ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ ಒತ್ತಾಯಿಸಿ ನಾಗ್ಪುರ್​ನಲ್ಲಿ ಬಿಜೆಪಿ ಪ್ರತಿಭಟನೆ

|

Updated on: Mar 21, 2021 | 3:24 PM

ಅಗತ್ಯ ವಸ್ತುಗಳಾದ ಹಣ್ಣು, ಹಾಲು ತರಕಾರಿ ಅಂಗಡಿಗಳನ್ನು ಮಾತ್ರ ತೆರೆಯಬಹುದು ಎಂದು ನಾಗ್ಪುರ್ ಜಿಲ್ಲಾಡಳಿತ ಹೇಳಿತ್ತು. ಭಾನುವಾರ ಲಾಕ್​ಡೌನ್ ಇದ್ದರೂ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಆದಾಗ್ಯೂ, ದೇಶ್​ಮುಖ್ ಅವರ ನಿವಾಸದ ಹೊರಗೆ ಪೊಲೀಸ್ ಪಡೆ ನಿಯೋಜಿಸಲಾಗಿದೆ.

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ ಒತ್ತಾಯಿಸಿ ನಾಗ್ಪುರ್​ನಲ್ಲಿ ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆ
Follow us on

ನಾಗ್ಪುರ್: ನಾಗ್ಪುರ್​ನಲ್ಲಿ ಕೊವಿಡ್ ಲಾಕ್​ಡೌನ್ ನಡುವೆಯೇ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂದ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯವರಿಗೆ ಬರೆದ ಪತ್ರದಲ್ಲಿ ದೇಶ್​ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು.ಈ ಹಿನ್ನೆಲೆಯಲ್ಲಿ ದೇಶ್​ಮುಖ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ನಾಗ್ಪುರ್ ನಲ್ಲಿ ಈ ತಿಂಗಳ ಅಂತ್ಯದವರೆಗೆ ಕೊವಿಡ್ ನಿರ್ಬಂಧ ಹೇರಲಾಗಿದೆ. ಮಾರ್ಚ್ 15ರಂದು ಸಂಪೂರ್ಣ ಲಾಕ್​ಡೌನ್ ಘೋಷಣೆಯಾಗಿದ್ದು ಮಾರ್ಚ್ 21ರವರೆಗೆ ಮುಂದುವರಿಯಲಿದೆ. ಅಗತ್ಯ ವಸ್ತುಗಳಾದ ಹಣ್ಣು, ಹಾಲು ತರಕಾರಿ ಅಂಗಡಿಗಳನ್ನು ಮಾತ್ರ ತೆರೆಯಬಹುದು ಎಂದು ನಾಗ್ಪುರ್ ಜಿಲ್ಲಾಡಳಿತ ಹೇಳಿತ್ತು. ಭಾನುವಾರ ಲಾಕ್​ಡೌನ್ ಇದ್ದರೂ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಆದಾಗ್ಯೂ, ದೇಶ್​ಮುಖ್ ಅವರ ನಿವಾಸದ ಹೊರಗೆ ಪೊಲೀಸ್ ಪಡೆ ನಿಯೋಜಿಸಲಾಗಿದೆ.


ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಪತ್ರ ಬರೆದಿದ್ದಾಗಿ ಪರಮ್​ವೀರ್ ಸಿಂಗ್ ಖಚಿತಪಡಿಸಿದ್ದಾರೆ. ಅನಿಲ್ ದೇಶ್​ಮುಖ್ ಮುಂಬೈನ ಬಾರ್ ಮತ್ತು ರೆಸ್ಟೊರೆಂಟ್​ಗಳಿಂದ 100 ಕೋಟಿ ಹಣವನ್ನು ವಸೂಲು ಮಾಡಬೇಕೆಂದು ಸಸ್ಪೆಂಡ್ ಆಗಿರುವ ಪೊಲಿಸ್ ಅಧಿಕಾರಿ ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು ಎಂದು ಪರಮ್​ವೀರ್ ಸಿಂಗ್ ಪತ್ರದಲ್ಲಿ ಉಲ್ಲೇಖಿಸಿದ್ದರು. ನಂತರ ತಡರಾತ್ರಿ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ‘ಅದು ಪರಮ್​ವೀರ್ ಸಿಂಗ್ ಬರೆದ ಪತ್ರವಲ್ಲ. ಪತ್ರದ ಮೂಲದ ಕುರಿತು ಅಧಿಕೃತತೆಯಿಲ್ಲ’ ಎಂದು ಹೇಳಿತ್ತು. ಆದರೆ ಇಂದು (ಮಾರ್ಚ್ 21) ಬೆಳಗ್ಗೆ ಪರಮ್​ವೀರ್ ಸಿಂಗ್ ಸ್ವತಃ ತಾವೇ ಪತ್ರ ಬರೆದಿದ್ದಾಗಿ ಖಚಿತಪಡಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಚೇರಿಗೆ ಸಹಿ ಮಾಡಿದ ಪತ್ರವನ್ನು ಕಳಿಸಿದ್ದಾಗಿ ಅವರು ತಿಳಿಸಿದ್ದಾರೆ.

ಶಿವಸೇನೆಯ ಉದ್ಧವ್ ಠಾಕ್ರೆ  ನೇತೃತ್ವದ ಸರ್ಕಾರದಲ್ಲಿ ಎನ್​ಸಿಪಿ ಪಕ್ಷದ ಅನಿಲ್ ದೇಶ್​ಮುಖ್ ಗೃಹ ಸಚಿವರಾಗಿದ್ದಾರೆ.  ಸರ್ಕಾರದ ಚುಕ್ಕಾಣಿಯಲ್ಲಿ ಕುಳಿತಿರುವ ಇಬ್ಬರ ನಡುವೆ ಅಭಿಪ್ರಾಯ ಬೇಧ, ಸಣ್ಣಪುಟ್ಟ ವೈಮನಸ್ಸು ಉದ್ಭವಿಸಿದ ಉದಾಹರಣೆಗಳಿವೆ. ಗೃಹ ಸಚಿವ ಅನಿಲ್ ದೇಶ್​ಮುಖ್ ಮೇಲೆ ಪರಮ್​ವೀರ್ ಸಿಂಗ್ ಮಾಡಿರುವ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸುವ ಆರೋಪ ಮಹಾರಾಷ್ಟ್ರ ಸರ್ಕಾರಕ್ಕೆ ಕುತ್ತು ತರುವ ಶಕ್ತಿ ಹೊಂದಿದೆ. ಪರಮ್​ವೀರ್ ಸಿಂಗ್ ಗೃಹ ಸಚಿವರ ಮೇಲೇ ಆರೋಪ ಮಾಡಿರುವುದು ಶಿವಸೇನೆ-ಎನ್​ಸಿಪಿಯ ದೋಸ್ತಿ ಸರ್ಕಾರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ.

ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್
ಆದರೆ, ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳನ್ನು ಗೃಹ ಸಚಿವ ಅನಿಲ್ ದೇಶ್​ಮುಖ್ ತಳ್ಳಿ ಹಾಕಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಹೇಳಿದ್ದಾರೆ.
ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್​ಮುಖ್ ತಿಳಿಸಿದ್ದಾರೆ.

ಇದನ್ನೂ ಓದಿ:  ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು; ಉದ್ಧವ್ ಠಾಕ್ರೆಗೆ ಪತ್ರ ಬರೆದ ಪರಮ್​ವೀರ್ ಸಿಂಗ್

ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Published On - 3:15 pm, Sun, 21 March 21