ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ರಾಜೀನಾಮೆ ಒತ್ತಾಯಿಸಿ ನಾಗ್ಪುರ್ನಲ್ಲಿ ಬಿಜೆಪಿ ಪ್ರತಿಭಟನೆ
ಅಗತ್ಯ ವಸ್ತುಗಳಾದ ಹಣ್ಣು, ಹಾಲು ತರಕಾರಿ ಅಂಗಡಿಗಳನ್ನು ಮಾತ್ರ ತೆರೆಯಬಹುದು ಎಂದು ನಾಗ್ಪುರ್ ಜಿಲ್ಲಾಡಳಿತ ಹೇಳಿತ್ತು. ಭಾನುವಾರ ಲಾಕ್ಡೌನ್ ಇದ್ದರೂ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಆದಾಗ್ಯೂ, ದೇಶ್ಮುಖ್ ಅವರ ನಿವಾಸದ ಹೊರಗೆ ಪೊಲೀಸ್ ಪಡೆ ನಿಯೋಜಿಸಲಾಗಿದೆ.
ನಾಗ್ಪುರ್: ನಾಗ್ಪುರ್ನಲ್ಲಿ ಕೊವಿಡ್ ಲಾಕ್ಡೌನ್ ನಡುವೆಯೇ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂದ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯವರಿಗೆ ಬರೆದ ಪತ್ರದಲ್ಲಿ ದೇಶ್ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು.ಈ ಹಿನ್ನೆಲೆಯಲ್ಲಿ ದೇಶ್ಮುಖ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ನಾಗ್ಪುರ್ ನಲ್ಲಿ ಈ ತಿಂಗಳ ಅಂತ್ಯದವರೆಗೆ ಕೊವಿಡ್ ನಿರ್ಬಂಧ ಹೇರಲಾಗಿದೆ. ಮಾರ್ಚ್ 15ರಂದು ಸಂಪೂರ್ಣ ಲಾಕ್ಡೌನ್ ಘೋಷಣೆಯಾಗಿದ್ದು ಮಾರ್ಚ್ 21ರವರೆಗೆ ಮುಂದುವರಿಯಲಿದೆ. ಅಗತ್ಯ ವಸ್ತುಗಳಾದ ಹಣ್ಣು, ಹಾಲು ತರಕಾರಿ ಅಂಗಡಿಗಳನ್ನು ಮಾತ್ರ ತೆರೆಯಬಹುದು ಎಂದು ನಾಗ್ಪುರ್ ಜಿಲ್ಲಾಡಳಿತ ಹೇಳಿತ್ತು. ಭಾನುವಾರ ಲಾಕ್ಡೌನ್ ಇದ್ದರೂ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಆದಾಗ್ಯೂ, ದೇಶ್ಮುಖ್ ಅವರ ನಿವಾಸದ ಹೊರಗೆ ಪೊಲೀಸ್ ಪಡೆ ನಿಯೋಜಿಸಲಾಗಿದೆ.
Nagpur: Police deployment outside the residence of Maharashtra Home Minister Anil Deshmukh pic.twitter.com/tzZEdhw1IR
— ANI (@ANI) March 21, 2021
Nagpur: Bharatiya Janata Party holds protest against Maharashtra Minister Anil Deshmukh
COVID19 restrictions have been imposed in the city amid rising cases. pic.twitter.com/jcHRm3rnkc
— ANI (@ANI) March 21, 2021
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಪತ್ರ ಬರೆದಿದ್ದಾಗಿ ಪರಮ್ವೀರ್ ಸಿಂಗ್ ಖಚಿತಪಡಿಸಿದ್ದಾರೆ. ಅನಿಲ್ ದೇಶ್ಮುಖ್ ಮುಂಬೈನ ಬಾರ್ ಮತ್ತು ರೆಸ್ಟೊರೆಂಟ್ಗಳಿಂದ 100 ಕೋಟಿ ಹಣವನ್ನು ವಸೂಲು ಮಾಡಬೇಕೆಂದು ಸಸ್ಪೆಂಡ್ ಆಗಿರುವ ಪೊಲಿಸ್ ಅಧಿಕಾರಿ ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು ಎಂದು ಪರಮ್ವೀರ್ ಸಿಂಗ್ ಪತ್ರದಲ್ಲಿ ಉಲ್ಲೇಖಿಸಿದ್ದರು. ನಂತರ ತಡರಾತ್ರಿ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ‘ಅದು ಪರಮ್ವೀರ್ ಸಿಂಗ್ ಬರೆದ ಪತ್ರವಲ್ಲ. ಪತ್ರದ ಮೂಲದ ಕುರಿತು ಅಧಿಕೃತತೆಯಿಲ್ಲ’ ಎಂದು ಹೇಳಿತ್ತು. ಆದರೆ ಇಂದು (ಮಾರ್ಚ್ 21) ಬೆಳಗ್ಗೆ ಪರಮ್ವೀರ್ ಸಿಂಗ್ ಸ್ವತಃ ತಾವೇ ಪತ್ರ ಬರೆದಿದ್ದಾಗಿ ಖಚಿತಪಡಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಚೇರಿಗೆ ಸಹಿ ಮಾಡಿದ ಪತ್ರವನ್ನು ಕಳಿಸಿದ್ದಾಗಿ ಅವರು ತಿಳಿಸಿದ್ದಾರೆ.
ಶಿವಸೇನೆಯ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದಲ್ಲಿ ಎನ್ಸಿಪಿ ಪಕ್ಷದ ಅನಿಲ್ ದೇಶ್ಮುಖ್ ಗೃಹ ಸಚಿವರಾಗಿದ್ದಾರೆ. ಸರ್ಕಾರದ ಚುಕ್ಕಾಣಿಯಲ್ಲಿ ಕುಳಿತಿರುವ ಇಬ್ಬರ ನಡುವೆ ಅಭಿಪ್ರಾಯ ಬೇಧ, ಸಣ್ಣಪುಟ್ಟ ವೈಮನಸ್ಸು ಉದ್ಭವಿಸಿದ ಉದಾಹರಣೆಗಳಿವೆ. ಗೃಹ ಸಚಿವ ಅನಿಲ್ ದೇಶ್ಮುಖ್ ಮೇಲೆ ಪರಮ್ವೀರ್ ಸಿಂಗ್ ಮಾಡಿರುವ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸುವ ಆರೋಪ ಮಹಾರಾಷ್ಟ್ರ ಸರ್ಕಾರಕ್ಕೆ ಕುತ್ತು ತರುವ ಶಕ್ತಿ ಹೊಂದಿದೆ. ಪರಮ್ವೀರ್ ಸಿಂಗ್ ಗೃಹ ಸಚಿವರ ಮೇಲೇ ಆರೋಪ ಮಾಡಿರುವುದು ಶಿವಸೇನೆ-ಎನ್ಸಿಪಿಯ ದೋಸ್ತಿ ಸರ್ಕಾರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ.
ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್ಮುಖ್ ಆದರೆ, ಪರಮ್ವೀರ್ ಸಿಂಗ್ ಮಾಡಿರುವ ಆರೋಪಗಳನ್ನು ಗೃಹ ಸಚಿವ ಅನಿಲ್ ದೇಶ್ಮುಖ್ ತಳ್ಳಿ ಹಾಕಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ವೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಹೇಳಿದ್ದಾರೆ. ಪರಮ್ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್ಮುಖ್ ತಿಳಿಸಿದ್ದಾರೆ.
ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್ವೀರ್ ಸಿಂಗ್ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..
Published On - 3:15 pm, Sun, 21 March 21