AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Assembly Elections 2021: 6ನೇ ಹಂತದ ಚುನಾವಣೆಯಲ್ಲಿ ಮಧ್ಯಾಹ್ನ 1.30ರವರೆಗೆ ಶೇ 57.30 ಮತದಾನ

West Bengal Polls: ಪಶ್ಚಿ ಮ ಬಂಗಾಳದ 43 ವಿಧಾನಸಭಾ ಕ್ಷೇತ್ರಗಳಲ್ಲಿನ 14,480 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. 6ನೇ ಹಂತದ ಚುನಾವಣೆಯಲ್ಲಿ 306 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಗುರುವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭ ಆಗಿತ್ತು

West Bengal Assembly Elections 2021: 6ನೇ ಹಂತದ ಚುನಾವಣೆಯಲ್ಲಿ ಮಧ್ಯಾಹ್ನ 1.30ರವರೆಗೆ ಶೇ 57.30 ಮತದಾನ
ಪಶ್ಚಿಮ ಬಂಗಾಳದಲ್ಲಿ ಮತದಾನ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 22, 2021 | 2:39 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ 6ನೇ ಹಂತದ ಮತದಾನ ಪ್ರಕ್ರಿಯೆ ಮುಂದುವರಿದಿದ್ದು ಮಧ್ಯಾಹ್ನ 1.30ರವರೆಗೆ  ಶೇ  57.30 ಮತದಾನ ದಾಖಲಾಗಿದೆ.  11ಗಂಟೆಯ ಹೊತ್ತಿಗೆ ಶೇ37.27 ಮತದಾನ ದಾಖಲಾಗಿದ್ದು,  ಬೆಳಗ್ಗೆ 9.30ಕ್ಕೆ ಶೇ 17ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಗುರುವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭ ಆಗಿತ್ತು. ಉತ್ತರ ಪರಗಣ, ನಾಡಿಯಾ, ಉತ್ತರ ದಿನಜ್​ಪುರ್, ಪೂರ್ಬ ಬರ್ಧಮಾನ್ ಸೇರಿದಂತೆ 43 ವಿಧಾನಸಭಾ ಕ್ಷೇತ್ರಗಳಲ್ಲಿನ 14,480 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. 6ನೇ ಹಂತದ ಚುನಾವಣೆಯಲ್ಲಿ 306 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಭಾರತೀಯಜನತಾ ಪಕ್ಷದ ಉಪಾಧ್ಯಕ್ಷ ಮುಕುಲ್ ರಾಯ್, ತೃಣಮೂಲ ಕಾಂಗ್ರೆಸ್ ಪಕ್ಷದ ಸಚಿವ ಜ್ಯೋತಿಪ್ರಿಯೊ ಮಲ್ಲಿಕ್, ಚಂದ್ರಿಮಾ ಭಟ್ಟಾಚಾರ್ಯ,ಸಿಪಿಐ(ಎಂ) ನಾಯಕ ತನ್ಮಯ್ ಭಟ್ಟಾಚಾರ್ಯ ಮೊದಲಾದವರು ಸ್ಪರ್ಧಿಸುತ್ತಿದ್ದಾರೆ. ಅದೇ ವೇಳೆ ಬರಾಕ್​ಪೊರ್​ನಿಂದ ಕಣಕ್ಕಿಳಿದಿರುವ ಖ್ಯಾತ ಸಿನಿಮಾ ನಿರ್ದೇಶಕ ರಾಜ್ ಚಕ್ರವರ್ತಿ, ಕೃಷ್ಣಾನಗರ್ ಚುನಾವಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ನಟಿ ಕೌಶಿನಿ ಮುಖರ್ಜಿ ಈ ಹಂತದ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷಿಸಲಿದ್ದಾರೆ.

ಕೊವಿಡ್ -19 ಪ್ರಕರಣ ಏರಿಕೆಯಾಗುತ್ತಿರುವ ಮಧ್ಯೆಯೇ ಆರನೇ ಹಂತದ ಮತದಾನ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿ ಆಗಿದ್ದು, ಒಂದೇ ದಿನ 9,819 ಮಂದಿಗೆ ಕೊವಿಡ್ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 2.95 ಲಕ್ಷ ಕೋವಿಡ್ ಪ್ರಕರಣಗಳು ಮತ್ತು 2,023 ಸಾವು ದಾಖಲಾಗಿವೆ.

ಮತದಾನ ಮಾಡಲೆಂದೇ ಊರು ಸೇರಿದ ವಲಸೆ ಕಾರ್ಮಿಕರು ವಿವಿಧ ರಾಜ್ಯಗಳಲ್ಲಿ ನೆಲೆಸಿರುವ ಬಂಗಾಳ ಮೂಲದ ವಲಸೆ ಕಾರ್ಮಿಕರು ಮತದಾನ ಮಾಡಲು ಊರಿಗೆ ಬಂದಿದ್ದಾರೆ. ನಾನು ಸಮಯ ವ್ಯರ್ಥ ಮಾಡಲು ಬಯಸುವುದಿಲ್ಲ. ನಾನು 15ದಿನಗಳ ಕೆಲಸ ಬಿಟ್ಟು ಊರಿಗೆ ಬಂದಿದ್ದೇನೆ. ಫಲಿತಾಂಶ ಪ್ರಕಟವಾದ ಬಳಿಕವೇ ನಾವು ಮೇ 5ಕ್ಕೆ ಇಲ್ಲಿಂದ ವಾಪಸ್ ಹೋಗುವುದು ಎಂದು ಮಾಲದಾಜಿಲ್ಲೆಯ ನಿವಾಸಿ ವಲಸೆಕಾರ್ಮಿಕ ರಾಜ್ ಕುಮಾರ್ ಚೌಧರಿ ಹೇಳಿದ್ದಾರೆ.

ಕಂಚ್ರಪರದಲ್ಲಿ ಮುಕುಲ್ ರಾಯ್ ಮತದಾನ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರು ಕಂಚ್ರಪರ ಮುನ್ಸಿಪಲ್ ಪಾಲಿಟೆಕ್ನಿಕ್ ಹೈಸ್ಕೂಲ್ನ 141ನೇ ಮತಗಟ್ಟೆಯಲ್ಲಿಮತ ಚಲಾಯಿಸಿದ್ದಾರೆ.

ಉತ್ತರ ದಿನಜ್​ಪುರ್ ನಲ್ಲಿ ಮತಗಟ್ಟೆಯ ಮತಯಂತ್ರದಲ್ಲಿ ತಾಂತ್ರಿಕ ಸಮಸ್ಯೆ ಉತ್ತರ ದಿನಜ್​ಪುರ್ ರಾಯ್ ಗಂಜ್ ಕೊರೊನೇಷನ್ ಹೈಸ್ಕೂಲ್ ನ 134ನೇ ಮತಗಟ್ಟೆಯ ಮತಯಂತ್ರದಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದು ಕೆಲ ಹೊತ್ತು ಮತದಾನಕ್ಕೆ ಸಮಸ್ಯೆಯಾಗಿದೆ.

ಇದನ್ನೂ ಓದಿ: ವಿಶ್ಲೇಷಣೆ: ಪಶ್ಚಿಮ ಬಂಗಾಳ ಕದನ ಕಣ: 6 ನೇಹಂತದ ಚುನಾವಣೆಯಲ್ಲಿ ಬಿಜೆಪಿ, ಟಿಎಂಸಿ ನಡುವೆ ನಡೆಯಲಿದೆ ಪ್ರಬಲ ಪೈಪೋಟಿ

(Despite Covid surge 6th Phase of West Bengal Assembly polls voter turnout till 1.30 pm 57.30 percent)

Published On - 2:11 pm, Thu, 22 April 21

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್