‘ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ’; ವಿದೇಶಿ ನೆಲದಲ್ಲಿ ಮತ್ತೆ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಕೊಲಂಬಿಯಾದ ಇಐಎ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತ ಎದುರಿಸುತ್ತಿರುವ ಅತಿದೊಡ್ಡ ಸವಾಲು ಅದರ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ದಾಳಿಯಾಗಿದೆ ಎನ್ನುವ ಮೂಲಕ ಕೇಂದ್ರದಲ್ಲಿರುವ ಎನ್‌ಡಿಎ ಸರ್ಕಾರದ ಮೇಲೆ ರಾಹುಲ್ ಗಾಂಧಿ ನೇರ ವಾಗ್ದಾಳಿ ನಡೆಸಿದ್ದಾರೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ.

ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ; ವಿದೇಶಿ ನೆಲದಲ್ಲಿ ಮತ್ತೆ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
Rahul Gandhi

Updated on: Oct 02, 2025 | 7:24 PM

ಬೊಗೋಟಾ, ಅಕ್ಟೋಬರ್ 2: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತೊಮ್ಮೆ ಕೊಲಂಬಿಯಾದ ಇಐಎ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಆಡಳಿತಾರೂಢ ಬಿಜೆಪಿ ಭಾರತದ ಪ್ರಜಾಪ್ರಭುತ್ವದ ರಚನೆಯನ್ನು ನಾಶಪಡಿಸುತ್ತಿದೆ ಎಂದು ಆರೋಪಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ವಿದೇಶಿ ನೆಲದಲ್ಲಿ ರಾಹುಲ್ ಗಾಂಧಿ ಮತ್ತೊಮ್ಮೆ ಭಾರತ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ವಿವಾದಕ್ಕೀಡಾಗಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರವನ್ನು ಟೀಕಿಸಿದ್ದಾರೆ. ಇಂದು ಭಾರತ ಎದುರಿಸುತ್ತಿರುವ ದೊಡ್ಡ ಸವಾಲೆಂದರೆ ಭಾರತದ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ ಎಂದು ಹೇಳಿದ್ದಾರೆ. ಕೊಲಂಬಿಯಾದ ಇಐಎ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಭಾರತವು ಎಂಜಿನಿಯರಿಂಗ್ ಮತ್ತು ಆರೋಗ್ಯ ರಕ್ಷಣೆಯಂತಹ ಕ್ಷೇತ್ರಗಳಲ್ಲಿ ಬಲವಾದ ಸಾಮರ್ಥ್ಯಗಳನ್ನು ಹೊಂದಿದೆ. ಇದು ಭವಿಷ್ಯದ ಬಗ್ಗೆ ನನಗೆ ತುಂಬಾ ಆಶಾವಾದ ತುಂಬುತ್ತಿದೆ. ಆದರೆ, ತಿದ್ದುಪಡಿ ಅಗತ್ಯವಿರುವ ರಚನೆಯಲ್ಲಿ ನ್ಯೂನತೆಗಳಿವೆ. ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ದಾಳಿಯೇ ದೊಡ್ಡ ಸವಾಲು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್‌ಗೆ ಕೂಡಲೆ ಸಮಗ್ರ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ; ಮೋದಿಗೆ ರಾಹುಲ್ ಗಾಂಧಿ ಒತ್ತಾಯ

“ಭಾರತದಲ್ಲಿ ನಡೆಯುತ್ತಿರುವ ದೊಡ್ಡ ಅಪಾಯವೆಂದರೆ ಪ್ರಜಾಪ್ರಭುತ್ವದ ಮೇಲಿನ ದಾಳಿ” ಎಂದು ಅವರು ಹೇಳಿದ್ದಾರೆ. ವಾಸ್ತವವಾಗಿ ವಿಭಿನ್ನ ಸಂಪ್ರದಾಯಗಳು, ಧರ್ಮಗಳು, ವಿಚಾರಗಳಿಗೆ ಸ್ಥಳಾವಕಾಶ ಬೇಕಾಗುತ್ತದೆ. ಆ ಜಾಗವನ್ನು ಸೃಷ್ಟಿಸಲು ಉತ್ತಮ ಮಾರ್ಗವೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆ. ಪ್ರಸ್ತುತ, ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಸಂಪೂರ್ಣ ದಾಳಿ ನಡೆಯುತ್ತಿದೆ. ಆದ್ದರಿಂದ ಅದು ಅಪಾಯಕರವಾಗಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.


ಇದನ್ನೂ ಓದಿ: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಅಂಕಿಅಂಶ ಸಮೇತ ರಾಹುಲ್ ಗಾಂಧಿ ಆರೋಪಕ್ಕೆ ಚುನಾವಣಾ ಆಯೋಗ ತೀರುಗೇಟು

2016ರಲ್ಲಿ ಬಿಜೆಪಿ ಸರ್ಕಾರದ ನೋಟು ರದ್ದತಿ ನೀತಿಯನ್ನು ಕೂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಅದನ್ನು “ವೈಫಲ್ಯ” ಎಂದು ಕರೆದಿದ್ದಾರೆ. “ನೋಟು ರದ್ದತಿ ಒಂದು ನೀತಿಯಾಗಿ ವಿಫಲವಾಗಿದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ