Demonetisation Verdict: ಕೇಂದ್ರದ ನೋಟು ಅಮಾನ್ಯೀಕರಣ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

| Updated By: ಅಕ್ಷಯ್​ ಪಲ್ಲಮಜಲು​​

Updated on: Jan 02, 2023 | 11:53 AM

2016ರಲ್ಲಿ ಕೇಂದ್ರ ಸರ್ಕಾರ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

Demonetisation Verdict: ಕೇಂದ್ರದ ನೋಟು ಅಮಾನ್ಯೀಕರಣ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ
ಸುಪ್ರೀಂ ಕೋರ್ಟ್
Follow us on

ದೆಹಲಿ: 2016ರಲ್ಲಿ ಕೇಂದ್ರ ಸರ್ಕಾರ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ (demonetisation) ನಿರ್ಧಾರವನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದೆ. ಕೇಂದ್ರದ ನೋಟು ಅಮಾನ್ಯೀಕರಣ ನೀತಿಯನ್ನು ದೃಢಪಡಿಸಿದ ಸುಪ್ರೀಂ ಕೋರ್ಟ್ ನಿರ್ಣಯ ಪ್ರಕ್ರಿಯೆಯಲ್ಲಿ ಯಾವುದೇ ದೋಷವಿಲ್ಲ ಎಂದು ಹೇಳಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ 2016 ರ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ ನಿರ್ಧಾರd ಬಗ್ಗೆ ಸುಪ್ರೀಂ ಕೋರ್ಟ್ ಇಂದು ಬಹುಮತದ ತೀರ್ಪುನ್ನು ನೀಡಿದೆ, ಕೇಂದ್ರ ಈ ನಿರ್ಧಾರವನ್ನು ಸುಪ್ರೀಂ ಬೆಂಬಲಿಸಿದೆ ಮತ್ತು ಈ ನಿರ್ಧಾರ ತಪ್ಪು ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದೆ. ಪ್ರಮಾಣಾನುಗುಣವಾದ ಆಧಾರದ ಮೇಲೆ ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎಂದು ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನೊಂದಿಗೆ ಸಮಾಲೋಚಿಸಿದ ನಂತರ ಕೇಂದ್ರವು ಕ್ರಮ ತೆಗೆದುಕೊಳ್ಳಬೇಕಾಗಿದೆ ಮತ್ತು ಆರು ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ಐವರು ಸದಸ್ಯರ ಪೀಠದ ನಾಲ್ವರು ನ್ಯಾಯಾಧೀಶರು ಹೇಳಿದರು. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಭಿನ್ನಾಭಿಪ್ರಾಯದ ತೀರ್ಪು ನೀಡಿ, ನೋಟು ರದ್ದತಿಯನ್ನು ಸಂಸತ್ತಿನ ಕಾಯಿದೆಯ ಮೂಲಕ ಕಾರ್ಯಗತಗೊಳಿಸಬಹುದಿತ್ತು, ಇದು ಸರ್ಕಾರದಿಂದ ಅಲ್ಲ ಎಂದು ಹೇಳಿದರು.

ಇದನ್ನು ಓದಿ: ನೋಟು ನಿಷೇಧದಿಂದ ಈಗಾಗಲೇ ಸಿಕ್ಕ ಮತ್ತು ಇನ್ನೂ ಸಿಗದೇ ಉಳಿದ ಲಾಭಗಳು!

ಸುಮಾರು 58 ಅರ್ಜಿಗಳು 1,000 ಮತ್ತು 500 ರೂ. ನೋಟುಗಳನ್ನು ನಿಷೇಧಿಸುವ ನವೆಂಬರ್ 2016 ರ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿದ್ದವು . ಈ ಕ್ರಮದಿಂದಾಗಿ 10 ಲಕ್ಷ ಕೋಟಿ ರೂ. ರಾತ್ರೋರಾತ್ರಿ ಚಲಾವಣೆಯಿಂದ ನಾಶವಾಯಿತು. ಇದು ಸರ್ಕಾರದ ಪರಿಗಣಿತ ನಿರ್ಧಾರವಲ್ಲ ಮತ್ತು ನ್ಯಾಯಾಲಯದ ಮೂಲಕ ಅದನ್ನು ರದ್ದುಗೊಳಿಸಬೇಕು ಎಂದು ಅರ್ಜಿಗಳು ವಾದಿಸಿದವು.

ಈ ಬಗ್ಗೆ ಸರ್ಕಾರ ಸರಿಯಾದ ವಿಚಾರಣೆ ನಡೆಸದೆ ಯಾವುದೇ ಸ್ಪಷ್ಟವಾದ ಪರಿಹಾರವನ್ನು ನೀಡಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ ಎಂದು ಸರ್ಕಾರ ವಾದಿಸಿತು. ನೋಟು ಅಮಾನ್ಯೀಕರಣವು ಉತ್ತಮವಾಗಿ ಪರಿಗಣಿಸಲ್ಪಟ್ಟ ನಿರ್ಧಾರವಾಗಿದೆ ಮತ್ತು ನಕಲಿ ಹಣ, ಭಯೋತ್ಪಾದಕ ಹಣಕಾಸು, ಕಪ್ಪುಹಣ ಮತ್ತು ತೆರಿಗೆ ವಂಚನೆಯ ಬೆದರಿಕೆಯನ್ನು ಎದುರಿಸಲು ಒಂದು ದೊಡ್ಡ ಕಾರ್ಯತಂತ್ರದ ಭಾಗವಾಗಿದೆ ಎಂದು ಅದು ಹೇಳಿದೆ.

ನ್ಯಾಯಮೂರ್ತಿ ಎಸ್‌ಎ ನಜೀರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಚಳಿಗಾಲದ ವಿರಾಮದ ಮೊದಲು ವಾದವನ್ನು ಆಲಿಸಿತು. ಪೀಠದ ಇತರ ಸದಸ್ಯರು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಎಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಈ ತೀರ್ಪಿಗೆ ಸಾಕ್ಷಿಯಾಗಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:10 am, Mon, 2 January 23