ಪಶ್ಚಿಮ ಬಂಗಾಳದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ; ಬಿರಿಯಾನಿ ಪಾತ್ರೆಗಳೇ ಇದಕ್ಕೆ ಕಾರಣ?

Dengue in West Bengal: ಆರಂಭದಲ್ಲಿ ನಗರ ಪ್ರದೇಶದಲ್ಲಿ ಮಾತ್ರ ಆತಂಕ ಮೂಡಿಸಿದ್ದ ಡೆಂಗ್ಯೂ ಇದೀಗ ಗ್ರಾಮೀಣ ಬಂಗಾಳದಲ್ಲೂ ತಲೆನೋವಾಗಿ ಪರಿಣಮಿಸಿದೆ. ಸೆಪ್ಟಂಬರ್ ಎರಡನೇ ವಾರದಲ್ಲಿಯೂ ಬಂಗಾಳ ಗ್ರಾಮ ಡೆಂಗ್ಯೂ ಜ್ವರದಿಂದ ತತ್ತರಿಸಿದೆ. ಪರಿಸ್ಥಿತಿ ಗಂಭೀರವಾಗಿರುವುದರಿಂದ ಆರೋಗ್ಯ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿ ಭಾನುವಾರದಂದು ಆರೋಗ್ಯ ಇಲಾಖೆ ಹಾಗೂ ಆಡಳಿತಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಪಶ್ಚಿಮ ಬಂಗಾಳದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ; ಬಿರಿಯಾನಿ ಪಾತ್ರೆಗಳೇ ಇದಕ್ಕೆ ಕಾರಣ?
ಡೆಂಗ್ಯೂ ಸೊಳ್ಳೆ
Follow us
ರಶ್ಮಿ ಕಲ್ಲಕಟ್ಟ
|

Updated on: Sep 19, 2023 | 7:27 PM

ಕೋಲ್ಕತ್ತಾ ಸೆಪ್ಟೆಂಬರ್ 19:   ಪಶ್ಚಿಮ ಬಂಗಾಳದಲ್ಲಿ (West Bengal) ಬಂಗಾಳಿಗಳ ಬಿರಿಯಾನಿ (Biriyani) ಪ್ರೀತಿ ಹೊಸದೇನಲ್ಲ. ಅವರ ಈ ಬಿರಿಯಾನಿ ಮೋಹವೇ ಇಂದು ರಾಜ್ಯದಲ್ಲಿ ಡೆಂಗ್ಯೂ ಹರಡಲು ಕಾರಣವಾಗಿದೆ. ಆರೋಗ್ಯ ಭವನದ ಮೂಲಗಳ ಪ್ರಕಾರ, ಡೆಂಗ್ಯೂ (Dengue) ವೈರಸ್ ಹೊತ್ತ ಈಡಿಸ್ ಈಜಿಪ್ಟೈ ಸೊಳ್ಳೆಯ ಹೆಚ್ಚಿನ ಲಾರ್ವಾಗಳು ಈ ವರ್ಷ ಪ್ಲಾಸ್ಟಿಕ್ ಪಾತ್ರೆಗಳಲ್ಲಿ ಕಂಡುಬಂದಿವೆ. ಇವುಗಳಲ್ಲಿ ಹೆಚ್ಚಿನವು ಬಿರಿಯಾನಿ, ಚಿಕನ್ ಚಾಪಾ ಅಥವಾ ಇತರ ಯಾವುದೇ ಆಹಾರವನ್ನು ಮನೆಗೆ ತಲುಪಿಸಲು ಬಳಸುವ ಪಾತ್ರೆಗಳಾಗಿವೆ. ಅನೇಕ ಸಂದರ್ಭಗಳಲ್ಲಿ, ಆ ಪಾತ್ರೆಗಳು ಯಾರ್ಯಾರದೋ ಕೈ ಸೇರಿ, ಆಮೇಲೆ ಕಂಡಕಂಡಲ್ಲಿ ಬಿಸಾಡಿರುತ್ತಾರೆ.ಅಲ್ಲಿ ಈಡಿಸ್ ಸೊಳ್ಳೆ ಹುಟ್ಟಿ ಎಲ್ಲೆಡೆ ಡೆಂಗ್ಯೂ ಹರಡುತ್ತದೆ.

ಆರಂಭದಲ್ಲಿ ನಗರ ಪ್ರದೇಶದಲ್ಲಿ ಮಾತ್ರ ಆತಂಕ ಮೂಡಿಸಿದ್ದ ಡೆಂಗ್ಯೂ ಇದೀಗ ಗ್ರಾಮೀಣ ಬಂಗಾಳದಲ್ಲೂ ತಲೆನೋವಾಗಿ ಪರಿಣಮಿಸಿದೆ. ಸೆಪ್ಟಂಬರ್ ಎರಡನೇ ವಾರದಲ್ಲಿಯೂ ಬಂಗಾಳ ಗ್ರಾಮ ಡೆಂಗ್ಯೂ ಜ್ವರದಿಂದ ತತ್ತರಿಸಿದೆ. ಪರಿಸ್ಥಿತಿ ಗಂಭೀರವಾಗಿರುವುದರಿಂದ ಆರೋಗ್ಯ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿ ಭಾನುವಾರದಂದು ಆರೋಗ್ಯ ಇಲಾಖೆ ಹಾಗೂ ಆಡಳಿತಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ದೃಢೀಕರಿಸದ ಮೂಲಗಳ ಪ್ರಕಾರ, ಈ ಋತುವಿನಲ್ಲಿ ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ 27,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಸರ್ಕಾರಿ ವಲಯದವರ ಸಂಖ್ಯೆ 22 ಸಾವಿರಕ್ಕೂ ಹೆಚ್ಚು. ಅವುಗಳಲ್ಲಿ, ಗ್ರಾಮೀಣ ಪ್ರದೇಶದಲ್ಲಿ ಸುಮಾರು 15 ಸಾವಿರ ಮತ್ತು ನಗರ ಪ್ರದೇಶಗಳಲ್ಲಿ 7 ಸಾವಿರಕ್ಕಿಂತ ಸ್ವಲ್ಪ ಹೆಚ್ಚು ಪ್ರಕರಣ ವರದಿ ಆಗಿದೆ.

ಇದನ್ನೂ ಓದಿ: ಮಕ್ಕಳಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಜ್ವರ; ಪೋಷಕರು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳಿವು

ಐದು ಜಿಲ್ಲೆಗಳು ಹೆಚ್ಚು ಆತಂಕಕ್ಕೊಳಗಾಗಿವೆ. ಉತ್ತರ 24 ಪರಗಣ ಜಿಲ್ಲೆಗಳಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿದೆ.ಇಲ್ಲಿ ಐದು ಸಾವಿರಕ್ಕೂ ಹೆಚ್ಚು ಪ್ರಕರಣ ವರದಿ ಆಗಿದ್ದು ನಾಡಿಯಾ ಮತ್ತು ಮುರ್ಷಿದಾಬಾದ್‌ನಲ್ಲಿ 3000 ಕ್ಕೂ ಹೆಚ್ಚು ಜನರು ಡೆಂಗ್ಯೂಗೆ ಪೀಡಿತರಾಗಿದ್ದಾರೆ. ಹೌರಾ ಮತ್ತು ಹೂಗ್ಲಿ ಜಿಲ್ಲೆಗಳ ಪರಿಸ್ಥಿತಿ ಆರೋಗ್ಯ ಇಲಾಖೆಯನ್ನೂ ಚಿಂತಾಜನಕಗೊಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ