ಹರ್ಯಾಣ: ಯಾರೂ ಸಹಾಯಕ್ಕೆ ಬರಲಿಲ್ಲ, ಆಸ್ಪತ್ರೆ ಎದುರು ತರಕಾರಿ ಗಾಡಿಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಹರ್ಯಾಣದ ಅಂಬಾಲಾದ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಮಹಿಳೆಯೊಬ್ಬರು ತರಕಾರಿ ಗಾಡಿಯಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ. ಹಾಯಕ್ಕಾಗಿ ಪತಿ ಪದೇ ಪದೇ ಮನವಿ ಮಾಡಿದರೂ ಯಾರೂ ಸಹಾಯಕ್ಕೆ ಬರಲಿಲ್ಲ ಎನ್ನುವ ಆರೋಪ ಕೇಳಿಬಂದಿದೆ.
ಹರ್ಯಾಣದ ಅಂಬಾಲಾದ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಮಹಿಳೆಯೊಬ್ಬರು ತರಕಾರಿ ಗಾಡಿಯಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ. ಹಾಯಕ್ಕಾಗಿ ಪತಿ ಪದೇ ಪದೇ ಮನವಿ ಮಾಡಿದರೂ ಯಾರೂ ಸಹಾಯಕ್ಕೆ ಬರಲಿಲ್ಲ ಎನ್ನುವ ಆರೋಪ ಕೇಳಿಬಂದಿದೆ.
ಈ ಚಳಿಗಾಲದಲ್ಲಿ ಬೀದಿಯಲ್ಲಿ ಮಗು ಜನಿಸುವ ಪರಿಸ್ಥಿತಿ ಬಂದಿದ್ದಕ್ಕೆ ದಂಪತಿ ಬೇಸರಗೊಂಡಿದ್ದಾರೆ. ದೇವರೇ ಅವರನ್ನು ರಕ್ಷಿಸಿದ್ದಾನೆ, ನಾನು ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಯನ್ನು ದೇವರೆಂದು ನಂಬಿದ್ದೆ, ಆದರೆ ನಿನ್ನೆ ರಾತ್ರಿ ನಡೆದ ಘಟನೆ ಬಳಿಕ ನಂಬಿಕೆಯನ್ನು ಕಳೆದುಕೊಂಡಿದ್ದೇನೆ ಎಂದು ಮಹಿಳೆಯ ಪತಿ ಹೇಳಿದ್ದಾರೆ.
ಪಂಜಾಬ್‌ನ ಮೊಹಾಲಿ ಜಿಲ್ಲೆಯ ದಪ್ಪರ್‌ನ ನಿವಾಸಿಯಾಗಿರುವ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಯನ್ನು ಹೇಗೋ ಆಸ್ಪತ್ರೆಗೆ ಕರೆತರುವಲ್ಲಿ ಯಶಸ್ವಿಯಾಗಿದ್ದ. ಯಾರೂ ಕೂಡ ಮಹಿಳೆಗಾಗಿ ಸ್ಟ್ರೆಚರ್ ತರಲು ಸಿದ್ಧರಿರಲಿಲ್ಲ. ಮಹಿಳೆ ಅಂತಿಮವಾಗಿ ಆಸ್ಪತ್ರೆಯ ಗೇಟ್ ಬಳಿಯ ಬೀದಿಯಲ್ಲಿ ಜನ್ಮ ನೀಡಿದ್ದಾಳೆ.
ಮತ್ತಷ್ಟು ಓದಿ: ಬಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೂ ವರದಿ ಮಾಡಲಾಗಿದ್ದು, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಸಿಬ್ಬಂದಿ ಭಯಭೀತರಾದರು ತಕ್ಷಣ ಕರೆದುಕೊಂಡು ಹೋಗಿ ವಾರ್ಡ್ಗೆ ದಾಖಲಿಸಿದ್ದಾರೆ.
ಈ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿದ್ದೇವೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಒಂದೆರಡು ದಿನಗಳಲ್ಲಿ ವರದಿ ಲಭ್ಯವಾಗಲಿದೆ ಎಂದು ನಗರದ ಸಿವಿಲ್ ಆಸ್ಪತ್ರೆಯ ಪ್ರಧಾನ ವೈದ್ಯಾಧಿಕಾರಿ ಸಂಗೀತಾ ಸಿಂಗ್ಲಾ ತಿಳಿಸಿದ್ದಾರೆ. ರೋಗಿಯು ಬಂದ ನಂತರ ಹೆರಿಗೆ ಮಾಡುವ ಸ್ಥಿತಿಯಲ್ಲಿದ್ದರೆ, ಕರ್ತವ್ಯದಲ್ಲಿದ್ದ ಸಿಬ್ಬಂದಿ, ವೈದ್ಯರು, ದಾದಿಯರು ಅಲ್ಲೇ ಇರಬೇಕಿತ್ತು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ