Sydney Dialogue: ಕ್ರಿಪ್ಟೋಕರೆನ್ಸಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಧಾನಿ ಮೋದಿ; ದುರ್ಬಳಕೆ ತಡೆಯಲು ಒಗ್ಗಟ್ಟಾಗುವಂತೆ ಪ್ರಜಾಪ್ರಭುತ್ವ ರಾಷ್ಟ್ರಗಳಿಗೆ ಕರೆ

Cryptocurrency: ಸದ್ಯಕ್ಕಂತೂ ದೇಶದಲ್ಲಿ ಕ್ರಿಪ್ಟೋಕರೆನ್ಸಿ ವ್ಯಾಪಕವಾಗಿ ಸುದ್ದಿಯಲ್ಲಿದೆ. ಡಿಜಿಟಲ್​ ಕರೆನ್ಸಿ ಬೆಳವಣಿಗೆಯೆಂಬುದು ದೇಶದ ಭದ್ರತೆಗೆ ಆತಂಕವೊಡ್ಡುವ ಸಾಧ್ಯತೆಯಿದೆ ಎಂಬ ಕಳವಳವೂ ಹೆಚ್ಚುತ್ತಿದೆ.

Sydney Dialogue: ಕ್ರಿಪ್ಟೋಕರೆನ್ಸಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಧಾನಿ ಮೋದಿ; ದುರ್ಬಳಕೆ ತಡೆಯಲು ಒಗ್ಗಟ್ಟಾಗುವಂತೆ ಪ್ರಜಾಪ್ರಭುತ್ವ ರಾಷ್ಟ್ರಗಳಿಗೆ ಕರೆ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Lakshmi Hegde

Updated on: Nov 18, 2021 | 1:15 PM

ಕ್ರಿಪ್ಟೋಕರೆನ್ಸಿ ವಿಚಾರದಲ್ಲಿ ಕೆಲವು ಸುದ್ದಿಗಳು ಓಡಾಡುತ್ತಿವೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಕೂಡ ನಡೆದಿದೆ. ಹಾಗೇ, ಖಾಸಗಿ ಕ್ರಿಪ್ಟೋಕರೆನ್ಸಿ (cryptocurrency) ಗಳನ್ನು ರದ್ದುಗೊಳಿಸಿ, ಸರ್ಕಾರದ ಕ್ರಿಪ್ಟೋಕರೆನ್ಸಿಗಳೇ ಚಾಲನೆಗೆ ಬರಲಿವೆ ಎಂಬ ವಿಚಾರ ಬಲ್ಲಮೂಲಗಳಿಂದ ತಿಳಿದುಬಂದಿದೆ. ಆದರೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಹೀಗಿರುವಾಗ ಇಂದು ಸಿಡ್ನಿ ಡೈಲಾಗ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಇದೇ ಮೊದಲ ಬಾರಿಗೆ ಕ್ರಿಪ್ಟೋಕರೆನ್ಸಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ‘ಆಧುನಿಕ ತಂತ್ರಜ್ಞಾನಗಳು ಸಂಘರ್ಷ ಮತ್ತು ವಿನಾಶವನ್ನುಂಟು ಮಾಡುವಷ್ಟು ಶಕ್ತಿಶಾಲಿಗಳು ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೆ ಅದಾಗಲು ಬಿಡಬಾರದು. ಇನ್ನು ಕ್ರಿಪ್ಟೋಕರೆನ್ಸಿ ತಪ್ಪಾದ ಜನರ ಕೈಗೆ ಸೇರದಂತೆ ತಡೆಯುವ ಜವಾಬ್ದಾರಿಯನ್ನು ಎಲ್ಲ ಪ್ರಜಾಪ್ರಭುತ್ವ ರಾಷ್ಟ್ರಗಳೂ ಹೊರಬೇಕು ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಈ ಕ್ರಿಪ್ಟೋಕರೆನ್ಸಿ  ನಮ್ಮ ಯುವಜನರ ಭವಿಷ್ಯವನ್ನೇ ಹಾಳುಮಾಡುವಷ್ಟು ಸಾಮರ್ಥ್ಯ ಹೊಂದಿದೆ ಎಂದು ಈ ಡಿಜಿಟಲ್​ ಕರೆನ್ಸಿ ಬಗ್ಗೆ ಆತಂಕ ವ್ಯಕ್ತಪಡಿಸಿದರು.  

ಇಂದು ಸಿಡ್ನಿ ಡೈಲಾಗ್​​​ ಉದ್ದೇಶಿಸಿ, ಭಾರತದಲ್ಲಿ ತಂತ್ರಜ್ಞಾನ ಅಭಿವೃದ್ಧಿ ಮತ್ತು ಕ್ರಾಂತಿ ಎಂಬ ವಿಚಾರವಾಗಿ ಮಾತನಾಡಿದ ಅವರು, ಭಾರತದಲ್ಲ ದತ್ತಾಂಶ ರಕ್ಷಣೆ, ಖಾಸಗಿತನ ಮತ್ತು ಭದ್ರತೆಗಾಗಿ ದೃಢವಾದ ಚೌಕಟ್ಟು ರೂಪಿಸಲಾಗಿದೆ. ಪ್ರತಿಯೊಬ್ಬ ವ್ಯಕ್ತಿಯ ವೈಯಕ್ತಿಕ ಹಕ್ಕಿಗೆ ತೊಡಕಾಗದಂತೆ, ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ಡಾಟಾ ಬಳಕೆ ಮಾಡುತ್ತ ಜನರ ಸಬಲೀಕರಣಗೊಳಿಸಲಾಗುತ್ತಿದೆ ಎಂದು ಇಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಅಂದಹಾಗೆ ಈ ಸಿಡ್ನಿ ಡೈಲಾಗ್​ನ್ನು ಆಸ್ಟ್ರೇಲಿಯನ್ ಸ್ಟ್ರಾಟೆಜಿಕ್ ಪಾಲಿಸಿ ಇನ್ಸ್ಟಿಟ್ಯೂಟ್ ಆಯೋಜಿಸಿತ್ತು. ಅದರಲ್ಲಿ ಮೋದಿಯವರು ವರ್ಚ್ಯುವಲ್​ ಆಗಿ ಭಾಷಣ ಮಾಡಿದ್ದಾರೆ.

ಸದ್ಯಕ್ಕಂತೂ ದೇಶದಲ್ಲಿ ಕ್ರಿಪ್ಟೋಕರೆನ್ಸಿ ವ್ಯಾಪಕವಾಗಿ ಸುದ್ದಿಯಲ್ಲಿದೆ. ಡಿಜಿಟಲ್​ ಕರೆನ್ಸಿ ಬೆಳವಣಿಗೆಯೆಂಬುದು ದೇಶದ ಭದ್ರತೆಗೆ ಆತಂಕವೊಡ್ಡುವ ಸಾಧ್ಯತೆಯಿದೆ ಎಂಬ ಕಳವಳವೂ ಹೆಚ್ಚುತ್ತಿದೆ. ಅದರಲ್ಲೂ ಈ ಕ್ರಿಪ್ಟೋಕರೆನ್ಸಿಗಳು ಉಗ್ರರಿಗೆ, ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡುವ ಪ್ರಮುಖ ಮಾರ್ಗವಾಗಬಹುದು ಎಂದೇ ವಿಶ್ಲೇಷಿಸಲಾಗುತ್ತಿದೆ. ಇನ್ನು ಈ ಬಗ್ಗೆ ಪಾರ್ಲಿಮೆಂಟ್​​ನ ಚಳಿಗಾಲದ ಅಧಿವೇಶನದಲ್ಲಿ ವ್ಯಾಪಕ ಚರ್ಚೆಯಾಗಲಿದ್ದು, ನಿಯಂತ್ರಣ ಸಂಬಂಧ ಮಸೂದೆ ಮಂಡನೆಯಾಗಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಸ್ಪರ್ಧಾತ್ಮಕ ಜಗತ್ತಿನಲ್ಲೀಗ ತಂತ್ರಜ್ಞಾನವೇ ಪ್ರಮುಖ ಅಸ್ತ್ರ: ಸಿಡ್ನಿ ಡೈಲಾಗ್​ ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್