ಭಾರತದ ಮೂರು ರಾಜ್ಯಗಳಲ್ಲಿ ಕೊರೋನಾವೈರಸ್​ನ ಡೆಲ್ಟಾ ಪ್ಲಸ್ ರೂಪಾಂತರಿ ಪತ್ತೆಯಾಗಿದೆ; ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಪ್ರಕರಣಗಳು

ನೀತಿ ಆಯೋಗದ ಸದಸ್ಯರೊಬ್ಬರು, ಡೆಲ್ಟಾ ಪ್ಲಸ್ ರೂಪಾಂತರಿ ಇದುವರೆಗೆ ಕಳವಳ ಹುಟ್ಟಿಸುವ ರೂಪಾಂತರಿಯಾಗಿ ವರ್ಗೀಕೃತಗೊಂಡಿಲ್ಲ ಎಂದು ಹೇಳಿದ್ದಾರೆ. ಈ ರೂಪಾಂತರಿಯು ಮೊಟ್ಟ ಮೊದಲ ಬಾರಿಗೆ ಮಾರ್ಚ್​ನಲ್ಲಿ ಯುರೋಪ್​ನಲ್ಲಿ ಪತ್ತೆಯಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

ಭಾರತದ ಮೂರು ರಾಜ್ಯಗಳಲ್ಲಿ ಕೊರೋನಾವೈರಸ್​ನ ಡೆಲ್ಟಾ ಪ್ಲಸ್ ರೂಪಾಂತರಿ ಪತ್ತೆಯಾಗಿದೆ; ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಪ್ರಕರಣಗಳು
ಡೆಲ್ಟಾ ಪ್ಲಸ್ ರೂಪಾಂತರಿ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Jun 22, 2021 | 4:12 PM

ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾವೈರಸ್ ರೂಪಾಂತರಿ ಡೆಲ್ಟಾ ಪ್ಲಸ್ ಅಥವಾ ಎವೈ.1 ಮೊದಲ ಬಾರಿಗೆ ಭಾರತದಲ್ಲೇ ಕಾಣಿಸಿಕೊಂಡಿರೋದು ಅಂತ ಹೇಳುತ್ತಿರುವ ಬೆನ್ನಲ್ಲೇ ಅದರ ಪ್ರಕರಣಗಳು ಭಾರತದ ಮೂರು ರಾಜ್ಯಗಳಲ್ಲಿ ಕಾಣಿಸಿಕೊಂಡಿವೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಕೇರಳ ರಾಜ್ಯಗಳಲ್ಲಿ ಕಂಡುಬಂದಿವೆ. ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು ಜೂನ್​ 21 ರಂದು ನೀಡಿರುವ ಹೇಳಿಕೆಯೊಂದರಲ್ಲಿ ಡೆಲ್ಟ್ ಪ್ಲಸ್ ರೂಪಾಂತರಿ ವೈರಸ್​ ನಿಂದ ಸೃಷ್ಟಿಯಾಗಿರುವ 21 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ. ಎಲ್ಲಕ್ಕಿಂತ ಹೆಚ್ಚು ಅಂದರೆ 9 ಪ್ರಕರಣಗಳು ರತ್ನಾಗಿರಿ ಜಿಲ್ಲೆಯಲ್ಲಿ ವರದಿಯಾಗಿದ್ದರೆ, ಜಲಗಾಂವ್​ನಲ್ಲಿ 7, ಮುಂಬೈನಲ್ಲಿ 2 ಮತ್ತು ಪಲ್ಘಾರ್. ಠಾಣೆ ಮತ್ತು ಸಿಂಧುದುರ್ಗ್ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣಗಳು ವರದಿಯಾಗಿವೆ ಎಂದು ಟೋಪೆ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಮಧ್ಯಪ್ರದೇಶದ ಐವರು ಕೋವಿಡ್​ ಸೋಂಕಿತರಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಕಂಡುಬಂದಿದೆ ಎಂದು ಈ ರಾಜ್ಯದ ಆರೋಗ್ಯ ಸಚಿವ ಪ್ರಭುರಾಮ್ ಚೌಧರಿ ಹೇಳಿದ್ದಾರೆ.

‘ಮಧ್ಯಪ್ರದೇಶದಲ್ಲಿ ಇದುವರಗೆ ಡೆಲ್ಟಾ ಪ್ಲಸ್ ರೂಪಾಂತರಿ 5 ಪ್ರಕರಣಗಳು ಪತ್ತೆಯಾಗಿವೆ. ಲಸಿಕೆ ಪಡೆದ ಐವರಲ್ಲಿ ನಾಲ್ವರು ಅರೋಗ್ಯವಂತರಾಗಿದ್ದರೆ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ,’ ಎಂದು ಚೌಧರಿ ಎ ಎನ್ ಐ ಸುದ್ದಿಸಂಸ್ಥೆ ಜೊತೆ ಮಾತಾಡುವಾಗ ಹೇಳಿದ್ದಾರೆ.

ಕೇರಳದ ಅಧಿಕಾರಿಗಳು ಪಿ ಟಿ ಐಗೆ ನೀಡಿರುವ ಮಾಹಿತಿ ಪ್ರಕಾರ, ರಾಜ್ಯದ ಎರಡು ಜಿಲ್ಲೆಗಳು-ಪಲಕ್ಕಾಡ್ ಮತ್ತು ಪಥನಂತಿಟ್ಟಗಳಲ್ಲಿ ಕೋವಿಡ್​-19 ಸೋಂಕಿತರಿಂದ ಸಂಗ್ರಹಿಸಿದ ಸ್ಯಾಂಪಲ್​ಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಕಂಡುಬಂದಿದೆ.

ಪಥನಂತಿಟ್ಟ ಜಿಲ್ಲಾ ಕಲೆಕ್ಟರ್ ನರಸಿಂಭುಗಾರಿ ಟಿಎಲ್ ರೆಡ್ಡಿ ಅವರು ಜಿಲ್ಲೆಯ ಕಡಪರ ಪಂಚಾಯತ್​ನಲ್ಲಿ ಒಬ್ಬ ನಾಲ್ಕು ವರ್ಷದ ಬಾಲಕ ಡೆಲ್ಟಾ ಪ್ಲಸ್ ರೂಪಾಂತರಿಯಿಂದ ಸೋಂಕಿತನಾಗಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.

ನೀತಿ ಆಯೋಗದ ಸದಸ್ಯರೊಬ್ಬರು, ಡೆಲ್ಟಾ ಪ್ಲಸ್ ರೂಪಾಂತರಿ ಇದುವರೆಗೆ ಕಳವಳ ಹುಟ್ಟಿಸುವ ರೂಪಾಂತರಿಯಾಗಿ ವರ್ಗೀಕೃತಗೊಂಡಿಲ್ಲ ಎಂದು ಹೇಳಿದ್ದಾರೆ. ಈ ರೂಪಾಂತರಿಯು ಮೊಟ್ಟ ಮೊದಲ ಬಾರಿಗೆ ಮಾರ್ಚ್​ನಲ್ಲಿ ಯುರೋಪ್​ನಲ್ಲಿ ಪತ್ತೆಯಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

‘ಪ್ರಸಕ್ತ ವಿದ್ಯಮಾನಗಳ ಬಗ್ಗೆ ಹೇಳಬೇಕಾದರೆ, ಹೌದು ಕೊರೋನಾವೈರಸ್​ನ ಒಂದು ಹೊಸ ರೂಪಾಂತರಿಯನ್ನು ಪತ್ತೆ ಮಾಡಲಾಗಿದೆ. ಈವರೆಗೆ ಇದು ವೇರಿಯಂಟ್​ ಆಫ್ ಇಂಟ್ರಸ್ಟ್ (ವಿಒಐ) ಎಂದು ವರ್ಗೀಕರಿಸಲಾಗಿದೆಯೇ ಹೊರತು ವೇರಿಯಂಟ್ ಆಫ್ ಕನ್ಸರ್ನ್ (ವಿಒಸಿ) ಆಗಿ ಅಲ್ಲ. ನಮಗೆ ಮಾಹಿತಿಯಿರುವ ಹಾಗೆ ತೀವ್ರವಾಗಿ ಹರಡುವ ಸಾಮರ್ಥ್ಯ ಹೊಂದಿರುವ ಅಥವಾ ಹೆಚ್ಚು ಅಪಾಯಕಾರಿಯಾಗಿರುವ ಕಾರಣ ವಿಒಸಿ ಮಾನವಕುಲದ ಮೇಲೆ ಹೆಚ್ಚಿನ ದುಷ್ಪರಿಣಾಮಗಳನ್ನು ಉಂಟು ಮಾಡುತ್ತದೆ. ಡೆಲ್ಟಾ ಪ್ಲಸ್ ರೂಪಾಂತರಿಯು ಇದೇ ಪ್ರಕಾರದ್ದೇ ಎನ್ನುವ ಕುರಿತು  ಮಾಹಿತಿ ನಮ್ಮಲ್ಲಿ ಇಲ್ಲ,’ ಎಂದು ಅವರು ಹೇಳಿದ್ದಾರೆ.

ಡೆಲ್ಟಾ ಪ್ಲಸ್ ರೂಪಾಂತರಿಯು B.1.617 ಪ್ರಬೇಧಕ್ಕೆ ಸೇರಿದ್ದಾಗಿದೆ. ಈ ವರ್ಷದ ಆರಂಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು B.1.617 (ಡೆಲ್ಟ್) ರೂಪಾಂತರಿಯನ್ನು ವೇರಿಯಂಟ್ ಆಫ್ ಕನ್ಸರ್ನ್ ಅಂತ ವರ್ಗೀಕರಿಸಿದೆ.

ಇದನ್ನೂ ಓದಿ: Delta Plus Variant: ಡೆಲ್ಟಾ ಪ್ಲಸ್ ಕೊರೊನಾ ವೈರಸ್ ಎಂದರೇನು? ರೂಪಾಂತರಿ ವೈರಾಣು ಎಷ್ಟು ಅಪಾಯಕಾರಿ, ಇದರಿಂದ ರಕ್ಷಣೆ ಹೇಗೆ?

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್