ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಜನಸಂಖ್ಯಾ ಬದಲಾವಣೆಗಳ ಉನ್ನತ ಮಟ್ಟದ ಸಮಿತಿ ಸದಸ್ಯರು

ಜನಸಂಖ್ಯಾ ಬದಲಾವಣೆಗಳ ಉನ್ನತ ಮಟ್ಟದ ಸಮಿತಿಯು ರೂಪಿಸಿರುವ ಕಾರ್ಯತಂತ್ರವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಿತಿಗೆ ಸಾಧ್ಯವಿರುವ ಎಲ್ಲಾ ನೆರವನ್ನು ನೀಡುವಂತೆ ಗೃಹ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದರು. ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳ ವಾಸ್ತವಿಕ ವಿವರಗಳನ್ನು ನೇರವಾಗಿ ಪಡೆದುಕೊಳ್ಳಲು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡುವ ತನ್ನ ನಿರ್ಧಾರಗಳ ಕುರಿತು ಉನ್ನತ ಮಟ್ಟದ ಸಮಿತಿಯು ಗೃಹ ಸಚಿವರಿಗೆ ಮಾಹಿತಿ ನೀಡಿತು. ಉನ್ನತ ಮಟ್ಟದ ಸಮಿತಿಯು ತನ್ನ ಶಿಫಾರಸುಗಳನ್ನು ಆದಷ್ಟು ಬೇಗ ನೀಡುವಂತೆ ಗೃಹ ಸಚಿವ ಅಮಿತ್ ಶಾ ಸೂಚಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಜನಸಂಖ್ಯಾ ಬದಲಾವಣೆಗಳ ಉನ್ನತ ಮಟ್ಟದ ಸಮಿತಿ ಸದಸ್ಯರು
Amit Shah Meeting

Updated on: Jul 01, 2026 | 7:47 PM

ನವದೆಹಲಿ, ಜುಲೈ 1: ಜನಸಂಖ್ಯಾ ಬದಲಾವಣೆಗಳ ಕುರಿತಾದ ಉನ್ನತ ಮಟ್ಟದ ಸಮಿತಿಯು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿ ಮಾಡಿದೆ. ನಿವೃತ್ತ ನ್ಯಾಯಮೂರ್ತಿ ಪ್ರಕಾಶ್ ಪ್ರಭಾಕರ್ ನಾವ್ಲೇಕರ್ (ನಾವುಲೇಕರ್) ನೇತೃತ್ವದ ಈ ಸಮಿತಿಯು ತಳಮಟ್ಟದ ನಿಖರವಾದ ವಿವರಗಳನ್ನು ನೇರವಾಗಿ ಕಲೆಹಾಕಲು ಶೀಘ್ರದಲ್ಲೇ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡಲು ಪ್ರಾರಂಭಿಸುವುದಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದೆ ಎಂದು ಅಧಿಕೃತ ಪ್ರಕಟಣೆ ಹೇಳಿದೆ.

ಅಕ್ರಮ ವಲಸೆ ಮತ್ತು ಇತರ ಅಸಹಜ ಕಾರಣಗಳಿಂದ ಉಂಟಾಗುವ ಜನಸಂಖ್ಯಾ ಬದಲಾವಣೆಗಳನ್ನು ಅಧ್ಯಯನ ಮಾಡಲು ಮತ್ತು ಈ ಜನಸಂಖ್ಯಾ ಬದಲಾವಣೆಗಳನ್ನು ಎದುರಿಸಲು ಕ್ರಮಗಳನ್ನು ಸೂಚಿಸಲು ಭಾರತ ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಜನಸಂಖ್ಯಾ ಬದಲಾವಣೆಗಳ ಕುರಿತಾದ ಉನ್ನತ ಮಟ್ಟದ ಸಮಿತಿಯು ನವದೆಹಲಿಯಲ್ಲಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ ಸಭೆ ನಡೆಸಿತು.

ಇದನ್ನೂ ಓದಿ: ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಗಿ ಡಿಕೆ ಶಿವಕುಮಾರ್ ಇಟ್ಟ 9 ಬೇಡಿಕೆಗಳು ಹೀಗಿವೆ

ಉನ್ನತ ಮಟ್ಟದ ಸಮಿತಿಯು ರೂಪಿಸಿರುವ ಕಾರ್ಯತಂತ್ರವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಮಿತಿಯ ದೈನಂದಿನ ಕಾರ್ಯಕಲಾಪಗಳಲ್ಲಿ ಮತ್ತು ಅವರ ಭೇಟಿಗಳ ಸಮಯದಲ್ಲಿ ಸಾಧ್ಯವಿರುವ ಎಲ್ಲಾ ನೆರವನ್ನು ಒದಗಿಸುವಂತೆ ಗೃಹ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದರು. ಉನ್ನತ ಮಟ್ಟದ ಸಮಿತಿಯು ತನ್ನ ಶಿಫಾರಸುಗಳನ್ನು ಆದಷ್ಟು ಬೇಗ ನೀಡುವಂತೆ ಕೇಂದ್ರ ಗೃಹ ಸಚಿವರು ಸೂಚಿಸಿದರು.

ಇದನ್ನೂ ಓದಿ: ಡ್ರಗ್ಸ್ ಮುಕ್ತ ಭಾರತಕ್ಕೆ ಮಾಸ್ಟರ್ ಪ್ಲಾನ್; 3 ವರ್ಷದ ‘ವಿಷನ್ ಡಾಕ್ಯುಮೆಂಟ್ ಬಿಡುಗಡೆ ಮಾಡಿದ ಅಮಿತ್ ಶಾ

ಸಮಿತಿಯ ಕಾರ್ಯತಂತ್ರವನ್ನು ಶ್ಲಾಘಿಸಿದ ಅಮಿತ್ ಶಾ ಅವರು ಸಮಿತಿಯ ದೈನಂದಿನ ಕೆಲಸ ಕಾರ್ಯಗಳಿಗೆ ಹಾಗೂ ಅವರು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ಮತ್ತು ಸಹಕಾರವನ್ನು ನೀಡುವಂತೆ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ, ಈ ಉನ್ನತ ಮಟ್ಟದ ಸಮಿತಿಯು ತನ್ನ ಶಿಫಾರಸುಗಳನ್ನು ಆದಷ್ಟು ಬೇಗ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಕೇಂದ್ರ ಗೃಹ ಸಚಿವರು ಸಲಹೆ ನೀಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us