AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಭೇಟಿ ಯಶಸ್ವಿ, ಎರಡು ತಿಂಗಳಿಗೊಮ್ಮೆ ರಾಷ್ಟ್ರ ರಾಜಧಾನಿಗೆ ಬರುವೆ: ಮಮತಾ ಬ್ಯಾನರ್ಜಿ

Mamata Banerjee: ಭೇಟಿ ಯಶಸ್ವಿಯಾಗಿದೆ. ರಾಜಕೀಯ ಕಾರಣಗಳಿಗಾಗಿ ನನ್ನ ಸಹೋದ್ಯೋಗಿಗಳನ್ನು ಭೇಟಿ ಮಾಡಿದ್ದೇವೆ. ರಾಜಕೀಯ ಉದ್ದೇಶಕ್ಕಾಗಿ ನಾವು ಭೇಟಿಯಾದೆವು. ಪ್ರಜಾಪ್ರಭುತ್ವ ಮುಂದುವರಿಯಬೇಕು. ನಮ್ಮ ಘೋಷಣೆ 'ಪ್ರಜಾಪ್ರಭುತ್ವವನ್ನು ಉಳಿಸಿ, ದೇಶವನ್ನು ಉಳಿಸಿ'

ದೆಹಲಿ ಭೇಟಿ ಯಶಸ್ವಿ, ಎರಡು ತಿಂಗಳಿಗೊಮ್ಮೆ ರಾಷ್ಟ್ರ ರಾಜಧಾನಿಗೆ ಬರುವೆ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 30, 2021 | 11:23 PM

Share

ದೆಹಲಿ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರೊಂದಿಗೆ ಐದು ದಿನಗಳ ಭೇಟಿಯ ನಂತರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ದೆಹಲಿಯಿಂದ ಹೊರಟರು.ದೆಹಲಿಯಿಂದ ಹೊರಹೋಗುವಾಗ ಅವರು “ನಾನು ಎರಡು ತಿಂಗಳಿಗೊಮ್ಮೆ ರಾಷ್ಟ್ರ ರಾಜಧಾನಿಗೆ ಮರಳುತ್ತೇನೆ” ಎಂದು ಹೇಳಿದ್ದಾರೆ. ಅವರು ತಮ್ಮ ದೆಹಲಿ ಭೇಟಿಯನ್ನು “ಯಶಸ್ವಿ” ಎಂದು ಕರೆದಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಎರಡನೇ ಬಾರಿ ಅಧಿಕಾರಕ್ಕೇರಿದ ನಂತರ ಅವರು ದೆಹಲಿಗೆ ಭೇಟಿ ನೀಡಿದ್ದಾರೆ. ಅಂದಹಾಗೆಮಮತಾ ಬ್ಯಾನರ್ಜಿಯವರು ರಾಷ್ಟ್ರ ರಾಜಕಾರಣಕ್ಕಿಳಿಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

“ಪ್ರಜಾಪ್ರಭುತ್ವ ಮುಂದುವರಿಯಬೇಕು” ಎಂದು ಮಮತಾ ಬ್ಯಾನರ್ಜಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. “ಭೇಟಿ ಯಶಸ್ವಿಯಾಗಿದೆ. ರಾಜಕೀಯ ಕಾರಣಗಳಿಗಾಗಿ ನನ್ನ ಸಹೋದ್ಯೋಗಿಗಳನ್ನು ಭೇಟಿ ಮಾಡಿದ್ದೇವೆ. ರಾಜಕೀಯ ಉದ್ದೇಶಕ್ಕಾಗಿ ನಾವು ಭೇಟಿಯಾದೆವು. ಪ್ರಜಾಪ್ರಭುತ್ವ ಮುಂದುವರಿಯಬೇಕು. ನಮ್ಮ ಘೋಷಣೆ ‘ಪ್ರಜಾಪ್ರಭುತ್ವವನ್ನು ಉಳಿಸಿ, ದೇಶವನ್ನು ಉಳಿಸಿ’. ನಾನು ಪ್ರತಿ ಎರಡು ತಿಂಗಳಿಗೊಮ್ಮೆ ಇಲ್ಲಿಗೆ ಬರುತ್ತೇನೆ” ಎಂದು ಮಮತಾ ಹೇಳಿದ್ದಾರೆ.

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಫೋನಿನಲ್ಲಿ ಮಾತನಾಡಿದ್ದಾರೆ ಎಂದು ಮಮತಾ ಹೇಳಿದ್ದಾರೆ “ಇಂದು ನಾನು ಶರದ್ ಜಿ ಅವರೊಂದಿಗೆ ಮಾತನಾಡಿದ್ದೇನೆ. ಅವರು ಮುಂಬೈಗೆ ಹೋದರು. ಮುಂದಿನ ಬಾರಿ ನಾವು ಕೂಡ ಭೇಟಿಯಾಗುತ್ತೇವೆ” ಎಂದು ಅವರು ಹೇಳಿರುವುದಾಗಿ ಎನ್ ಡಿಟಿವಿ ವರದಿ ಮಾಡಿದೆ.

ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ದೇಶ ಕೆಲಸ ಮಾಡುವುದು ಅತ್ಯಂತ ಮುಖ್ಯವಾದ ವಿಷಯವಾಗಿದೆ. ಪ್ರಜಾಪ್ರಭುತ್ವವು ಅಪಾಯದಲ್ಲಿದ್ದರೆ, ದೇಶವು ಅಪಾಯದಲ್ಲಿದೆ. ಪ್ರಜಾಪ್ರಭುತ್ವವನ್ನು ಉಳಿಸಿ ಮತ್ತು ರಾಷ್ಟ್ರವನ್ನು ಉಳಿಸಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಸೋನಿಯಾ ಗಾಂಧಿ-ಮಮತಾ ಬ್ಯಾನರ್ಜಿ ಭೇಟಿ, 45 ನಿಮಿಷ ಚರ್ಚೆ; 2024ರ ಹೊತ್ತಿಗೆ ಪ್ರಧಾನಿ ಮೋದಿ V/S ದೇಶ ಎಂದಾಗುತ್ತದೆ ಎಂದ ದೀದಿ

(Democracy must go on Delhi visit was successful says West Bengal Chief Minister Mamata Banerjee)

ಇದನ್ನೂ ಓದಿ: ಶೌಚ ಗುಂಡಿಗಳನ್ನು ಸ್ವಚ್ಛಗೊಳಿಸುವಾಗ ಯಾವುದೇ ಸಾವು ಸಂಭವಿಸಿಲ್ಲ: ಕೇಂದ್ರ ಸರ್ಕಾರ