಯಗಳೊಂದಿಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ ಎಂದು ವರದಿಯಾಗಿದೆ. ಆ ವ್ಯಕ್ತಿ ಆಸ್ಪತ್ರೆಗೆ ಬರುವಷ್ಟರಲ್ಲಿ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.

ಇದನ್ನೂ ಓದಿ: ಆನ್‌ಲೈನ್​ನಲ್ಲಿ ಲುಡೋ ಆಡಿ 5 ಲಕ್ಷ ಕಳೆದುಕೊಂಡು ಯುವಕ ಆತ್ಮಹತ್ಯೆ; ಹೈದರಾಬಾದ್​​​ನಲ್ಲಿ ಶಾಕಿಂಗ್ ಘಟನೆ

ಪೊಲೀಸರು ಆಸ್ಪತ್ರೆಗೆ ತಲುಪಿದಾಗ, ಆ ಮಹಿಳೆ ತನ್ನ ಪತಿ ತನ್ನನ್ನು ತಾನೇ ಚಾಕುವಿನಿಂದ ಚುಚ್ಚಿಕೊಂಡಿದ್ದಾನೆ ಎಂದು ಹೇಳಿದ್ದಾಳೆ. ಆದರೆ, ಮರಣೋತ್ತರ ಪರೀಕ್ಷೆಯ ವರದಿಯು ಗಾಯಗಳು ಮುಂಭಾಗದಿಂದ ದಾಳಿ ನಡೆದಿದೆ ಎಂದು ಇದ್ದುದರಿಂದ ಆತ ತನಗೆ ತಾನೇ ಇರಿದುಕೊಂಡಿದ್ದು ಸುಳ್ಳು ಎಂಬುದು ಗೊತ್ತಾಯಿತು. ಇದರ ನಂತರ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ತೀವ್ರಗೊಳಿಸಿದರು.

ವಿಚಾರಣೆ ಮತ್ತು ಆಕೆಯ ಮೊಬೈಲ್ ಫೋನ್‌ನ ವಿಧಿವಿಜ್ಞಾನ ಪರಿಶೀಲನೆಯ ಸಮಯದಲ್ಲಿ ತನಿಖಾಧಿಕಾರಿಗಳು ಆ ಮಹಿಳೆಯ ಇಂಟರ್ನೆಟ್ ಸರ್ಚ್ ಹಿಸ್ಟರಿ ಗಮನಿಸಿದಾಗ ಅದರಲ್ಲಿ “ಚಾಟ್ ಹಿಸ್ಟರಿ ಡಿಲೀಟ್ ಮಾಡುವುದು, ಅಲ್ಯೂಮಿನಿಯಂ ಫಾಸ್ಫೈಡ್‌ನಂತಹ ವಿಷಕಾರಿ ವಸ್ತುಗಳನ್ನು ಬಳಸುವುದು ಹೇಗೆ” ಎಂಬಿತ್ಯಾದಿ ಸರ್ಚ್​ಗಳಿದ್ದವು. ಇದರಿಂದ ಅನುಮಾನಗೊಂಡ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದರು.

ಇದನ್ನೂ ಓದಿ: ಆಫೀಸಿನ ಭ್ರಷ್ಟಾಚಾರಕ್ಕೆ ಸಹಕರಿಸಲಾಗದೆ ಇಂಜಿನಿಯರ್ ಆತ್ಮಹತ್ಯೆ; ಸೂಸೈಡ್ ನೋಟ್​​ನಲ್ಲಿತ್ತು ಇಬ್ಬರ ಹೆಸರು

ಆಗ ಆ ಮಹಿಳೆ ತನ್ನ ಅಪರಾಧವನ್ನು ಒಪ್ಪಿಕೊಂಡಳು. ತನ್ನ ಪತಿಯ ದೈಹಿಕ ಸಂಬಂಧದಿಂದ ಅತೃಪ್ತಳಾಗಿ ಆತನನ್ನು ಕೊಲ್ಲಲು ನಿರ್ಧರಿಸಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾಳೆ. ಶಾಹಿದ್ ಎದೆಗೆ ಮೂರು ಬಾರಿ ಇರಿದ ನಂತರ ತಾನೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಪೊಲೀಸರ ದಾರಿ ತಪ್ಪಿಸಲು ಆತ್ಮಹತ್ಯೆಯ ಕಥೆಯನ್ನು ಹೆಣೆದಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ