Satyendar Jain ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಜೂನ್ 9ರ ವರೆಗೆ ಇಡಿ ಕಸ್ಟಡಿಗೆ

ದೆಹಲಿಯ ಅರವಿಂದ ಕೇಜ್ರಿವಾಲ್ ಸರ್ಕಾರದಲ್ಲಿ ಆರೋಗ್ಯ, ಗೃಹ ಮತ್ತು ಅಧಿಕಾರ ಸೇರಿದಂತೆ ವಿವಿಧ ಖಾತೆಗಳನ್ನು ಹೊಂದಿರುವ ಜೈನ್ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ಹಾಜರುಪಡಿಸಲಾಗಿದೆ.

Satyendar Jain ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಜೂನ್ 9ರ ವರೆಗೆ ಇಡಿ ಕಸ್ಟಡಿಗೆ
ಸತ್ಯೇಂದರ್ ಜೈನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 31, 2022 | 4:52 PM

ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ(Money laundering case) ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ (Satyendar Jain) ಅವರನ್ನು ಜೂನ್ 9 ರವರೆಗೆ ಜಾರಿ ನಿರ್ದೇಶನಾಲಯದ (Enforcement Directorate) ಕಸ್ಟಡಿಗೆ ಕಳುಹಿಸಲಾಗಿದೆ. ದೆಹಲಿಯ ಅರವಿಂದ ಕೇಜ್ರಿವಾಲ್ (Arvind Kejriwal) ಸರ್ಕಾರದಲ್ಲಿ ಆರೋಗ್ಯ, ಗೃಹ ಮತ್ತು ಅಧಿಕಾರ ಸೇರಿದಂತೆ ವಿವಿಧ ಖಾತೆಗಳನ್ನು ಹೊಂದಿರುವ ಜೈನ್ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ಹಾಜರುಪಡಿಸಲಾಗಿದೆ . ಜೈನ್ ಅವರನ್ನು ಹಿರಿಯ ವಕೀಲ ಎನ್ ಹರಿ ಹರನ್ ಅವರು ಪ್ರತಿನಿಧಿಸಿದ್ದು, ಕೇಂದ್ರೀಯ ಸಂಸ್ಥೆಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ  ವಾದ ಮಂಡಿಸಿದರು. ಇದಕ್ಕಿಂತ ಮುಂಚೆ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಕ್ಯಾಬಿನೆಟ್ ಸಹೋದ್ಯೋಗಿಯ ವಿರುದ್ಧದ ಇಡಿ ಪ್ರಕರಣವು ಸುಳ್ಳು. ನಮ್ಮ ಸರ್ಕಾರ “ಪ್ರಾಮಾಣಿಕವಾಗಿದೆ ಮತ್ತು ಭ್ರಷ್ಟಾಚಾರವನ್ನು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ. ನಮಗೆ ನ್ಯಾಯಾಂಗದಲ್ಲಿ ನಂಬಿಕೆ ಇದೆ.ಈ ಪ್ರಕರಣ ಸುಳ್ಳು ಇದು ಉಳಿಯುವುದಿಲ್ಲ. ನಾವು ಸತ್ಯದ ಹಾದಿಯಲ್ಲಿದ್ದೇವೆ ಎಂದು ಹೇಳಿದ್ದಾರೆ. ಜೈನ್ ಅವರನ್ನು ಇಡಿ ಬಂಧಿಸಲಿದೆ ಎಂದು ನಮಗೆ ಮಾಹಿತಿ ಸಿಕ್ಕಿದೆ ಎಂದು ಪಂಜಾಬ್ ಚುನಾವಣೆಗೆ ಮುನ್ನ ಕೇಜ್ರಿವಾಲ್ ಹೇಳಿದ್ದಾರೆ.

ಎಎಪಿ ನಾಯಕ ಮತ್ತು ಜೈನ್ ಪತ್ನಿ ಪೂನಂ ಜೈನ್ ಫೆಬ್ರವರಿ 2015 ಮತ್ತು ಮೇ 2017 ರ ನಡುವೆ ₹ 1.47 ಕೋಟಿ ಮೌಲ್ಯದ ಅಕ್ರಮ ಆಸ್ತಿಯನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಲಾದ ಕೇಂದ್ರೀಯ ತನಿಖಾ ದಳದ (CBI) 2017 ರ ಪ್ರಕರಣವನ್ನು ಆಧರಿಸಿ  ಇಡಿ  ಈ ಕ್ರಮ ತೆಗೆದುಕೊಂಡಿದೆ . ಇದು ಅವರ ಆದಾಯಕ್ಕಿಂತ ದುಪ್ಪಟ್ಟು ಆಗಿದೆ.

ಸೋಮವಾರ ಸುಮಾರು ನಾಲ್ಕು ಗಂಟೆಗಳ ವಿಚಾರಣೆಯ ನಂತರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳ ಅಡಿಯಲ್ಲಿ ದೆಹಲಿ ಸಚಿವರನ್ನು ಬಂಧಿಸಲಾಯಿತು. ಈ ಸಮಯದಲ್ಲಿ ಅವರು ಸಮರ್ಪಕವಾದ ಉತ್ತರವನ್ನು ನೀಡಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ
Image
Watch ಶಿಮ್ಲಾದಿಂದ ಮರಳುತ್ತಿದ್ದಾಗ ದಾರಿ ಮಧ್ಯೆ ಕಾರು ನಿಲ್ಲಿಸಿ ಬಾಲಕಿ ಚಿತ್ರಿಸಿದ ಅಮ್ಮನ ಪೇಟಿಂಗ್ ಸ್ವೀಕರಿಸಿದ ಪ್ರಧಾನಿ ಮೋದಿ
Image
Crime News: ಗಂಡನಿಂದ ಬೇಸತ್ತು ತನ್ನ 6 ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ; ಮಹಾರಾಷ್ಟ್ರದಲ್ಲೊಂದು ದಾರುಣ ಘಟನೆ
Image
ನ್ಯಾಯಾಂಗದ ಮೇಲೆ ನಂಬಿಕೆ ಇದೆ: ಸತ್ಯೇಂದರ್ ಜೈನ್ ಬಂಧನ ಬಗ್ಗೆ ಅರವಿಂದ ಕೇಜ್ರಿವಾಲ್ ಪ್ರತಿಕ್ರಿಯೆ
Image
Satyendar Jain ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್​​​ ಬಂಧನ

ಜೈನ್ ಅವರ ಸಹೋದ್ಯೋಗಿ ಮತ್ತು ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರು ಜೈನ್ ಅವರ ಮೇಲಿನ ಇಡಿ ಕ್ರಮವು “ನಕಲಿ” ಪ್ರಕರಣವನ್ನು ಆಧರಿಸಿದೆ ಎಂದು ಹೇಳಿದ್ದಾರೆ. ಜೈನ್ ಅವರು ಹಿಮಾಚಲ ಪ್ರದೇಶದಲ್ಲಿ ಉಸ್ತುವಾರಿ ವಹಿಸಿದ್ದಾರೆ. ಇದನ್ನು ಗುರಿಯಾಗಿಸಿಕೊಂಡು ಇಡಿ ಕ್ರಮ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 4:27 pm, Tue, 31 May 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್