Jharkhand HC on Rahul Gandhi: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಲು ಜಾರ್ಖಂಡ್ ಹೈಕೋರ್ಟ್ ನಿರಾಕರಣೆ

|

Updated on: Feb 23, 2024 | 3:49 PM

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿರುವ ವಿಚಾರಣಾ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು  ಜಾರ್ಖಂಡ್ ಹೈಕೋರ್ಟ್  ಶುಕ್ರವಾರ ವಜಾಗೊಳಿಸಿದೆ.

Jharkhand HC on Rahul Gandhi: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಲು ಜಾರ್ಖಂಡ್ ಹೈಕೋರ್ಟ್ ನಿರಾಕರಣೆ
ರಾಹುಲ್ ಗಾಂಧಿ
Follow us on

ರಾಂಚಿ (ಜಾರ್ಖಂಡ್) ಫೆಬ್ರುವರಿ 23: 2018ರಲ್ಲಿ ಬಿಜೆಪಿ ನಾಯಕ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ (criminal defamation suit) ಹೂಡಿರುವ ವಿಚಾರಣಾ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ (Jharkhand High Court) ಶುಕ್ರವಾರ ವಜಾಗೊಳಿಸಿದೆ. ಫೆಬ್ರವರಿ 16 ರಂದು, ಗಾಂಧಿಯವರ ಲಿಖಿತ ಪ್ರತಿಕ್ರಿಯೆಯನ್ನು ನ್ಯಾಯಾಲಯದಲ್ಲಿ ಪ್ರಸ್ತುತಪಡಿಸಲಾಗಿದ್ದು, ನ್ಯಾಯಮೂರ್ತಿ ಅಂಬುಜನಾಥ್ ಅವರ ಪೀಠವು ತೀರ್ಪನ್ನು ಕಾಯ್ದಿರಿಸಿತ್ತು.
ಪ್ರಸ್ತುತ ಪ್ರಕರಣವು 2018 ರ ಚೈಬಾಸಾದಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷರು ಮಾಡಿದ ಚುನಾವಣಾ ಭಾಷಣಕ್ಕೆ ಸಂಬಂಧಿಸಿದೆ.

ಜಾರ್ಖಂಡ್ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿರುವ ಬಿಜೆಪಿ ಮುಖಂಡ ನವೀನ್ ಝಾ, ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಮಾರ್ಚ್ 18, 2018 ರಂದು ನಡೆದ ಎಐಸಿಸಿ ಅಧಿವೇಶನದಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಭಾಷಣ ಮಾಡಿ ಅಮಿತ್ ಶಾ ಅವರನ್ನು ಕೊಲೆ ಆರೋಪಿ ಎಂದು ಬಣ್ಣಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ನವೀನ್ ಝಾ ಅವರು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು.

“ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿ ಬಿಜೆಪಿ ನಾಯಕತ್ವವು ಅಧಿಕಾರದ ಅಮಲಿನಲ್ಲಿರುವ ಸುಳ್ಳುಗಾರರು. ಬಿಜೆಪಿ ಕಾರ್ಯಕರ್ತರು ಕೊಲೆ ಆರೋಪಿಯನ್ನು  ಪಕ್ಷದ ಅಧ್ಯಕ್ಷರನ್ನಾಗಿ ಸ್ವೀಕರಿಸುತ್ತಾರೆ .ಆದರೆ ಅದೇ ಕಾಂಗ್ರೆಸ್ ಪಕ್ಷದಲ್ಲಿ ಇಂಥದನ್ನು ಜನರು ಎಂದಿಗೂ ಸ್ವೀಕರಿಸುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ:ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ: ಶರದ್ ಪವಾರ್, ಉದ್ಧವ್ ಠಾಕ್ರೆ ಜತೆ ರಾಹುಲ್ ಚರ್ಚೆ

ಅಮಿತ್ ಶಾ ಬಿಜೆಪಿ ಅಧ್ಯಕ್ಷರಾಗಿದ್ದಾಗ  ರಾಹುಲ್ ಗಾಂಧಿ ಈ  ಹೇಳಿಕೆ ನೀಡಿದ್ದರು. ನಾಲ್ಕು ವರ್ಷಗಳ ಹಿಂದೆ  ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು 2005 ರಲ್ಲಿ ಗುಜರಾತ್‌ನಲ್ಲಿ ಗೃಹ ಖಾತೆ ರಾಜ್ಯ ಸಚಿವರಾಗಿದ್ದ ಅವಧಿಯಲ್ಲಿ ಶಾ ಅವರನ್ನು ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು.

ಭಾರತ್ ಜೋಡೋ ನ್ಯಾಯ್ ಯಾತ್ರೆಯ ಬದ್ಧತೆಯಿಂದಾಗಿ ರಾಹುಲ್ ಗಾಂಧಿ ಅವರು ಜನವರಿ 18 ರಂದು ಎಂಪಿ-ಎಂಎಲ್ಎ ನ್ಯಾಯಾಲಯದಲ್ಲಿ ಹಿಂದಿನ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ.

2018ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಮೇ 8 ರಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ ಆರೋಪದ ಮೇಲೆ ಆಗಸ್ಟ್ 4 ರಂದು ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ದಾಖಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಸುಲ್ತಾನ್‌ಪುರದ ವಿಶೇಷ ನ್ಯಾಯಾಲಯವು ಫೆಬ್ರವರಿ 20 ರಂದು ಗಾಂಧಿ ಅವರಿಗೆ ಜಾಮೀನು ನೀಡಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 3:14 pm, Fri, 23 February 24