ಸ್ವಾತಿ ಮಲಿವಾಲ್ ದುಃಖದಿಂದಲೇ ನನಗೆ ಕರೆ ಮಾಡಿದ್ದರು: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ

ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಅವರು ಮುಖ್ಯಮಂತ್ರಿಗಳ ನಿವಾಸದಲ್ಲಿ ಅವರನ್ನು ಏಕಾಂಗಿಯಾಗಿ ಭೇಟಿಯಾಗಲು ಹೋದಾಗ ಅವರ ಮೇಲೆ ನಡೆದ ಹಲ್ಲೆಯ ವಿಷಯದ ಕುರಿತು ಕಳೆದ ಕೆಲವು ದಿನಗಳಿಂದ ಮಾಧ್ಯಮಗಳ ನಿರೂಪಣೆಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ನಿನ್ನೆ, ಆಕೆ ಭಾರೀ ದುಃಖದಿಂದಲೇ ನನಗೆ ಕರೆ ಮಾಡಿದ್ದರು ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ.

ಸ್ವಾತಿ ಮಲಿವಾಲ್ ದುಃಖದಿಂದಲೇ ನನಗೆ ಕರೆ ಮಾಡಿದ್ದರು: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ
ವಿಕೆ ಸಕ್ಸೇನಾ
Follow us
ರಶ್ಮಿ ಕಲ್ಲಕಟ್ಟ
|

Updated on: May 21, 2024 | 5:11 PM

ದೆಹಲಿ ಮೇ 21: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮನೆಯಲ್ಲಿ ಎಎಪಿ ಸಂಸದೆ ಸ್ವಾತಿ ಮಲಿವಾಲ್ (Swati Maliwal) ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ (VK Saxena) ಹೇಳಿಕೆಯೊಂದು ನೀಡಿದ್ದಾರೆ. ಈ ವಿಷಯದ ಕುರಿತು ಮಾಧ್ಯಮ ನಿರೂಪಣೆಯಿಂದ ತನಗೆ ತುಂಬಾ ನೋವಾಗಿದೆ ಎಂದು ಎಲ್ ಜಿ ಹೇಳಿದ್ದಾರೆ. ದೆಹಲಿಯ ರಾಜ್ ನಿವಾಸ್ ನಲ್ಲಿ ಹೇಳಿಕೆ ನೀಡಿರುವ ಸಕ್ಸೇನಾ, ಮಲಿವಾಲ್ ನನಗೆ ಕರೆ ಮಾಡಿ ಭಾರೀ ದುಃಖದಿಂದ ತನಗಾದ ಆಘಾತಕಾರಿ ಅನುಭವವನ್ನು ಸುದೀರ್ಘವಾಗಿ ವಿವರಿಸಿದ್ದಾರೆ ಎಂದು ಹೇಳಿದ್ದಾರೆ.

ಸ್ವಾತಿ ಮಲಿವಾಲ್ ನನಗೆ ಕರೆ ಮಾಡಿ ತನ್ನ ಸ್ವಂತ ಸಹೋದ್ಯೋಗಿಗಳಿಂದ ತನಗೆ ಬೆದರಿಕೆ ಮತ್ತು ಅವಮಾನವಾಗಿರುವ ಬಗ್ಗೆ ವಿವರಿಸಿದ್ದಾರೆ ಎಂದು ಸಕ್ಸೇನಾ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಅವರು ಮುಖ್ಯಮಂತ್ರಿಗಳ ನಿವಾಸದಲ್ಲಿ ಅವರನ್ನು ಏಕಾಂಗಿಯಾಗಿ ಭೇಟಿಯಾಗಲು ಹೋದಾಗ ಅವರ ಮೇಲೆ ನಡೆದ ಹಲ್ಲೆಯ ವಿಷಯದ ಕುರಿತು ಕಳೆದ ಕೆಲವು ದಿನಗಳಿಂದ ಮಾಧ್ಯಮಗಳ ನಿರೂಪಣೆಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ನಿನ್ನೆ, ಆಕೆ ಭಾರೀ ದುಃಖದಿಂದಲೇ ನನಗೆ ಕರೆ ಮಾಡಿದ್ದರು. ಅಲ್ಲಿ ಆಕೆಗಾದ ಆಘಾತಕಾರಿ ಅನುಭವವನ್ನು ಮತ್ತು ನಂತರದ ಬೆದರಿಕೆ ಮತ್ತು ಅವಮಾನದ ಬಗ್ಗೆ ಆಕೆ ವಿವರಿಸಿದ್ದಾರೆ. ಆಕೆಯ ವಿರುದ್ಧ ಸಾಕ್ಷ್ಯಾಧಾರಗಳನ್ನು ತಿದ್ದುವಿಕೆ ಮತ್ತು ಬಲವಂತದ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಸಕ್ಸೇನಾ ಹೇಳಿಕೆ ನೀಡಿದ್ದಾರೆ.

ಮೇ 8 ರಂದು ದೆಹಲಿಯ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಡ್ರಾಯಿಂಗ್ ರೂಮಿನಲ್ಲಿ ಬಿಭವ್ ಕುಮಾರ್ ಪದೇ ಪದೇ ಕಪಾಳಮೋಕ್ಷ ಮಾಡಿ ನನಗೆ ಒದೆದಿದ್ದಾರೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ. ಆಪಾದಿತ ಹಲ್ಲೆ ನಡೆದಾಗ ಕೇಜ್ರಿವಾಲ್ ತನ್ನ ಮನೆಯೊಳಗೆ ಇದ್ದರು ಎಂದಿದ್ದರು ಮಲಿವಾಲ್.

ಏತನ್ಮಧ್ಯೆ, ಆಮ್ ಆದ್ಮಿ ಪಕ್ಷವು ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿಯನ್ನು ಬೆಂಬಲಿಸಿದ್ದು, ಸ್ವಾತಿ ಮಲಿವಾಲ್ ಅವರು ಪೂರ್ವಭಾವಿ ಅಪಾಯಿಂಟ್ಮೆಂಟ್ ಇಲ್ಲದೆ ಮುಖ್ಯಮಂತ್ರಿ ಮನೆಗೆ ನುಗ್ಗಿದ್ದಾರೆ ಎಂದು ಆರೋಪಿಸಿದ್ದಾರೆ. ಆಕೆ ಬಿಜೆಪಿ ಇಚ್ಛೆಯ ಮೇರೆಗೆ ಕೇಜ್ರಿವಾಲ್‌ಗೆ ಹಾನಿ ಮಾಡಲು ಅವಳು ಬಯಸಿದ್ದಳು ಎಂದು ಪಕ್ಷವು ಹೇಳಿಕೊಂಡಿದೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಬಿಜೆಪಿ ಅಭ್ಯರ್ಥಿಗೆ ನಿಷೇಧ ಹೇರಿದ ಚುನಾವಣಾ ಆಯೋಗ

ಹಳೆಯ ಎಸಿಬಿ ಪ್ರಕರಣವನ್ನು ಬಲವಾಗಿ ಬಳಸಿಕೊಂಡು ಮಲಿವಾಲ್ ಬಿಭವ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬಿಜೆಪಿ ಮಾಡಿದೆ ಎಂದು ಅತಿಶಿ ಸೋಮವಾರ ಹೇಳಿದ್ದಾರೆ. ಆಪಾದಿತ ಘಟನೆಯ ಸಮಯದಲ್ಲಿ ಕೇಜ್ರಿವಾಲ್ ಅವರ ನಿವಾಸದ ಹಲವಾರು ಸಿಸಿಟಿವಿ ಕ್ಲಿಪ್‌ಗಳನ್ನು ಎಎಪಿ ಬಿಡುಗಡೆ ಮಾಡಿದೆ, ಆಪಾದಿತ ಹಲ್ಲೆಯ ನಂತರ ಸ್ವಾತಿ ಮಲಿವಾಲ್ ಸಾಮಾನ್ಯವಾಗಿ ನಡೆದುಕೊಳ್ಳುತ್ತಿರುವುದನ್ನು ವಿಡಿಯೊಗಳು ತೋರಿಸುತ್ತವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್